ಆದಿಕಾಂಡ 47:29 - ಕನ್ನಡ ಸತ್ಯವೇದವು C.L. Bible (BSI)29 ಯಕೋಬನಿಗೆ ಅಂತಿಮಕಾಲ ಹತ್ತಿರ ಆದಾಗ ಅವನು ತನ್ನ ಮಗ ಜೋಸೆಫನನ್ನು ಕರೆಸಿ, “ನನ್ನ ಮೇಲೆ ನಿನಗೆ ಪ್ರೀತಿಯಿದ್ದರೆ ನೀನು ನನ್ನ ಮಾತನ್ನು ಪ್ರೀತಿಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆಸಿಕೊಡಬೇಕು. ಅದೇನೆಂದರೆ; ನನ್ನನ್ನು ಈಜಿಪ್ಟ್ ದೇಶದಲ್ಲಿ ಸಮಾಧಿ ಮಾಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇಸ್ರಾಯೇಲನಿಗೆ ಮರಣಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದ್ದಿದೆಯಾದ್ದರೆ ಪದ್ದತಿಯ ಪ್ರಕಾರ ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು ನನಗೆ ಉಪಕಾರವನ್ನು ನಂಬಿಗಸ್ತಿಕೆಯಿಂದ ತೋರಿಸು. ನನ್ನನ್ನು ಐಗುಪ್ತದೇಶದಲ್ಲಿ ಸಮಾಧಿ ಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇಸ್ರಾಯೇಲನಿಗೆ ಅವಸಾನಕಾಲ ಸಮೀಪಿಸಿದಾಗ ಅವನು ತನ್ನ ಮಗನಾದ ಯೋಸೇಫನನ್ನು ಕರಸಿ - ನಿನಗೆ ನನ್ನ ಮೇಲೆ ಪ್ರೀತಿಯಿದ್ದರೆ ನೀನು ನಂಬಿಕೆಯಿಂದಲೂ ಪ್ರೀತಿಯಿಂದಲೂ ನನ್ನ ಮಾತನ್ನು ನಡಿಸಬೇಕು; ಏನಂದರೆ, ನನಗೆ ಐಗುಪ್ತ ದೇಶದಲ್ಲಿ ಸಮಾಧಿಮಾಡಬೇಡವೆಂದು ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಇಸ್ರೇಲನು ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದು ಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇಸ್ರಾಯೇಲನ ಮರಣದ ಸಮಯವು ಸಮೀಪಿಸಿದಾಗ, ಅವನು ತನ್ನ ಮಗ ಯೋಸೇಫನನ್ನು ಕರೆಯಿಸಿ ಅವನಿಗೆ, “ಈಗ ನಿನ್ನ ಸಮ್ಮುಖದಲ್ಲಿ ನಾನು ದಯೆ ಹೊಂದಿದ್ದೇಯಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು, ನನಗೆ ಉಪಕಾರವನ್ನೂ, ನಂಬಿಗಸ್ತಿಕೆಯನ್ನೂ ತೋರಿಸು. ಈಜಿಪ್ಟಿನಲ್ಲಿ ನನ್ನನ್ನು ಹೂಳಿಡಬೇಡ. ಅಧ್ಯಾಯವನ್ನು ನೋಡಿ |