Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:11 - ಕನ್ನಡ ಸತ್ಯವೇದವು C.L. Bible (BSI)

11 ಫರೋಹನ ಅಪ್ಪಣೆಯ ಮೇರೆಗೆ ಜೋಸೆಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಈಜಿಪ್ಟಿನಲ್ಲಿ ವಾಸಸ್ಥಾನವನ್ನು ನೇಮಿಸಿ, ಅದರಲ್ಲಿ ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸೊತ್ತನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಮಾಡಲು ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವತ್ತು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಫರೋಹನ ಅಪ್ಪಣೆಯ ಮೇರೆಗೆ ಯೋಸೇಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಐಗುಪ್ತ ದೇಶದಲ್ಲಿ ವಾಸಸ್ಥಾನವನ್ನು ನೇವಿುಸಿ ಅದರೊಳಗೆ ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸ್ವಾಸ್ತಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಫರೋಹನು ಹೇಳಿದಂತೆಯೇ ಯೋಸೇಫನು ಮಾಡಿದನು. ಅವನು ತನ್ನ ತಂದೆಗೂ ಸಹೋದರರಿಗೂ ಈಜಿಪ್ಟಿನಲ್ಲಿ ವಾಸಿಸಲು ಉತ್ತಮವಾದ ಪ್ರದೇಶವನ್ನು ಕೊಟ್ಟನು. ಅದು ರಮ್ಸೇಸ್ ಪಟ್ಟಣದ ಸಮೀಪದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೋಸೇಫನು ತನ್ನ ತಂದೆಗೂ, ತನ್ನ ಸಹೋದರರಿಗೂ ನಿವಾಸವನ್ನು ಕೊಟ್ಟು, ಫರೋಹನ ಅಪ್ಪಣೆಯ ಪ್ರಕಾರ, ಅವರಿಗೆ ಈಜಿಪ್ಟ್ ದೇಶದ ಉತ್ತಮವಾದ ರಮ್ಸೇಸ್ ಸೀಮೆಯ ಸ್ವತ್ತನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:11
13 ತಿಳಿವುಗಳ ಹೋಲಿಕೆ  

ಇಸ್ರಯೇಲರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಅವರಲ್ಲಿ ಮಹಿಳೆಯರನ್ನೂ ಮಕ್ಕಳನ್ನೂ ಬಿಟ್ಟು ಗಂಡಸರ ಸಂಖ್ಯೆಯೇ ಸುಮಾರು ಆರು ಲಕ್ಷವಿತ್ತು.


ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.


ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು,


ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.


'ಚಿಕ್ಕಂದಿನಿಂದ ಇಂದಿನವರೆಗೂ ನಿಮ್ಮ ಸೇವಕರಾದ ನಾವು, ನಮ್ಮ ಪೂರ್ವಜರ ಪದ್ಧತಿಯಂತೆ ಮಂದೆ ಮೇಯಿಸುವವರು,’ ಎಂದು ಹೇಳಿರಿ. ಆಗ ಗೋಷೆನ್ ಪ್ರಾಂತ್ಯವನ್ನು ನಿಮ್ಮ ನಿವಾಸಕ್ಕೆ ನೇಮಿಸುವನು - ಏಕೆಂದರೆ ಕುರಿ ಕಾಯುವವರೆಂದರೆ ಈಜಿಪ್ಟಿಯರಿಗೆ ಹಿಡಿಸದು,” ಎಂದು ಹೇಳಿದನು.


ಇಸ್ರಯೇಲರು ಈಜಿಪ್ಟ್ ದೇಶಕ್ಕೆ ಸೇರಿದ ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡಿದರು. ಅಲ್ಲಿ ಅವರು ಆಸ್ತಿಪಾಸ್ತಿಯನ್ನು ಸಂಪಾದಿಸಿಕೊಂಡು ಬಹು ಸಂತಾನವುಳ್ಳವರಾಗಿ ಅಭಿವೃದ್ಧಿಯಾದರು.


ಮೊದಲನೆಯ ತಿಂಗಳಿನ ಹದಿನೈದನೆಯ ದಿನ, ಅಂದರೆ ಪಾಸ್ಕಹಬ್ಬದ ಮರುದಿನ, ಇಸ್ರಯೇಲರು ಈಜಿಪ್ಟರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟರು.


“ಬಟ್ಟಲು, ಬಿಂದಿಗೆ ಮುಂತಾದ ಪಾತ್ರೆಗಳನ್ನು ಮೊಳೆಗೆ ತಗಲುಹಾಕುವಂತೆ, ತಂದೆಯ ಮಕ್ಕಳು, ಮೊಮ್ಮಕ್ಕಳೆಲ್ಲರು ಅವನಿಗೆ ನೇತುಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು