Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:32 - ಕನ್ನಡ ಸತ್ಯವೇದವು C.L. Bible (BSI)

32 ಅವರು ಕುರಿಕಾಯುವವರು, ಮಂದೆ ಮೇಯಿಸುವುದು ಅವರ ಕಸುಬು. ಅವರು ತಮ್ಮ ಕುರಿದನಗಳನ್ನೂ ತಮಗಿದ್ದ ಎಲ್ಲವನ್ನೂ ತಂದಿದ್ದಾರೆ,’ ಎಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ಕುರಿಕಾಯುವವರು, ಪಶುಪಾಲನೆ ಮಾಡುವುದು ಅವರ ಕಸುಬು; ಅವರು ತಮ್ಮ ಕುರಿದನಗಳನ್ನೂ ತಮಗಿರುವ ಸರ್ವಸ್ವವನ್ನೂ ತಂದಿದ್ದಾರೆ” ಎಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅವರು ಪಶುಪಾಲಕರಾದದ್ದರಿಂದ ಕುರಿಕಾಯುವವರಿಗೆ ಸಂಬಂಧಪಟ್ಟವರು; ಅವರು ತಮ್ಮ ಕುರಿದನಗಳನ್ನೂ ತಮಗಿರುವ ಸರ್ವಸ್ವವನ್ನೂ ತಂದಿದ್ದಾರೆ ಎಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಈ ಕುಟುಂಬವು ಕುರುಬರ ಕುಟುಂಬ. ಇವರು ಯಾವಾಗಲೂ ದನಕರುಗಳ ಮತ್ತು ಆಡುಕುರಿಗಳ ಮಂದೆಗಳನ್ನು ಸಾಕುವವರು. ಇವರು ತಮ್ಮ ಎಲ್ಲಾ ಪಶುಗಳನ್ನು ಮತ್ತು ತಾವು ಹೊಂದಿರುವ ಪ್ರತಿಯೊಂದನ್ನು ತಮ್ಮೊಂದಿಗೆ ತಂದಿದ್ದಾರೆ’ ಎಂದು ತಿಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಕುರಿಕಾಯುವವರು, ಅವರಿಗೆ ಪಶುಗಳು ಇವೆ. ತಮ್ಮ ಕುರಿದನಗಳನ್ನೂ, ತಮಗಿದ್ದದ್ದೆಲ್ಲವನ್ನೂ ತೆಗೆದುಕೊಂಡು ಬಂದಿದ್ದಾರೆ, ಎಂದು ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:32
17 ತಿಳಿವುಗಳ ಹೋಲಿಕೆ  

ಫರೋಹನು, “ನಿಮ್ಮ ಕಸುಬು ಏನು”, ಎಂದು ಕೇಳಲು ಅವರು, “ನಿಮ್ಮ ಸೇವಕರಾದ ನಾವು ನಮ್ಮ ಪೂರ್ವಜರ ಪದ್ಧತಿಯ ಮೇರೆಗೆ ಕುರಿ ಕಾಯುವವರು;


ಬದಲಿಗೆ, ತಾನು ಪ್ರವಾದಿಯಲ್ಲ, ಹೊಲದಲ್ಲಿ ಕೆಲಸಮಾಡುವವನು, ಚಿಕ್ಕಂದಿನಿಂದ ನಾನು ಕೂಲಿಯಾಳು ಎಂದುಕೊಳ್ಳುವನು.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಹೀರಾಮನು ಸಮುದ್ರಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.


ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವುದಕ್ಕೆ ಬೆತ್ಲೆಹೇಮಿಗೆ ಹೋದನು.


ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.


'ಚಿಕ್ಕಂದಿನಿಂದ ಇಂದಿನವರೆಗೂ ನಿಮ್ಮ ಸೇವಕರಾದ ನಾವು, ನಮ್ಮ ಪೂರ್ವಜರ ಪದ್ಧತಿಯಂತೆ ಮಂದೆ ಮೇಯಿಸುವವರು,’ ಎಂದು ಹೇಳಿರಿ. ಆಗ ಗೋಷೆನ್ ಪ್ರಾಂತ್ಯವನ್ನು ನಿಮ್ಮ ನಿವಾಸಕ್ಕೆ ನೇಮಿಸುವನು - ಏಕೆಂದರೆ ಕುರಿ ಕಾಯುವವರೆಂದರೆ ಈಜಿಪ್ಟಿಯರಿಗೆ ಹಿಡಿಸದು,” ಎಂದು ಹೇಳಿದನು.


ಗೋಷೆನ್ ಪ್ರಾಂತ್ಯದಲ್ಲಿ ನನ್ನ ಬಳಿಯಲ್ಲೇ ನೀವೂ ನಿಮ್ಮ ಮಕ್ಕಳೂ ಮೊಮ್ಮಕ್ಕಳೂ ದನ, ಕುರಿ ಮೊದಲಾದ ಆಸ್ತಿಪಾಸ್ತಿಗಳ ಸಮೇತ ವಾಸಮಾಡಬಹುದು.


ಆಗ ಜೋಸೆಫನಿಗೆ ಹದಿನೇಳು ವರ್ಷ, ಇನ್ನೂ ಯುವಕ, ತನ್ನ ಅಣ್ಣಂದಿರ ಜೊತೆಯಲ್ಲಿ, ಅಂದರೆ ತನ್ನ ಮಲತಾಯಿಯರಾದ ಬಿಲ್ಹಾ, ಜಿಲ್ಪಾ ಎಂಬುವರ ಮಕ್ಕಳ ಜೊತೆಯಲ್ಲಿ, ಆಡುಕುರಿಗಳನ್ನು ಮೇಯಿಸುತ್ತಿದ್ದ, ಅಣ್ಣಂದಿರು ಏನಾದರೂ ತಪ್ಪಿ ನಡೆದರೆ ತಂದೆಗೆ ವರದಿ ಮಾಡುತ್ತಿದ್ದ.


ಮೆಸಪೊಟೇಮಿಯಾದಲ್ಲಿ ತಾನು ಗಳಿಸಿಕೊಂಡಿದ್ದ ಆಸ್ತಿಯನ್ನೆಲ್ಲ ತೆಗೆದುಕೊಂಡು, ಜಾನುವಾರುಗಳನ್ನೆಲ್ಲ ಅಟ್ಟಿಕೊಂಡು ಕಾನಾನ್ ನಾಡಿಗೆ, ತನ್ನ ತಂದೆ ಇಸಾಕನ ಬಳಿಗೆ ಹೊರಟನು.


ನೋಹನು ವ್ಯವಸಾಯಗಾರ. ದ್ರಾಕ್ಷಿತೋಟ ಮಾಡುವುದನ್ನು ಪ್ರಾರಂಭಿಸಿದವನು ಅವನೇ.


ತರುವಾಯ ಅವನ ತಮ್ಮನಾದ ಹೇಬೆಲನಿಗೆ ಜನ್ಮವಿತ್ತಳು. ಹೇಬೆಲನು ಕುರಿಗಾಹಿಯಾದನು; ಕಾಯಿನನು ವ್ಯವಸಾಯಗಾರನಾದನು.


ಅನಂತರ ಸಮುವೇಲನು ಜೆಸ್ಸೆಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇಮಂದಿಯೋ?” ಎಂದು ಕೇಳಿದನು. ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿದ್ದಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ,” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಇಲ್ಲಿಗೆ ಬರಮಾಡು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು,” ಎಂದು ಹೇಳಿದನು. ಜೆಸ್ಸೆಯನು ಅವನನ್ನು ಕರೆದುತರಿಸಿದನು.


ತರುವಾಯ ಜೋಸೆಫನು ತನ್ನ ಅಣ್ಣತಮ್ಮಂದಿರನ್ನೂ ತಂದೆಯ ಮನೆಯವರೆಲ್ಲರನ್ನೂ ನೋಡಿ, “ನಾನು ಫರೋಹನ ಸನ್ನಿಧಿಗೆ ಹೋಗಿ ನೀವು ಬಂದಿರುವ ಸಮಾಚಾರವನ್ನು ತಿಳಿಸಿ, ‘ಕಾನಾನ್ ನಾಡಿನಲ್ಲಿದ್ದ ನನ್ನ ಸಹೋದರರೂ ನನ್ನ ತಂದೆಯೂ, ಕುಟುಂಬದವರೂ ನನ್ನ ಬಳಿಗೆ ಬಂದಿದ್ದಾರೆ.


ಫರೋಹನು ನಿಮ್ಮನ್ನು ಕರೆಸಿ, ‘ನಿಮ್ಮ ಕಸುಬು ಏನೆಂದು ಕೇಳಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು