Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 45:5 - ಕನ್ನಡ ಸತ್ಯವೇದವು C.L. Bible (BSI)

5 ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ವ್ಯಸನಪಡಬೇಡಿ, ನಿಮ್ಮನ್ನೇ ನಿಂದಿಸಿಕೊಳ್ಳಬೇಡಿ. ಏಕೆಂದರೆ ಜೀವರಕ್ಷಣೆಗಾಗಿಯೇ ದೇವರು ನನ್ನನ್ನು ನಿಮಗೆ ಮುಂಚಿತವಾಗಿ ಇಲ್ಲಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವು ನನ್ನನ್ನು ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಈಗ ಚಿಂತಿಸಬೇಡಿ, ನೀವು ಮಾಡಿದ್ದಕ್ಕೆ ದುಃಖವನ್ನೂ ಪಡಬೇಡಿ. ನಾನು ಇಲ್ಲಿಗೆ ಬರಬೇಕೆಂಬುದು ದೇವರ ಯೋಜನೆಯಾಗಿತ್ತು. ನಾನು ನಿಮ್ಮನ್ನು ರಕ್ಷಿಸಲು ಇಲ್ಲಿಗೆ ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟುಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 45:5
21 ತಿಳಿವುಗಳ ಹೋಲಿಕೆ  

ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದರು. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ.


ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.


ಆಗ ಯೇಸು, “ಪಿತನೇ, ಇವರನ್ನು ಕ್ಷಮಿಸಿ; ತಾವೇನು ಮಾಡುತ್ತಿರುವರೆಂದು ಇವರು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಬಟ್ಟೆಗಳನ್ನು ಚೀಟುಹಾಕಿ ಹಂಚಿಕೊಂಡರು.


ಅದಕ್ಕೆ ಅವರು, ನಮ್ಮ ಪ್ರಾಣಗಳನ್ನು ಉಳಿಸಿದ್ದೀರಿ. ನಮ್ಮ ದಣಿಗಳಾದ ನಿಮ್ಮ ದಯೆ ನಮ್ಮ ಮೇಲಿರಲಿ; ನಾವು ಫರೋಹನಿಗೆ ಊಳಿಗದವರಾಗಿರುತ್ತೇವೆ,” ಎಂದರು.


ಸೈತಾನನ ಕುತಂತ್ರಗಳನ್ನು ನಾವು ಅರಿಯದವರಲ್ಲ; ಅವನ ಕೈ ಮೇಲಾಗದಂತೆ ನಾವು ನೋಡಿಕೊಳ್ಳಬೇಕು.


ಈಗ ನೀವು ಅವನನ್ನು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ ಅವನು ಅತೀವ ದುಃಖದಲ್ಲಿಯೇ ಮುಳುಗಿಹೋದಾನು.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.


ನೀನು ಅದನ್ನು ಗುಪ್ತವಾಗಿ ಮಾಡಿದೆ. ನಾನು ಹೇಳುವ ಮಾತಾದರೋ ಇಸ್ರಯೇಲರೆಲ್ಲರ ಮುಂದೆ ಬಹಿರಂಗವಾಗಿ ನೆರವೇರುವುದು,’” ಎಂದನು.


ಮಾರನೆಯ ದಿನ ಬೆಳಿಗ್ಗೆ ಅವರೆಲ್ಲರು ಎದ್ದು ಸರ್ವೇಶ್ವರನನ್ನು ಆರಾಧಿಸಿ ರಾಮಾದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆ ಸರ್ವೇಶ್ವರನ ಅನುಗ್ರಹದಿಂದ ಗರ್ಭಿಣಿ ಆದಳು.


ಸ್ವಲ್ಪಕಾಲ ಒನೇಸಿಮನು ನಿನ್ನಿಂದ ದೂರವಿದ್ದುದಕ್ಕೆ ಕಾರಣ ಆತನು ಸದಾಕಾಲ ನಿನ್ನವನಾಗುವುದಕ್ಕೋ ಏನೋ.


ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.


ಆದರೆ ಜೋಸೆಪನು ಅವರಿಗೆ, “ಹೆದರಬೇಡಿ; ನಾನು ದೇವರ ಸ್ಥಾನದಲ್ಲಿ ಇಲ್ಲ;


ಆದುದರಿಂದ ನೀವು ಸ್ವಲ್ಪವೂ ಸಂಕೋಚಪಡಬೇಕಾಗಿಲ್ಲ. ನಾನು ನಿಮ್ಮನ್ನೂ ನಿಮಗೆ ಸೇರಿದ ಎಲ್ಲರನ್ನೂ ಪೋಷಿಸುತ್ತೇನೆ,” ಎಂದು ಹೇಳಿ ಅವರನ್ನು ಸಂತೈಸಿ, ಅವರ ಸಂಗಡ ಪ್ರೀತಿಯಿಂದ ಮಾತಾಡಿದನು.


ನೀನೀಗ ಸುಮ್ಮನಿದ್ದುಬಿಟ್ಟರೆ ಬೇರಾವ ಕಡೆಯಿಂದಲೂ ಯೆಹೂದ್ಯರಿಗೆ ಸಹಾಯವಾಗಲಿ, ವಿಮೋಚನೆಯಾಗಲಿ ದೊರಕದು. ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗಿಹೋಗುವೆ. ಇದಲ್ಲದೆ ಇಂಥ ಸಂದರ್ಭಕ್ಕಾಗಿಯೇ ನೀನು ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು?” ಎಂದು ಹೇಳಿಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು