Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:29 - ಕನ್ನಡ ಸತ್ಯವೇದವು C.L. Bible (BSI)

29 ಜೋಸೆಫನು ರಥವನ್ನೇರಿ ತನ್ನ ತಂದೆ ಯಕೋಬನನ್ನು ಭೇಟಿಯಾಗಲು ಗೋಷೆನಿಗೆ ಬಂದನು. ತಂದೆಯನ್ನು ಕಂಡೊಡನೆ ಅವರ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಅವರು ಗೋಷೆನ್‍ಸೀಮೆಗೆ ಬಂದಾಗ ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವದಕ್ಕೋಸ್ಕರ ಗೋಷೆನಿಗೆ ಹೋಗಿ ಅವನಿಗೆ ಕಾಣಿಸಿಕೊಂಡು ತಂದೆಯನ್ನು ಬಹಳ ಹೊತ್ತಿನವರೆಗೆ ಅಪ್ಪಿಕೊಂಡು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ತನ್ನ ತಂದೆಯು ಸಮೀಪಿಸುತ್ತಿರುವುದು ಯೋಸೇಫನಿಗೆ ತಿಳಿಯಿತು. ಆದ್ದರಿಂದ ಅವನು ತನ್ನ ತಂದೆಯಾದ ಇಸ್ರೇಲನನ್ನು ಗೋಷೆನಿನಲ್ಲಿ ಭೇಟಿಯಾಗಲು ತನ್ನ ರಥವನ್ನು ಸಿದ್ಧಪಡಿಸಿಕೊಂಡು ಹೋದನು. ಯೋಸೇಫನು ತನ್ನ ತಂದೆಯನ್ನು ಕಂಡಾಗ ಅವನನ್ನು ಅಪ್ಪಿಕೊಂಡು ಬಹಳ ಹೊತ್ತಿನ ತನಕ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು, ತನ್ನ ತಂದೆ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋದನು. ಯೋಸೇಫನು ತನ್ನ ತಂದೆಯನ್ನು ಸಂಧಿಸಿ, ಅಪ್ಪಿಕೊಂಡು, ಬಹಳ ಹೊತ್ತಿನವರೆಗೆ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:29
11 ತಿಳಿವುಗಳ ಹೋಲಿಕೆ  

ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ.


ಆದರೆ ಏಸಾವನು ಅವನನ್ನು ಎದುರುಗೊಳ್ಳಲು ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು.


ಅನಂತರ ಅವರು ಅವನನ್ನು ತಬ್ಬಿಕೊಂಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಾಕಾರವಾಗಿ ಹರಿಯುತ್ತಿತ್ತು.


ಯಕೋಬನ ಮಕ್ಕಳು ಅದೇ ಮೇರೆಗೆ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಜೋಸೆಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.


ನಿನ್ನ ಸಹೋದರರಿಗೆ ಈ ಆಜ್ಞೆಯನ್ನೂ ತಿಳಿಸು: ‘ನೀವು ನಿಮ್ಮ ಮಡದಿ ಮಕ್ಕಳನ್ನು ಕರೆದುತರಲು ಈಜಿಪ್ಟ್ ದೇಶದ ಬಂಡಿಗಳನ್ನು ತೆಗೆದುಕೊಂಡುಹೋಗಿರಿ: ನಿಮ್ಮ ತಂದೆಯನ್ನು ತಂದು ಸೇರಿಸಿರಿ.


ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ, “ಈತನಿಗೆ ಅಡ್ಡಬೀಳಿ,” ಎಂದು ಪ್ರಕಟನೆ ಮಾಡಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶಕ್ಕೆ ಮುಖ್ಯಮಂತ್ರಿಯನ್ನಾಗಿ ನೇಮಿಸಿದನು.


ಜೋಸೆಫನಿಗೆ ತಮ್ಮನನ್ನು ನೋಡಿದ ಮೇಲೆ ಕರುಳು ಕರಗಿತು. ಕಣ್ಣೀರನ್ನು ತಡೆಯಲಾಗದೆ ಒಳ ಅರಮನೆಗೆ ತ್ವರೆಯಾಗಿ ಹೋಗಿ ಅಲ್ಲಿ ಅತ್ತನು.


ಅವನು ಗಟ್ಟಿಯಾಗಿ ಅತ್ತದ್ದು ಈಜಿಪ್ಟಿನವರಿಗೆ ಕೇಳಿಸಿತು; ಫರೋಹನ ಮನೆಯವರಿಗೂ ಆ ಸುದ್ದಿ ಮುಟ್ಟಿತು.


ಯಕೋಬನು ಜೋಸೆಫನಿಗೆ, “ಇನ್ನು ನಾನು ಸಂತೃಪ್ತಿಯಾಗಿ ಸಾಯುವೆನು. ನೀನು ಇನ್ನೂ ಬದುಕಿರುವೆಯೆಂದು ಕೇಳಿದ್ದಾಯಿತು; ನಿನ್ನ ಮುಖವನ್ನು ಕಣ್ಣಾರೆ ನೋಡಿದ್ದಾಯಿತು,” ಎಂದನು.


ಅವನ ಸಂಗಡ ರಥಗಳೂ ಕುದುರೆಸವಾರರೂ ಸಹ ಇದ್ದರು. ಹೀಗೆ ದೊಡ್ಡ ಜನಸಮೂಹವೇ ಅವನೊಂದಿಗೆ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು