Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:15 - ಕನ್ನಡ ಸತ್ಯವೇದವು C.L. Bible (BSI)

15 ಈಜಿಪ್ಟಿನ ಹಾಗೂ ಕಾನಾನಿನ ಹಣವೆಲ್ಲ ಮುಗಿದುಹೋದಾಗ ಈಜಿಪ್ಟಿನವರು ಜೋಸೆಫನ ಬಳಿಗೆ ಬಂದು, “ನಾವೇಕೆ ನಿಮ್ಮ ಕಣ್ಮುಂದೆ ಸಾಯಬೇಕು? ನಮಗೆ ಆಹಾರ ಕೊಡಿ, ನಮ್ಮ ಹಣ ಮುಗಿದುಹೋಯಿತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಐಗುಪ್ತ ದೇಶದಲ್ಲಿಯೂ, ಕಾನಾನ್‌ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಐಗುಪ್ತದೇಶದಲ್ಲಿಯೂ ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು - ನಮ್ಮ ಹಣವು ಮುಗಿದು ಹೋಯಿತು; ನೀನು [ಧರ್ಮವಾಗಿಯೇ] ಆಹಾರಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸ್ವಲ್ಪ ಸಮಯದ ನಂತರ, ಈಜಿಪ್ಟ್ ಮತ್ತು ಕಾನಾನ್ ದೇಶಗಳಲ್ಲಿದ್ದ ಜನರಲ್ಲಿ ಹಣವು ಉಳಿದಿರಲಿಲ್ಲ. ಆದ್ದರಿಂದ ಈಜಿಪ್ಟಿನ ಜನರು ಯೋಸೇಫನ ಬಳಿಗೆ ಹೋಗಿ, “ದಯವಿಟ್ಟು ನಮಗೆ ಆಹಾರವನ್ನು ಕೊಡು. ನಮ್ಮ ಹಣವೆಲ್ಲ ಮುಗಿದುಹೋಗಿದೆ. ನಾವು ಊಟ ಮಾಡದಿದ್ದರೆ ನಿನ್ನೆದುರಿನಲ್ಲೇ ಸಾಯುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಈಜಿಪ್ಟ್ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಹಣವು ಮುಗಿದಾಗ, ಈಜಿಪ್ಟಿನವರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮಗೆ ಆಹಾರವನ್ನು ಕೊಡು, ನಾವು ನಿನ್ನ ಮುಂದೆ ಏಕೆ ಸಾಯಬೇಕು? ಏಕೆಂದರೆ ಹಣವೆಲ್ಲಾ ತೀರಿತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:15
11 ತಿಳಿವುಗಳ ಹೋಲಿಕೆ  

ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ.


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ನಿನ್ನ ಆಳುಗ಼ಳನ್ನೇ ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಸಾಧ್ಯವಾದುದ್ದನ್ನು ಕೊಡು,’ ಎಂದು ಅವನಿಗೆ ಹೇಳಿರಿ,” ಎಂದು ಅವರನ್ನು ಕಳುಹಿಸಿದನು.


ಈಗ ನಿನ್ನಲ್ಲಿ ಏನಾದರೂ ಉಂಟೋ? ನಾಲ್ಕೈದು ರೊಟ್ಟಿಗಳಾದರೂ ಬೇರೆ ಯಾವ ಆಹಾರಪದಾರ್ಥವಾದರೂ ಇದ್ದರೆ ನನಗೆ ಕೊಡು,” ಎಂದನು.


ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನ ಜನರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ತಾತ್ಸಾತ ಮಾಡಿದರು.


ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಸ್ವಲ್ಪ ರೊಟ್ಟಿ ಕೊಡಿ. ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ,” ಎಂದನು.


ಕೊಯ್ದು ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು. ಮಿಕ್ಕ ನಾಲ್ಕು ಪಾಲು ನಿಮ್ಮದು. ಅದನ್ನು ಬಿತ್ತನೆಗಾಗಿ ಮತ್ತು ನಿಮ್ಮ ಮನೆಯವರ ಹಾಗು ಕುಟುಂಬದವರ ಜೀವನಕ್ಕಾಗಿ ಇಟ್ಟುಕೊಳ್ಳಿ,” ಎಂದು ಹೇಳಿದನು.


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ಜೋಸೆಫನು, “ನಿಮ್ಮ ದನಕರುಗಳನ್ನು ತನ್ನಿ, ಹಣವಿಲ್ಲದಿದ್ದರೆ ದನಕರುಗಳನ್ನು ತೆಗೆದುಕೊಂಡು ಧಾನ್ಯ ಕೊಡಿಸುತ್ತೇನೆ,” ಎಂದನು.


ಹೀಗೆ ಆಹಾರ ಪದಾರ್ಥಗಳನ್ನು ಶೇಖರಿಸುವುದರಿಂದ ಈಜಿಪ್ಟ್ ದೇಶದಲ್ಲಿ ದುರ್ಭಿಕ್ಷವುಂಟಾಗುವ ಏಳು ವರ್ಷಗಳಲ್ಲಿ ಜನರು ಕ್ಷಾಮದಿಂದ ಸಾಯುವುದಿಲ್ಲ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು