ಆದಿಕಾಂಡ 47:1 - ಕನ್ನಡ ಸತ್ಯವೇದವು C.L. Bible (BSI)1 ಜೋಸೆಫನು ಫರೋಹನ ಬಳಿಗೆ ಬಂದು, “ನನ್ನ ತಂದೆಯೂ ಸಹೋದರರೂ ದನಕುರಿಗಳನ್ನು ಹಾಗೂ ಎಲ್ಲ ಆಸ್ತಿಪಾಸ್ತಿಯನ್ನು ತೆಗೆದುಕೊಂಡು ಕಾನಾನ್ ನಾಡಿನಿಂದ ಗೋಷೆನ್ ಪ್ರಾಂತ್ಯಕ್ಕೆ ಬಂದಿದ್ದಾರೆ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ, ಅಣ್ಣತಮ್ಮಂದಿರೂ, ಕುರಿದನಗಳನ್ನೂ, ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿ ಉಳಿದುಕೊಂಡಿದ್ದಾರೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಯೋಸೇಫನು ಫರೋಹನ ಬಳಿಗೆ ಹೋಗಿ - ನನ್ನ ತಂದೆಯೂ ಅಣ್ಣತಮ್ಮಂದಿರೂ ದನಕುರಿಗಳನ್ನೂ ಸಮಸ್ತ ಆಸ್ತಿಯನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದು ಗೋಷೆನ್ ಸೀಮೆಯಲ್ಲಿದ್ದಾರೆಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೋಸೇಫನು ಫರೋಹನ ಬಳಿಗೆ ಹೋಗಿ, “ನನ್ನ ತಂದೆಯೂ ನನ್ನ ಸಹೋದರರೂ ಅವರೆಲ್ಲರ ಕುಟುಂಬಗಳವರೂ ಇಲ್ಲಿಗೆ ಬಂದಿದ್ದಾರೆ. ಅವರು ತಮ್ಮ ಎಲ್ಲಾ ಪಶುಗಳನ್ನೂ ಕಾನಾನಿನಲ್ಲಿ ಪಡೆದಿದ್ದ ಪ್ರತಿಯೊಂದನ್ನೂ ತೆಗೆದುಕೊಂಡು ಬಂದಿದ್ದಾರೆ. ಈಗ ಅವರು ಗೋಷೆನ್ ಪ್ರಾಂತ್ಯದಲ್ಲಿ ಇದ್ದಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೋಸೇಫನು ಹೋಗಿ ಫರೋಹನಿಗೆ, “ನನ್ನ ತಂದೆಯೂ, ನನ್ನ ಸಹೋದರರೂ ತಮ್ಮ ಕುರಿದನಗಳನ್ನೂ, ತಮಗಿದ್ದ ಎಲ್ಲವುಗಳನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದಿದ್ದಾರೆ. ಅವರು ಗೋಷೆನ್ ಪ್ರಾಂತದಲ್ಲಿ ಇದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |