Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:12 - ಕನ್ನಡ ಸತ್ಯವೇದವು C.L. Bible (BSI)

12 ಆಗ ಜೋಸೆಫನು ತಂದೆಯ ಮಡಲಿನಿಂದ ತನ್ನ ಮಕ್ಕಳನ್ನು ಎತ್ತಿಕೊಂಡು ತಂದೆಗೆ ನೆಲದ ತನಕ ಬಾಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಯೋಸೇಫನು ಅವರನ್ನು ತಂದೆಯ ಮಡಿಲಿನಿಂದ ಎತ್ತಿಕೊಂಡು ತನ್ನ ತಂದೆಗೆ ತಲೆಬಾಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಯೋಸೇಫನು ಅವರನ್ನು ತಂದೆಯ ಮೊಣಕಾಲಿನ ಕಡೆಯಿಂದ ಬರಮಾಡಿ [ಅವನಿಗೆ] ಅಡ್ಡಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಯೋಸೇಫನು ಇಸ್ರೇಲನ ತೊಡೆಯ ಮೇಲೆ ಕುಳಿತಿದ್ದ ತನ್ನ ಗಂಡುಮಕ್ಕಳನ್ನು ಎತ್ತಿಕೊಂಡನು. ಬಳಿಕ ಅವರು ಇಸ್ರೇಲನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೋಸೇಫನು ಅವರನ್ನು ಮೊಣಕಾಲುಗಳ ಬಳಿಯಿಂದ ಬರಮಾಡಿ ತಂದೆಗೆ ಅಡ್ಡಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:12
15 ತಿಳಿವುಗಳ ಹೋಲಿಕೆ  

ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.


ಮಕ್ಕಳೇ, ಪ್ರಭುವಿನಲ್ಲಿ ನಿಮ್ಮ ತಂದೆತಾಯಿಗಳ ಮಾತಿಗೆ ಕಿವಿಗೊಡಿ. ಇದು ಧರ್ಮಸಮ್ಮತವಾದುದು.


ಮಕ್ಕಳು ಆಕೆಯನ್ನು ಧನ್ಯಳೆಂದು ಹೊಗಳುವರು.


ಆಕೆ ಹತ್ತಿರ ಬಂದು ಅವನ ಪಾದಗಳಿಗೆ ಬಿದ್ದು, ಸಾಷ್ಟಾಂಗ ನಮಸ್ಕಾರ ಮಾಡಿ, ಮಗನನ್ನು ತೆಗೆದುಕೊಂಡು ಹೋದಳು.


ಆಕೆ ಅದೋನೀಯನ ಪರವಾಗಿ ಮಾತಾಡಲು ಅರಸ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನೇ ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು ರಾಜಮಾತೆಗಾಗಿ ಒಂದು ಆಸನವನ್ನು ತರಿಸಿದನು. ಆಕೆ ಅವನ ಬಲಗಡೆಯಲ್ಲಿ ಕುಳಿತುಕೊಂಡಳು.


“ತಲೆನರೆತ ವೃದ್ಧರ ಮುಂದೆ ಎದ್ದುನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.


ಪ್ರತಿಯೊಬ್ಬ ವ್ಯಕ್ತಿಯು ತನ್ನ ತಂದೆತಾಯಿಗಳ ವಿಷಯ಼ದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.


ಕೂಡಲೇ ಮೋಶೆ ನೆಲದಮೇಲೆ ಅಡ್ಡಬಿದ್ದು ನಮಸ್ಕರಿಸಿ,


ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.


ತಾನೇ ಅವರ ಮುಂದಾಗಿ ನಡೆದನು. ತನ್ನ ಅಣ್ಣನನ್ನು ಸಮೀಪಿಸುತ್ತಿರುವಾಗ ಏಳು ಸಾರಿ ನೆಲದ ತನಕ ಬಗ್ಗಿ ನಮಸ್ಕರಿಸಿದನು.


ಅಬ್ರಹಾಮನು ಎದ್ದುನಿಂತು ಆ ಹಿತ್ತಿಯ ನಾಡಿಗರಿಗೆ ಬಾಗಿ ನಮಸ್ಕರಿಸಿದನು.


ಆ ದೂತರಿಬ್ಬರು ಸೊದೋಮಿಗೆ ಬಂದಾಗ ಸಾಯಂಕಾಲವಾಗಿತ್ತು. ಲೋಟನು ಆ ಊರಬಾಗಿಲಲ್ಲೇ ಕುಳಿತುಕೊಂಡಿದ್ದನು. ದೂತರನ್ನು ಕಂಡದ್ದೇ ಅವನು ಎದ್ದುಬಂದು, ಬಾಗಿ ನಮಸ್ಕರಿಸಿ,


ಅವನು ಕಣ್ಣೆತ್ತಿ ನೋಡಿದಾಗ ಯಾರೋ ಮೂರು ಮಂದಿ ಪುರುಷರು ಹತ್ತಿರದಲ್ಲೇ ನಿಂತಿದ್ದರು. ಅವರನ್ನು ಎದುರುಗೊಳ್ಳಲು ಅಬ್ರಹಾಮನು ಕೂಡಲೆ ಗುಡಾರದ ಬಾಗಿಲಿನಿಂದ ಓಡಿಬಂದು, ತಲೆಬಾಗಿ ನಮಸ್ಕರಿಸಿ,


ಅನಂತರ ಜೋಸೆಫನಿಗೆ, “ನಿನ್ನ ಮುಖವನ್ನು ಮತ್ತೆ ನೋಡುವೆನೆಂದು ನಾನು ನೆನಸಿರಲಿಲ್ಲ. ಈಗ ನಿನ್ನನ್ನು ಮಾತ್ರವಲ್ಲ, ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾರೆ!” ಎಂದನು.


ತರುವಾಯ ಜೋಸೆಫನು ಎಫ್ರಯಿಮನನ್ನು ತನ್ನ ಬಲಕ್ಕೆ ಯಕೋಬನ ಎಡಗೈಗೆದುರಾಗಿ ಮತ್ತು ಮನಸ್ಸೆಯನ್ನು ತನ್ನ ಎಡಕ್ಕೆ, ಯಕೋಬನ ಬಲಗೈಗೆದುರಾಗಿ, ತಂದೆಯ ಮುಂದೆ ನಿಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು