Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:6 - ಕನ್ನಡ ಸತ್ಯವೇದವು C.L. Bible (BSI)

6 ಕಾನಾನ್ ನಾಡಿನಲ್ಲಿ ತಾವು ಸಂಪಾದಿಸಿದ್ದ ಆಸ್ತಿಪಾಸ್ತಿಯನ್ನೂ ದನಕುರಿಗಳನ್ನೂ ತೆಗೆದುಕೊಂಡು ಈಜಿಪ್ಟ್ ದೇಶವನ್ನು ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾಕೋಬನೂ, ಅವನ ಮನೆಯವರೆಲ್ಲರೂ ತಮ್ಮ ದನಕುರಿಗಳನ್ನೂ ತಾವು ಕಾನಾನ್‌ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಸಂಪತ್ತುಗಳನ್ನೂ ತೆಗೆದುಕೊಂಡು ಐಗುಪ್ತ ದೇಶವನ್ನು ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾಕೋಬನೂ ಅವನ ಮನೆತನದವರೆಲ್ಲರೂ ತಮ್ಮ ದನಕುರಿಗಳನ್ನೂ ತಾವು ಕಾನಾನ್‍ದೇಶದಲ್ಲಿ ಸಂಪಾದಿಸಿಕೊಂಡಿದ್ದ ಸೊತ್ತುಗಳನ್ನೂ ತೆಗೆದುಕೊಂಡು ಐಗುಪ್ತದೇಶವನ್ನು ತಲಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇದಲ್ಲದೆ ಅವರು ತಮ್ಮ ದನಕರುಗಳನ್ನೂ ಕಾನಾನ್ ದೇಶದಲ್ಲಿ ತಾವು ಹೊಂದಿದ್ದ ಪ್ರತಿಯೊಂದನ್ನೂ ತೆಗೆದುಕೊಂಡು ಹೋದರು. ಹೀಗೆ ಇಸ್ರೇಲನು ತನ್ನ ಎಲ್ಲಾ ಮಕ್ಕಳೊಂದಿಗೆ ಮತ್ತು ತನ್ನ ಕುಟುಂಬದೊಂದಿಗೆ ಈಜಿಪ್ಟಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ತಮ್ಮ ಪಶುಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತೆಗೆದುಕೊಂಡು ಈಜಿಪ್ಟಿಗೆ ಬಂದರು. ಯಾಕೋಬನು ತನ್ನ ಕುಟುಂಬ ಸಮೇತವಾಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:6
10 ತಿಳಿವುಗಳ ಹೋಲಿಕೆ  

ಇವರ ಒಟ್ಟು ಸಂಖ್ಯೆ ಎಪ್ಪತ್ತೈದು. ಯಕೋಬನು ಈಜಿಪ್ಟಿಗೆ ಹೋದನು. ಅವನೂ ನಮ್ಮ ಪಿತಾಮಹರೂ ಅಲ್ಲೇ ನಿಧನರಾದರು.


ದೇವರಾದ ಸರ್ವೇಶ್ವರ ಹೇಳಿಕೊಳ್ಳುವುದೇನೆಂದರೆ : “ಹಿಂದೆ ನನ್ನ ಜನರು ಈಜಿಪ್ಟಿನಲ್ಲೆ ಇಳಿದುಕೊಳ್ಳಲು ಹೋದರು. ಕೊನೆಗೆ ಅಸ್ಸೀರಿಯರು ಅವರನ್ನು ನಿಷ್ಕಾರಣವಾಗಿ ಹಿಂಸಿಸಿದರು.


ಬಂದನು ಆಗ ಇಸ್ರಯೇಲನು ಈಜಿಪ್ಟಿಗೆ I ಪ್ರವಾಸಿಯಾದ ಯಕೋಬನು ಹಾಮ ನಾಡಿಗೆ II


ಇಸಾಕನಿಗೆ ಯಕೋಬ್ ಮತ್ತು ಏಸಾವ್ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿದೆ. ಏಸಾವನಿಗೆ ಸೇಯೀರ್ ಬೆಟ್ಟವನ್ನು ಸ್ವಂತ ಸೊತ್ತಾಗಿ ದಯಪಾಲಿಸಿದೆ. ಯಕೋಬನಾದರೋ ತನ್ನ ಮಕ್ಕಳ ಸಮೇತ ಈಜಿಪ್ಟ್ ದೇಶಕ್ಕೆ ಹೋದ.


ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.


ಈಜಿಪ್ಟಿಗೆ ಬಂದ ಯಕೋಬನ ವಂಶದವರಾದ ನಮ್ಮ ಹಿರಿಯರು ಸರ್ವೇಶ್ವರನಿಗೆ ಮೊರೆಯಿಟ್ಟಾಗ, ಅವರು ಮೋಶೆ ಹಾಗು ಆರೋನರ ಮುಖಾಂತರ ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದು ಈ ನಾಡಿನಲ್ಲಿ ನೆಲೆಗೊಳಿಸಿದರು.


ನಿಮ್ಮ ಪಿತೃಗಳು, ಎಪ್ಪತ್ತುಮಂದಿ ಮಾತ್ರ. ಈಜಿಪ್ಟ್ ದೇಶಕ್ಕೆ ಹೋದರು; ಈಗಲಾದರೋ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗುವಂತೆ ಮಾಡಿದ್ದಾರೆ.


ನಮ್ಮ ಪೂರ್ವಜರು ಈಜಿಪ್ಟ್ ದೇಶಕ್ಕೆ ಹೋದದ್ದು, ಅಲ್ಲಿ ನಾವು ಬಹು ದಿವಸ ವಾಸವಾಗಿದ್ದದ್ದು, ಈಜಿಪ್ಟಿನವರು ನಮ್ಮನ್ನೂ ನಮ್ಮ ಪೂರ್ವಜರನ್ನೂ ಹಿಂಸಿಸಿದ್ದು, ಇವೆಲ್ಲಾ ತಿಳಿದ ವಿಷಯಗಳು.


ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು.


ಹೀಗೆ ಯಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ ಮೊಮ್ಮಕ್ಕಳನ್ನೂ ತನ್ನ ಕುಟುಂಬದವರೆಲ್ಲರನ್ನೂ ತನ್ನ ಸಂಗಡವೇ ಕರೆದುಕೊಂಡು ಈಜಿಪ್ಟಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು