Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:5 - ಕನ್ನಡ ಸತ್ಯವೇದವು C.L. Bible (BSI)

5 ಬಳಿಕ ಯಕೋಬನು ಬೇರ್ಷೆಬದಿಂದ ಪ್ರಯಾಣ ಮಾಡಿದನು. ಯಕೋಬನ ಮಕ್ಕಳು ತಮ್ಮ ತಂದೆಯಾದ ಯಕೋಬನನ್ನು ಮತ್ತು ತಮ್ಮ ಮಡದಿಮಕ್ಕಳನ್ನು ಫರೋಹನು ಕಳಿಸಿದ್ದ ಬಂಡಿಗಳಲ್ಲಿ ಕೂರಿಸಿಕೊಂಡು ಹೊರಟರು..

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬಳಿಕ ಯಾಕೋಬನು ಬೇರ್ಷೆಬದಿಂದ ಹೊರಟನು. ಫರೋಹನು ಅವನನ್ನು ಕರೆದುಕೊಂಡು ಬರುವುದಕ್ಕೆ ಕಳುಹಿಸಿದ್ದ ರಥಗಳಲ್ಲಿ ಇಸ್ರಾಯೇಲನ ಮಕ್ಕಳು, ತಮ್ಮ ತಂದೆಯಾದ ಯಾಕೋಬನನ್ನೂ, ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಬಳಿಕ ಯಾಕೋಬನು ಬೇರ್ಷೆಬದಿಂದ ಹೊರಟನು. ಫರೋಹನು ಅವನನ್ನು ಕರಕೊಂಡು ಬರುವದಕ್ಕೆ ಕಳುಹಿಸಿದ್ದ ರಥಗಳ ಮೇಲೆ ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ಹೆಂಡತಿ ಮಕ್ಕಳನ್ನೂ ಕುಳ್ಳಿರಿಸಿಕೊಂಡು ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಮೇಲೆ ಯಾಕೋಬನು ಬೇರ್ಷೆಬವನ್ನು ಬಿಟ್ಟು ಈಜಿಪ್ಟಿಗೆ ಪ್ರಯಾಣ ಮಾಡಿದನು. ಇಸ್ರೇಲನ ಗಂಡುಮಕ್ಕಳು ತಮ್ಮ ತಂದೆಯನ್ನೂ ತಮ್ಮ ಹೆಂಡತಿಯರನ್ನೂ ತಮ್ಮ ಎಲ್ಲಾ ಮಕ್ಕಳನ್ನೂ ಕರೆದುಕೊಂಡು ಹೋದರು. ಫರೋಹನು ಕಳುಹಿಸಿದ್ದ ರಥಗಳಲ್ಲಿ ಅವರು ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಆಗ ಇಸ್ರಾಯೇಲರು ತಮ್ಮ ತಂದೆ ಯಾಕೋಬನನ್ನೂ, ತಮ್ಮ ಮಕ್ಕಳನ್ನೂ, ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ರಥಗಳಲ್ಲಿ ಕೂರಿಸಿಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:5
9 ತಿಳಿವುಗಳ ಹೋಲಿಕೆ  

ಯಕೋಬನ ಮಕ್ಕಳು ಅದೇ ಮೇರೆಗೆ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಜೋಸೆಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.


ನಿನ್ನ ಸಹೋದರರಿಗೆ ಈ ಆಜ್ಞೆಯನ್ನೂ ತಿಳಿಸು: ‘ನೀವು ನಿಮ್ಮ ಮಡದಿ ಮಕ್ಕಳನ್ನು ಕರೆದುತರಲು ಈಜಿಪ್ಟ್ ದೇಶದ ಬಂಡಿಗಳನ್ನು ತೆಗೆದುಕೊಂಡುಹೋಗಿರಿ: ನಿಮ್ಮ ತಂದೆಯನ್ನು ತಂದು ಸೇರಿಸಿರಿ.


ಆದರೆ ಜೋಸೆಫನು ಹೇಳಿಕಳಿಸಿದ ಎಲ್ಲ ಮಾತುಗಳನ್ನು ಕೇಳಿ, ತನ್ನ ಪ್ರಯಾಣಕ್ಕಾಗಿ ಅವನಿಂದ ಬಂದಿದ್ದ ಬಂಡಿಗಳನ್ನು ನೋಡಿ ಅವರ ತಂದೆ ಯಕೋಬನಿಗೆ ಹೊಸ ಜೀವ ಬಂದಿತು.


ಅದು ಮಾತ್ರವಲ್ಲ, ನಮ್ಮ ಎಲ್ಲ ಪಶುಪ್ರಾಣಿಗಳನ್ನೂತೆಗೆದುಕೊಂಡು ಹೋಗಲು ಅಪ್ಪಣೆ ಕೊಡಿ. ಒಂದು ಗೊರಸನ್ನೂ ನಾವು ಬಿಟ್ಟುಹೋಗಲು ಆಗದು. ಈ ಪಶುಪ್ರಾಣಿಗಳಿಂದಲೇ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಬಲಿಯೊಪ್ಪಿಸಬೇಕಾಗಿದೆ ಅಲ್ಲವೆ? ಯಾವ ಯಾವ ಪ್ರಾಣಿಗಳನ್ನು ಅರ್ಪಿಸಬೇಕೋ ಅದು ನಾವು ಅಲ್ಲಿಗೆ ಸೇರುವುದಕ್ಕೆ ಮುಂಚೆ ನಮಗೆ ತಿಳಿಯದು,” ಎಂದನು.


ಫರೋಹನು ಮೋಶೆಯನ್ನು ಕರೆಯಿಸಿ, “ನೀವು ಹೋಗಿ ಸರ್ವೇಶ್ವರನಿಗೆ ಆರಾಧನೆ ಮಾಡಿಬರಬಹುದು; ನಿಮ್ಮ ಮಡದಿ ಮಕ್ಕಳೂ ಹೋಗಿಬರಬಹುದು; ನಿಮ್ಮ ದನಕುರಿಗಳನ್ನು ಮಾತ್ರ ಇಲ್ಲೇ ಬಿಟ್ಟು ಹೋಗಬೇಕು,” ಎಂದನು.


ಇವರ ಒಟ್ಟು ಸಂಖ್ಯೆ ಎಪ್ಪತ್ತೈದು. ಯಕೋಬನು ಈಜಿಪ್ಟಿಗೆ ಹೋದನು. ಅವನೂ ನಮ್ಮ ಪಿತಾಮಹರೂ ಅಲ್ಲೇ ನಿಧನರಾದರು.


ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಈಜಿಪ್ಟಿಗೆ ಬಂದ ಯಕೋಬನ ವಂಶದವರಾದ ನಮ್ಮ ಹಿರಿಯರು ಸರ್ವೇಶ್ವರನಿಗೆ ಮೊರೆಯಿಟ್ಟಾಗ, ಅವರು ಮೋಶೆ ಹಾಗು ಆರೋನರ ಮುಖಾಂತರ ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದು ಈ ನಾಡಿನಲ್ಲಿ ನೆಲೆಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು