Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:6 - ಕನ್ನಡ ಸತ್ಯವೇದವು C.L. Bible (BSI)

6 ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಐಗುಪ್ತ ದೇಶವು ನಿನ್ನ ಮುಂದೆ ಇದೆ, ಅದರೊಳಗೆ ಉತ್ತಮ ಭಾಗದಲ್ಲಿ ನಿನ್ನ ತಂದೆ, ನಿನ್ನ ಅಣ್ಣತಮ್ಮಂದಿರು ವಾಸಮಾಡುವಂತೆ ಮಾಡು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಸಮರ್ಥರೆಂದು ತಿಳಿದರೆ ಅವರನ್ನು ನನ್ನ ಕುರಿದನ ಮಂದೆಗಳ ಮೇಲ್ವಿಚಾರಣೆಗಾಗಿ ನೇಮಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದರೊಳಗಣ ಉತ್ತಮಭಾಗದಲ್ಲಿ ನಿನ್ನ ತಂದೆಗೂ ನಿನ್ನ ಅಣ್ಣತಮ್ಮಂದಿರಿಗೂ ವಾಸಸ್ಥಾನವನ್ನು ನೇವಿುಸಬಹುದು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಯೋಗ್ಯರಾಗಿ ತೋರಿದರೆ ಅವರನ್ನು ನನ್ನ ದನಗಳ ಮೇಲ್ವಿಚಾರಣೆಗೆ ನೇವಿುಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರ ವಾಸಕ್ಕಾಗಿ ಈಜಿಪ್ಟಿನಲ್ಲಿ ಯಾವ ಸ್ಥಳವನ್ನಾದರೂ ಆರಿಸಿಕೊಳ್ಳಬಹುದು. ನಿನ್ನ ತಂದೆಯೂ ನಿನ್ನ ಸಹೋದರರೂ ವಾಸವಾಗಿರಲು ಉತ್ತಮವಾದ ಪ್ರದೇಶವನ್ನು ಕೊಡು. ಅವರು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲಿ. ಅವರು ನಿಪುಣರಾದ ಕುರುಬರಾಗಿದ್ದರೆ, ಅವರು ನನ್ನ ದನಕರುಗಳನ್ನು ಸಹ ನೋಡಿಕೊಳ್ಳಬಹುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಜಿಪ್ಟ್ ದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದ ಕಡೆ ನಿನ್ನ ತಂದೆಯೂ, ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಪ್ರಾಂತದಲ್ಲಿ ಅವರು ವಾಸವಾಗಿರಲಿ. ಅವರಲ್ಲಿ ಯಾರಾದರೂ ಸಮರ್ಥರೆಂದು ನೀನು ತಿಳಿದರೆ, ಅವರನ್ನು ನಮಗಿರುವ ಪಶುಗಳ ಮೇಲೆ ವಿಚಾರಕರನ್ನಾಗಿ ಇರಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:6
24 ತಿಳಿವುಗಳ ಹೋಲಿಕೆ  

ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.


ಫರೋಹನ ಅಪ್ಪಣೆಯ ಮೇರೆಗೆ ಜೋಸೆಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಈಜಿಪ್ಟಿನಲ್ಲಿ ವಾಸಸ್ಥಾನವನ್ನು ನೇಮಿಸಿ, ಅದರಲ್ಲಿ ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸೊತ್ತನ್ನು ಕೊಟ್ಟನು.


ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.


ಅವನಿಗೆ ಇಳಕಲಿನ ಪ್ರದೇಶದಲ್ಲೂ ತಪ್ಪಲ ಸೀಮೆಯಲ್ಲೂ ಅಲ್ಲದೆ ಅಡವಿಯಲ್ಲೂ ಪಶುಪ್ರಾಣಿಗಳ ದೊಡ್ಡಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ವ್ಯವಸಾಯದಲ್ಲಿ ಅವನಿಗೆ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿತೋಟಗಳ ಕೆಲಸಗಾರರನ್ನು ನೇಮಿಸಿದನು.


ಇಸ್ರಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಮೇಲೆ ಅಧಿಪತಿಗಳನ್ನು ನೇಮಿಸಿದನು.


ಕಾನಾನ್ ನಾಡಿನಲ್ಲಿ ಬರವು ಘೋರವಾದ್ದರಿಂದ ನಿಮ್ಮ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ. ಆದ್ದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ಅದೇ ದಿನ ಸೌಲನ ಪಶುಪಾಲರಲ್ಲಿ ಮುಖ್ಯಸ್ಥನಾದ ದೋಯೇಗನೆಂಬ ಎದೋಮ್ಯನು ಸರ್ವೇಶ್ವರನ ಆಲಯದಲ್ಲಿ ತಂಗಬೇಕಾಗಿತ್ತು.


ಮಿಕ್ಕವರು ಆ ಮಾತನ್ನು ಗಮನಕ್ಕೆ ತಂದುಕೊಳ್ಳದೆ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಹೊಲಗದ್ದೆಗಳಲ್ಲೇ ಬಿಟ್ಟರು.


ಮೋಶೆ ಮತ್ತು ಆರೋನರು ಆವಿಗೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತುಕೊಂಡರು. ಮೋಶೆ ಆ ಬೂದಿಯನ್ನು ಆಕಾಶಕ್ಕೆ ತೂರಿದನು. ಅದು ಮನುಷ್ಯರಲ್ಲೂ ಪಶುಪ್ರಾಣಿಗಳಲ್ಲೂ ಕುರುಗಳನ್ನೆಬ್ಬಿಸಿ ಒಡೆದು ಹುಣ್ಣಾಗುವಂತೆ ಮಾಡಿತು.


ಜೋಸೆಫನು, “ನಿಮ್ಮ ದನಕರುಗಳನ್ನು ತನ್ನಿ, ಹಣವಿಲ್ಲದಿದ್ದರೆ ದನಕರುಗಳನ್ನು ತೆಗೆದುಕೊಂಡು ಧಾನ್ಯ ಕೊಡಿಸುತ್ತೇನೆ,” ಎಂದನು.


ಇದರಲ್ಲಿ ವಾಸಿಸಿ, ವ್ಯಾಪಾರಮಾಡಿ, ನೀವು ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು,” ಎಂದು ಹೇಳಿದನು.


ಅದೂ ಅಲ್ಲದೆ, “ಇಗೋ, ನನ್ನ ನಾಡು ನಿನಗೆ ತೆರೆದಿದೆ; ಇಷ್ಟಬಂದ ಕಡೆ ಹೋಗಿ ವಾಸಮಾಡು,” ಎಂದನು.


ನಾಡೆಲ್ಲಾ ನಿನ್ನ ಕಣ್ಮುಂದಿದೆ. ದಯವಿಟ್ಟು ನನ್ನನ್ನು ಬಿಟ್ಟು ಬೇರೆ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುತ್ತೇನೆ".


ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.


ಗೋಷೆನ್ ಪ್ರಾಂತ್ಯದಲ್ಲಿ ನನ್ನ ಬಳಿಯಲ್ಲೇ ನೀವೂ ನಿಮ್ಮ ಮಕ್ಕಳೂ ಮೊಮ್ಮಕ್ಕಳೂ ದನ, ಕುರಿ ಮೊದಲಾದ ಆಸ್ತಿಪಾಸ್ತಿಗಳ ಸಮೇತ ವಾಸಮಾಡಬಹುದು.


'ಚಿಕ್ಕಂದಿನಿಂದ ಇಂದಿನವರೆಗೂ ನಿಮ್ಮ ಸೇವಕರಾದ ನಾವು, ನಮ್ಮ ಪೂರ್ವಜರ ಪದ್ಧತಿಯಂತೆ ಮಂದೆ ಮೇಯಿಸುವವರು,’ ಎಂದು ಹೇಳಿರಿ. ಆಗ ಗೋಷೆನ್ ಪ್ರಾಂತ್ಯವನ್ನು ನಿಮ್ಮ ನಿವಾಸಕ್ಕೆ ನೇಮಿಸುವನು - ಏಕೆಂದರೆ ಕುರಿ ಕಾಯುವವರೆಂದರೆ ಈಜಿಪ್ಟಿಯರಿಗೆ ಹಿಡಿಸದು,” ಎಂದು ಹೇಳಿದನು.


ಫರೋಹನು ಜೋಸೆಫನಿಗೆ, “ನಿನ್ನ ತಂದೆಯೂ ಅಣ್ಣತಮ್ಮಂದಿರು ನಿನ್ನ ಬಳಿಗೆ ಬಂದಿದ್ದಾರಲ್ಲವೆ?


ಯೌವನಸ್ಥನಾದ ಯಾರೊಬ್ಬಾಮನು ಬಹುಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಜೋಸೆಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.


ನೋಡು, ನಿನ್ನ ಕೈಗೆ ಹಾಕಿದ್ದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸಿದ್ದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದಿದ್ದರೆ ಬರಬೇಕಾಗಿಲ್ಲ. ಇಗೋ ದೇಶವೆಲ್ಲ ನಿನ್ನ ಕಣ್ಣೆದುರಿಗಿದೆ. ನಿನಗೆ ಯಾವ ಕಡೆಗೆ ಹೋಗುವುದು ಸರಿಯೆಂದು, ಒಳ್ಳೆಯದೆಂದು ತೋರುತ್ತದೋ ಆ ಕಡೆಗೆ ಹೋಗು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು