Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:7 - ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ಯಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ ಮೊಮ್ಮಕ್ಕಳನ್ನೂ ತನ್ನ ಕುಟುಂಬದವರೆಲ್ಲರನ್ನೂ ತನ್ನ ಸಂಗಡವೇ ಕರೆದುಕೊಂಡು ಈಜಿಪ್ಟಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗೆ ಯಾಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮಕ್ಕಳನ್ನೂ, ತನ್ನ ಮನೆಯವರೆಲ್ಲರನ್ನೂ ತನ್ನ ಸಂಗಡಲೇ ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗೆ ಯಾಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ ಮೊಮ್ಮಕ್ಕಳನ್ನೂ ತನ್ನ ಮನೆತನದವರೆಲ್ಲರನ್ನೂ ತನ್ನ ಸಂಗಡಲೇ ಐಗುಪ್ತದೇಶಕ್ಕೆ ಕರಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವನ ಜೊತೆಯಲ್ಲಿ ಅವನ ಗಂಡುಮಕ್ಕಳು, ಹೆಣ್ಣುಮಕ್ಕಳು ಮತ್ತು ಮೊಮ್ಮಕ್ಕಳು ಇದ್ದರು. ಅವನ ಸಂಸಾರದವರೆಲ್ಲ ಅವನ ಜೊತೆ ಈಜಿಪ್ಟಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮೊಕ್ಕಳನ್ನೂ, ಅಂತೂ ತನ್ನ ಇಡೀ ಕುಟುಂಬದವರೆಲ್ಲರನ್ನೂ ತನ್ನೊಂದಿಗೆ ಈಜಿಪ್ಟಿಗೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:7
9 ತಿಳಿವುಗಳ ಹೋಲಿಕೆ  

ಕಾನಾನ್ ನಾಡಿನಲ್ಲಿ ತಾವು ಸಂಪಾದಿಸಿದ್ದ ಆಸ್ತಿಪಾಸ್ತಿಯನ್ನೂ ದನಕುರಿಗಳನ್ನೂ ತೆಗೆದುಕೊಂಡು ಈಜಿಪ್ಟ್ ದೇಶವನ್ನು ತಲುಪಿದರು.


ಈಜಿಪ್ಟಿಗೆ ಬಂದು ಸೇರಿದ ಯಕೋಬನ ಮತ್ತು ಅವನ ಮಕ್ಕಳಾದ ಇಸ್ರಯೇಲರ ಹೆಸರುಗಳು ಇವು - ಯಕೋಬನ ಜೇಷ್ಠ ಪುತ್ರ ರೂಬೇನನು.


ಇಸಾಕನಿಗೆ ಯಕೋಬ್ ಮತ್ತು ಏಸಾವ್ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿದೆ. ಏಸಾವನಿಗೆ ಸೇಯೀರ್ ಬೆಟ್ಟವನ್ನು ಸ್ವಂತ ಸೊತ್ತಾಗಿ ದಯಪಾಲಿಸಿದೆ. ಯಕೋಬನಾದರೋ ತನ್ನ ಮಕ್ಕಳ ಸಮೇತ ಈಜಿಪ್ಟ್ ದೇಶಕ್ಕೆ ಹೋದ.


ಇತ್ತ ಯಕೋಬನ ಗಂಡು ಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದರು. ಶೆಕೆಮನು ತಮ್ಮ ತಂಗಿಯನ್ನು ಬಲಾತ್ಕಾರದಿಂದ ಕೂಡಿ, ಮಾಡಬಾರದನ್ನು ಮಾಡಿ, ಇಸ್ರಯೇಲರಿಗೆ ಘನ ಅವಮಾನವನ್ನು ಮಾಡಿದ್ದರಿಂದ ಅವರು ತಳಮಳಗೊಂಡು ಕಡುಕೋಪದಿಂದ ಇದ್ದರು.


ನಮ್ಮ ಪೂರ್ವಜರು ಈಜಿಪ್ಟ್ ದೇಶಕ್ಕೆ ಹೋದದ್ದು, ಅಲ್ಲಿ ನಾವು ಬಹು ದಿವಸ ವಾಸವಾಗಿದ್ದದ್ದು, ಈಜಿಪ್ಟಿನವರು ನಮ್ಮನ್ನೂ ನಮ್ಮ ಪೂರ್ವಜರನ್ನೂ ಹಿಂಸಿಸಿದ್ದು, ಇವೆಲ್ಲಾ ತಿಳಿದ ವಿಷಯಗಳು.


“ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಿಮ್ಮ ಬಂಧುಜನಗಳು. ಈಜಿಪ್ಟರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲವೆ?


ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.


ಬಂದನು ಆಗ ಇಸ್ರಯೇಲನು ಈಜಿಪ್ಟಿಗೆ I ಪ್ರವಾಸಿಯಾದ ಯಕೋಬನು ಹಾಮ ನಾಡಿಗೆ II


ದೇವರಾದ ಸರ್ವೇಶ್ವರ ಹೇಳಿಕೊಳ್ಳುವುದೇನೆಂದರೆ : “ಹಿಂದೆ ನನ್ನ ಜನರು ಈಜಿಪ್ಟಿನಲ್ಲೆ ಇಳಿದುಕೊಳ್ಳಲು ಹೋದರು. ಕೊನೆಗೆ ಅಸ್ಸೀರಿಯರು ಅವರನ್ನು ನಿಷ್ಕಾರಣವಾಗಿ ಹಿಂಸಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು