ಆದಿಕಾಂಡ 46:30 - ಕನ್ನಡ ಸತ್ಯವೇದವು C.L. Bible (BSI)30 ಯಕೋಬನು ಜೋಸೆಫನಿಗೆ, “ಇನ್ನು ನಾನು ಸಂತೃಪ್ತಿಯಾಗಿ ಸಾಯುವೆನು. ನೀನು ಇನ್ನೂ ಬದುಕಿರುವೆಯೆಂದು ಕೇಳಿದ್ದಾಯಿತು; ನಿನ್ನ ಮುಖವನ್ನು ಕಣ್ಣಾರೆ ನೋಡಿದ್ದಾಯಿತು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇಸ್ರಾಯೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ನೋಡಿ, ನೀನು ಇನ್ನೂ ಜೀವದಿಂದಿರುವುದನ್ನು ಕಂಡು ಸಂತೃಪ್ತನಾಗಿ ಸಾಯುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇಸ್ರಾಯೇಲನು ಯೋಸೇಫನಿಗೆ - ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳುಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆಗ ಇಸ್ರೇಲನು ಯೋಸೇಫನಿಗೆ, “ನಾನು ನಿನ್ನ ಮುಖವನ್ನು ಕಣ್ಣಾರೆ ಕಂಡದ್ದರಿಂದ ನೀನು ಬದುಕಿರುವುದು ನನಗೆ ನಿಶ್ಚಯವಾಯಿತು. ನಾನು ಈಗ ಸಮಾಧಾನದಿಂದ ಸಾಯವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಂಡಿದ್ದರಿಂದ ಇನ್ನು ನಾನು ಮರಣ ಹೊಂದಲು ಸಿದ್ಧನಾಗಿದ್ದೇನೆ. ನೀನು ಇನ್ನೂ ಜೀವದಿಂದ ಇದ್ದೀಯೆ,” ಎಂದನು. ಅಧ್ಯಾಯವನ್ನು ನೋಡಿ |