Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:1 - ಕನ್ನಡ ಸತ್ಯವೇದವು C.L. Bible (BSI)

1 ಯಕೋಬನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು ಪ್ರಯಾಣಮಾಡಿ ಬೇರ್ಷೆಬಕ್ಕೆ ಬಂದನು. ಅಲ್ಲಿ ತನ್ನ ತಂದೆ ಇಸಾಕನ ದೇವರಿಗೆ ಬಲಿದಾನಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು, ಪ್ರಯಾಣ ಮಾಡಿ ಬೇರ್ಷೆಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು ಪ್ರಯಾಣಮಾಡಿ ಬೇರ್ಷಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದ್ದರಿಂದ ಇಸ್ರೇಲನು ಈಜಿಪ್ಟಿಗೆ ಪ್ರಯಾಣ ಬೆಳೆಸಿದನು. ಅವನು ಬೇರ್ಷೆಬಕ್ಕೆ ಹೋಗಿ ತನ್ನ ತಂದೆಯಾದ ಇಸಾಕನ ದೇವರನ್ನು ಆರಾಧಿಸಿ ಯಜ್ಞಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತೆಗೆದುಕೊಂಡು ಬೇರ್ಷೆಬಕ್ಕೆ ಬಂದು, ತನ್ನ ತಂದೆ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:1
23 ತಿಳಿವುಗಳ ಹೋಲಿಕೆ  

ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಯಕೋಬನು ಖಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು.


ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.


ಹೀಗೆ ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದ ಕಾರಣ, ಆ ಸ್ಥಳಕ್ಕೆ ‘ಬೇರ್ಷೆಬ’ ಎಂದು ಹೆಸರಾಯಿತು.


ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.


ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ಸರ್ವೇಶ್ವರ ಅವನನ್ನು ತಮ್ಮ ಪ್ರವಾದಿಯನ್ನಾಗಿ ನೇಮಿಸಿಕೊಂಡರು. ಈ ಸಂಗತಿ ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲ ಇಸ್ರಯೇಲರಿಗೆ ತಿಳಿಯಿತು.


ಯಕೋಬನು ತನ್ನ ಅಣ್ಣನ ಬಳಿಯಿಂದ ಓಡಿಹೋಗುವಾಗ ದೇವರು ಅವನಿಗೆ ಪ್ರತ್ಯಕ್ಷವಾದುದು ಅಲ್ಲಿಯೇ. ಎಂದೇ ಅವನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿ, ಆ ಸ್ಥಳಕ್ಕೆ ‘ಏಲ್ ಬೇತೇಲ್’ ಎಂದು ಹೆಸರಿಟ್ಟನು.


ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ಕಡೆಯೆಲ್ಲ ನನ್ನೊಂದಿಗಿದ್ದ ದೇವರಿಗೆ ಅಲ್ಲೊಂದು ಬಲಿಪೀಠವನ್ನು ಕಟ್ಟಿಸುತ್ತೇನೆ,” ಎಂದು ಹೇಳಿದನು.


ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.


ಅಬ್ರಹಾಮನ ದೇವರು. ನಾಹೋರನ ದೇವರು, ಅವರ ತಂದೆಗಳ ದೇವರು ನಿನಗೂ ನನಗೂ ನ್ಯಾಯ ತೀರಿಸಲಿ,” ಎಂದನು. ಅದೇ ಮೇರೆಗೆ ಯಕೋಬನು, ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.


ಅಬ್ರಹಾಮನು ಕಣ್ಣೆತ್ತಿ ನೋಡಿದ. ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಅದನ್ನು ದಹನಬಲಿಯನ್ನಾಗಿ ಅರ್ಪಿಸಿದ.


ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.


ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು.


ಅಂತೆಯೇ, ಹೇಬೆಲನು ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಸಮರ್ಪಿಸಿದನು.


ಇವರ ಒಟ್ಟು ಸಂಖ್ಯೆ ಎಪ್ಪತ್ತೈದು. ಯಕೋಬನು ಈಜಿಪ್ಟಿಗೆ ಹೋದನು. ಅವನೂ ನಮ್ಮ ಪಿತಾಮಹರೂ ಅಲ್ಲೇ ನಿಧನರಾದರು.


ಕೊನೆಗೆ ಯಕೋಬನು, “ನನ್ನ ಮಗ ಜೋಸೆಫ್ ಜೀವದಿಂದಿದ್ದಾನೆ, ನನಗೆ ಅಷ್ಟೇ ಸಾಕು! ನಾನು ಸಾಯುವುದಕ್ಕೆ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು.


ಇಸಾಕನ ವಂಶದವರ ಎತ್ತರವಾದ ಪೂಜಾಮಂದಿರಗಳು ನೆಲಸಮವಾಗುವುವು. ಇಸ್ರಯೇಲಿನ ಪವಿತ್ರಾಲಯಗಳು ಪಾಳುಬೀಳುವುವು. ಯಾರೊಬ್ಬಾಮನ ಮನೆತನ ಕತ್ತಿಗೆ ತುತ್ತಾಗುವುದು,” ಎಂದರು.


ಇಸಾಕನಿಗೆ ಯಕೋಬ್ ಮತ್ತು ಏಸಾವ್ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿದೆ. ಏಸಾವನಿಗೆ ಸೇಯೀರ್ ಬೆಟ್ಟವನ್ನು ಸ್ವಂತ ಸೊತ್ತಾಗಿ ದಯಪಾಲಿಸಿದೆ. ಯಕೋಬನಾದರೋ ತನ್ನ ಮಕ್ಕಳ ಸಮೇತ ಈಜಿಪ್ಟ್ ದೇಶಕ್ಕೆ ಹೋದ.


ಅವನ ಹಿರಿಯ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರ ನ್ಯಾಯಾಸನವು ಬೇರ್ಷೆಬದಲ್ಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು