Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:19 - ಕನ್ನಡ ಸತ್ಯವೇದವು C.L. Bible (BSI)

19 ನಾವೇಕೆ ನಿಮ್ಮ ಕಣ್ಣೆದುರಿಗೆ ಸಾಯಬೇಕು? ನಮ್ಮ ಭೂಮಿಯೇಕೆ ಹಾಳಾಗಬೇಕು? ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯ ಕೊಡಿ, ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವರಿಗೆ ಗುಲಾಮರಾಗುತ್ತೇವೆ. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿ ಪಾಳುಬೀಳಬಾರದಿದ್ದರೆ ಧಾನ್ಯಕೊಡಿ,” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ನಿನ್ನ ಕಣ್ಣೆದುರಿಗೆ ನಾವು ಏಕೆ ಸಾಯಬೇಕು; ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿನ್ನ ಕಣ್ಣೆದುರಿಗೆ ನಾವು ಯಾಕೆ ಸಾಯಬೇಕು; ನಮ್ಮ ಭೂವಿುಯು ಯಾಕೆ ಹಾಳಾಗಬೇಕು. ನಮ್ಮನ್ನೂ ನಮ್ಮ ಭೂವಿುಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂವಿುಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂವಿುಯು ಹಾಳು ಬೀಳಬಾರದಿದ್ದರೆ ನೀನು ಬೀಜವನ್ನು ಕೊಡಬೇಕೆಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿನ್ನ ಕಣ್ಣೆದುರಿನಲ್ಲಿಯೇ ನಾವು ಖಂಡಿತವಾಗಿ ಸಾಯುತ್ತೇವೆ. ಆದರೆ ನೀನು ನಮಗೆ ಆಹಾರವನ್ನು ಕೊಟ್ಟರೆ, ನಾವು ಫರೋಹನಿಗೆ ನಮ್ಮ ಭೂಮಿಯನ್ನು ಕೊಟ್ಟು ಅವನ ಗುಲಾಮರಾಗಿರುತ್ತೇವೆ. ಬಿತ್ತನೆ ಮಾಡಲು ನಮಗೆ ಬೀಜವನ್ನು ಕೊಡು. ಆಗ ನಾವು ಬದುಕುತ್ತೇವೆ, ಸಾಯುವುದಿಲ್ಲ. ಮತ್ತು ಭೂಮಿಯೂ ಬೆಳೆಗಳನ್ನು ಫಲಿಸುತ್ತದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾವೂ, ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವುದು ಏಕೆ? ನಮ್ಮನ್ನೂ, ನಮ್ಮ ಭೂಮಿಯನ್ನೂ ಆಹಾರಕ್ಕಾಗಿ ಕೊಂಡುಕೋ. ಆಗ ನಾವೂ, ನಮ್ಮ ಭೂಮಿಯೂ ಫರೋಹನಿಗೆ ದಾಸರಾಗಿರುವೆವು. ನಮಗೆ ಬೀಜವನ್ನು ಕೊಡು, ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:19
11 ತಿಳಿವುಗಳ ಹೋಲಿಕೆ  

ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ, ಎಂದ ಹಾಗೆ ಒಬ್ಬ ಮನುಷ್ಯ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ತೊರೆದುಬಿಡುತ್ತಾನೆ.


ಪ್ರಾಣಾಪಾಯದಿಂದ, ಕಾಡಿನ ಕಟುಕರ ಭಯದಿಂದ ನಾವು ಪಡೆಯುತ್ತಿದ್ದೇವೆ ದವಸ ಧಾನ್ಯ.


ಹೊಟ್ಟೆಪಾಡಿಗಾಗಿ ಕೈ ಒಡ್ಡಿದ್ದೇವೆ ಈಜಿಪ್ಟರಿಗೆ, ಅಶ್ಶೂರ್ಯರಿಗೆ.


ಅಡ್ಡಾಡುತ್ತಿರುವರು ಆಕೆಯ ಜನರು ಅನ್ನಕ್ಕಾಗಿ ಮಾರುತಿರುವರು ಅಮೂಲ್ಯವಾದುದನ್ನೆ ಆಹಾರಕ್ಕಾಗಿ. “ಸರ್ವೇಶ್ವರಾ, ನೋಡು, ಕಟಾಕ್ಷಿಸು, ನನ್ನ ತುಚ್ಛತೆಯನ್ನು” ಎಂದು ಹೇಳಿ ಆಕೆ ಪ್ರಲಾಪಿಸುತ್ತಿರುವಳು.


ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?


ಈಜಿಪ್ಟಿನ ಹಾಗೂ ಕಾನಾನಿನ ಹಣವೆಲ್ಲ ಮುಗಿದುಹೋದಾಗ ಈಜಿಪ್ಟಿನವರು ಜೋಸೆಫನ ಬಳಿಗೆ ಬಂದು, “ನಾವೇಕೆ ನಿಮ್ಮ ಕಣ್ಮುಂದೆ ಸಾಯಬೇಕು? ನಮಗೆ ಆಹಾರ ಕೊಡಿ, ನಮ್ಮ ಹಣ ಮುಗಿದುಹೋಯಿತು,” ಎಂದರು.


ಆ ವರ್ಷ ಕಳೆದು ಮಾರನೆಯ ವರ್ಷದಲ್ಲಿ ಅವರು ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲ ವೆಚ್ಚವಾಯಿತು. ನಮ್ಮ ಪಶುಪ್ರಾಣಿಗಳು ದಣಿಯ ವಶವಾದುವು; ಇನ್ನು ಉಳಿದಿರುವುದು ನಮ್ಮ ಭೂಮಿ ಮತ್ತು ದೇಹಗಳೇ ಹೊರತು ಬೇರೇನೂ ಇಲ್ಲ; ದಣಿಗೆ ಮುಚ್ಚುಮರೆಯಿಲ್ಲದೆ ತಿಳಿಸುತ್ತಿದ್ದೇವೆ.


ಜೋಸೆಫ್ ಈಜಿಪ್ಟ್ ದೇಶದ ಎಲ್ಲ ಸಾಗುವಳಿ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಬರದ ಘೋರತೆಯಿಂದಾಗಿ ಈಜಿಪ್ಟಿನವರು ತಮ್ಮ ತಮ್ಮ ಹೊಲಗದ್ದೆಗಳನ್ನು ಮಾರಿಬಿಟ್ಟರು. ಹೀಗೆ ಸಾಗುವಳಿ ಭೂಮಿಯೆಲ್ಲ ಫರೋಹನದಾಯಿತು.


ಹೀಗೆ ಆಹಾರ ಪದಾರ್ಥಗಳನ್ನು ಶೇಖರಿಸುವುದರಿಂದ ಈಜಿಪ್ಟ್ ದೇಶದಲ್ಲಿ ದುರ್ಭಿಕ್ಷವುಂಟಾಗುವ ಏಳು ವರ್ಷಗಳಲ್ಲಿ ಜನರು ಕ್ಷಾಮದಿಂದ ಸಾಯುವುದಿಲ್ಲ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು