ಆದಿಕಾಂಡ 47:24 - ಕನ್ನಡ ಸತ್ಯವೇದವು C.L. Bible (BSI)24 ಕೊಯ್ದು ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು. ಮಿಕ್ಕ ನಾಲ್ಕು ಪಾಲು ನಿಮ್ಮದು. ಅದನ್ನು ಬಿತ್ತನೆಗಾಗಿ ಮತ್ತು ನಿಮ್ಮ ಮನೆಯವರ ಹಾಗು ಕುಟುಂಬದವರ ಜೀವನಕ್ಕಾಗಿ ಇಟ್ಟುಕೊಳ್ಳಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ಮಿಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಆಹಾರಕ್ಕಾಗುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಪೈರು ಕೊಯ್ಯುವ ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು; ವಿುಕ್ಕ ನಾಲ್ಕು ಪಾಲು ನಿಮ್ಮದು; ಅದು ಬೀಜಕ್ಕೆ ಆಗುತ್ತದೆ, ಮತ್ತು ನಿಮಗೂ ನಿಮ್ಮ ಮನೆಯವರಿಗೂ ನಿಮ್ಮ ಕುಟುಂಬಕ್ಕೆ ಸೇರಿದವರೆಲ್ಲರಿಗೂ ಜೀವನಕ್ಕಾಗುತ್ತದೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಸುಗ್ಗಿಕಾಲ ಬಂದಾಗ, ನಿಮ್ಮ ಬೆಳೆಗಳಲ್ಲಿ ಐದನೆ ಒಂದು ಭಾಗ ಫರೋಹನಿಗೆ ಸೇರಿದ್ದು. ಐದನೆ ನಾಲ್ಕು ಭಾಗವನ್ನು ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆಹಾರಕ್ಕಾಗಿ ಇಟ್ಟುಕೊಳ್ಳುವ ಬೀಜವನ್ನೇ ಮುಂದಿನ ವರ್ಷದ ಬಿತ್ತನೆಗಾಗಿ ಉಪಯೋಗಿಸಬಹುದು. ಹೀಗೆ ನೀವು ನಿಮ್ಮ ಕುಟುಂಬದವರಿಗೂ ಮಕ್ಕಳಿಗೂ ಪೋಷಣೆಮಾಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ಉಳಿದ ನಾಲ್ಕು ಪಾಲು ಹೊಲದ ಬೀಜಕ್ಕಾಗಿಯೂ, ನಿಮ್ಮ ಆಹಾರಕ್ಕಾಗಿಯೂ, ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ,” ಎಂದನು. ಅಧ್ಯಾಯವನ್ನು ನೋಡಿ |