Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:31 - ಕನ್ನಡ ಸತ್ಯವೇದವು C.L. Bible (BSI)

31 ತರುವಾಯ ಜೋಸೆಫನು ತನ್ನ ಅಣ್ಣತಮ್ಮಂದಿರನ್ನೂ ತಂದೆಯ ಮನೆಯವರೆಲ್ಲರನ್ನೂ ನೋಡಿ, “ನಾನು ಫರೋಹನ ಸನ್ನಿಧಿಗೆ ಹೋಗಿ ನೀವು ಬಂದಿರುವ ಸಮಾಚಾರವನ್ನು ತಿಳಿಸಿ, ‘ಕಾನಾನ್ ನಾಡಿನಲ್ಲಿದ್ದ ನನ್ನ ಸಹೋದರರೂ ನನ್ನ ತಂದೆಯೂ, ಕುಟುಂಬದವರೂ ನನ್ನ ಬಳಿಗೆ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಯೋಸೇಫನು ತನ್ನ ಅಣ್ಣತಮ್ಮಂದಿರನ್ನೂ, ತಂದೆಯ ಮನೆಯವರೆಲ್ಲರನ್ನು ಕುರಿತು “ನಾನು ಹೋಗಿ ಫರೋಹನ ಸನ್ನಿಧಾನದಲ್ಲಿ ನೀವು ಬಂದ ವರ್ತಮಾನವನ್ನು ತಿಳಿಸಿ, ಕಾನಾನ್‌ ದೇಶದಲ್ಲಿದ್ದ ನನ್ನ ಅಣ್ಣತಮ್ಮಂದಿರೂ, ತನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಯೋಸೇಫನು ತನ್ನ ಅಣ್ಣ ತಮ್ಮಂದಿರಿಗೂ ತಂದೆಯ ಮನೆಯವರೆಲ್ಲರಿಗೂ - ನಾನು ಹೋಗಿ ಫರೋಹನ ಸನ್ನಿಧಾನದಲ್ಲಿ ನೀವು ಬಂದ ವರ್ತಮಾನವನ್ನು ತಿಳಿಸಿ - ಕಾನಾನ್‍ದೇಶದಲ್ಲಿದ್ದ ನನ್ನ ಅಣ್ಣತಮ್ಮಂದಿರೂ ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೋಸೇಫನು ತನ್ನ ಸಹೋದರರಿಗೂ ತನ್ನ ತಂದೆಯ ಕುಟುಂಬದವರಿಗೂ, “ನಾನು ಫರೋಹನ ಬಳಿಗೆ ಹೋಗಿ, ‘ನನ್ನ ಸಹೋದರರು ಮತ್ತು ನನ್ನ ತಂದೆಯ ಕುಟುಂಬದವರು ಕಾನಾನ್ ದೇಶವನ್ನು ಬಿಟ್ಟು ನನ್ನ ಬಳಿಗೆ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೋಸೇಫನು ತನ್ನ ಸಹೋದರರಿಗೂ, ತನ್ನ ತಂದೆಯ ಮನೆಯವರಿಗೂ, “ನಾನು ಹೋಗಿ ಫರೋಹನಿಗೆ, ಕಾನಾನ್ ದೇಶದಲ್ಲಿದ್ದ ನನ್ನ ಸಹೋದರರೂ, ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:31
6 ತಿಳಿವುಗಳ ಹೋಲಿಕೆ  

ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆಪಡಲಿಲ್ಲ.


ಅವರು ತನ್ನಂತೆಯೇ ಗುಡಾರಮಾಡುವ ಕಸುಬಿನವರಾಗಿದ್ದರಿಂದ ಅವರಲ್ಲೇ ತಂಗಿದ್ದು ಅವರೊಡನೆ ಕೆಲಸಮಾಡುತ್ತಾ ಬಂದನು.


ಯಕೋಬನು ಜೋಸೆಫನಿಗೆ, “ಇನ್ನು ನಾನು ಸಂತೃಪ್ತಿಯಾಗಿ ಸಾಯುವೆನು. ನೀನು ಇನ್ನೂ ಬದುಕಿರುವೆಯೆಂದು ಕೇಳಿದ್ದಾಯಿತು; ನಿನ್ನ ಮುಖವನ್ನು ಕಣ್ಣಾರೆ ನೋಡಿದ್ದಾಯಿತು,” ಎಂದನು.


ಅವರು ಕುರಿಕಾಯುವವರು, ಮಂದೆ ಮೇಯಿಸುವುದು ಅವರ ಕಸುಬು. ಅವರು ತಮ್ಮ ಕುರಿದನಗಳನ್ನೂ ತಮಗಿದ್ದ ಎಲ್ಲವನ್ನೂ ತಂದಿದ್ದಾರೆ,’ ಎಂದು ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು