ಆದಿಕಾಂಡ 47:26 - ಕನ್ನಡ ಸತ್ಯವೇದವು C.L. Bible (BSI)26 ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲತಕ್ಕದ್ದು ಎಂಬ ಯೋಜನೆಯನ್ನು ಜೋಸೆಫನು ಈಜಿಪ್ಟ್ ದೇಶದ ಒಂದು ಶಾಸನವನ್ನಾಗಿ ಮಾಡಿದನು. ಈ ದಿನದವರೆಗೂ ಆ ಶಾಸನ ರೂಢಿಯಲ್ಲಿದೆ. ಅರ್ಚಕರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ಈ ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬದನ್ನು ಯೋಸೇಫನು ಐಗುಪ್ತದೇಶದಲ್ಲಿ ಕಟ್ಟಳೆಯಾಗಿ ನೇವಿುಸಿದನು. ಈ ದಿನದವರೆಗೂ ಹಾಗೆಯೇ ಇದೆ. ವೈದಿಕರ ಭೂವಿುಯು ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಆ ಕಾನೂನಿನ ಪ್ರಕಾರ, ಭೂಮಿಯ ಫಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬುದನ್ನು ಈಜಿಪ್ಟಿನ ಭೂಮಿಗೆ ಇಂದಿನವರೆಗೂ ನಿಯಮವಾಗಿ ಸ್ಥಾಪಿಸಿದನು. ಯಾಜಕರ ಭೂಮಿಯು ಮಾತ್ರ ಫರೋಹನದಾಗಲಿಲ್ಲ. ಅಧ್ಯಾಯವನ್ನು ನೋಡಿ |