Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:14 - ಕನ್ನಡ ಸತ್ಯವೇದವು C.L. Bible (BSI)

14 ಮನಸ್ಸೆಯು ಜೇಷ್ಠಮಗನಾಗಿದ್ದರೂ ಯಕೋಬನು ತನ್ನ ಕೈಗಳನ್ನು ಅಡ್ಡಡ್ಡವಾಗಿ ಚಾಚಿ ಕಿರಿಯವನಾದ ಎಫ್ರಯಿಮನ ತಲೆಯ ಮೇಲೆ ಬಲಗೈಯನ್ನು, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನು ಇಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮನಸ್ಸೆಯು ಚೊಚ್ಚಲ ಮಗನಾಗಿದ್ದರೂ, ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮನಸ್ಸೆಯು ಚೊಚ್ಚಲುಮಗನಾಗಿದ್ದರೂ ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟು ಯೋಸೇಫನನ್ನು ಆಶೀರ್ವದಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ಇಸ್ರೇಲನು ತನ್ನ ಕೈಗಳನ್ನು ವಾರೆ ಮಾಡಿ ತನ್ನ ಬಲಗೈಯನ್ನು ಚಿಕ್ಕ ಮಗನಾದ ಎಫ್ರಾಯೀಮನ ತಲೆಯ ಮೇಲಿಟ್ಟು ಎಡಗೈಯನ್ನು ದೊಡ್ಡ ಮಗನಾದ ಮನಸ್ಸೆಯ ತಲೆಯ ಮೇಲಿಟ್ಟನು. ಮನಸ್ಸೆಯು ಹಿರಿಯ ಮಗನಾಗಿದ್ದರೂ ಇಸ್ರೇಲನು ಮನಸ್ಸೆಯ ತಲೆಯ ಮೇಲೆ ಎಡಗೈಯನ್ನಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯೀಮನ ತಲೆಯ ಮೇಲೆಯೂ, ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ, ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:14
24 ತಿಳಿವುಗಳ ಹೋಲಿಕೆ  

ಜೇಷ್ಠಮಗ ಹುಟ್ಟಿದಾಗ ಜೋಸೆಫನು, “ನಾನು ನನ್ನ ಕಷ್ಟದುಃಖವನ್ನೂ ತಂದೆಯ ಮನೆಯವರನ್ನೂ ಮರೆಯುವಂತೆ ದೇವರು ಮಾಡಿದ್ದಾರಲ್ಲಾ!” ಎಂದುಕೊಂಡು ಆ ಮಗುವಿಗೆ, ‘ಮನಸ್ಸೆ’ ಎಂದು ಹೆಸರಿಟ್ಟನು.


ದೇವರ ಸೇವೆಗೆಂದು ಅವಸರದಿಂದ ಯಾರ ಮೇಲೂ ಹಸ್ತನಿಕ್ಷೇಪ ಮಾಡಿ ದೀಕ್ಷೆ ನೀಡಬೇಡ. ಹಾಗೆ ಮಾಡಿದರೆ, ಅವರ ಪಾಪಗಳಲ್ಲಿ ನೀನೂ ಭಾಗಿಯಾಗುವೆ. ನೀನು ಪರಿಶುದ್ಧನಾಗಿರುವ ಹಾಗೆ ನೋಡಿಕೋ.


ನಿನ್ನಲ್ಲಿರುವ ವರದಾನವನ್ನು ಅಲಕ್ಷಿಸಬೇಡ. ಸಭೆಯ ಹಿರಿಯರು ನಿನ್ನ ಮೇಲೆ ದೈವವಾಕ್ಯದ ಉಚ್ಚಾರದೊಂದಿಗೆ ಹಸ್ತನಿಕ್ಷೇಪಮಾಡಿದಾಗ ಈ ವರವು ನಿನಗೆ ಲಭಿಸಿತಲ್ಲವೇ?


ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ ಕಳುಹಿಸಿಕೊಟ್ಟರು.


ಪ್ರೇಷಿತರ ಮುಂದೆ ಅವರನ್ನು ನಿಲ್ಲಿಸಿದರು. ಪ್ರೇಷಿತರು ಪ್ರಾರ್ಥನೆಮಾಡಿ ಅವರ ಮೇಲೆ ಹಸ್ತನಿಕ್ಷೇಪ ಮಾಡಿದರು.


ಆಕೆಯ ಮೇಲೆ ತಮ್ಮ ಹಸ್ತಗಳನ್ನಿಟ್ಟರು. ತಕ್ಷಣವೇ ಆಕೆ ನೆಟ್ಟಗಾದಳು ಮತ್ತು ದೇವರಿಗೆ ಸ್ತುತಿಸ್ತೋತ್ರ ಸಲ್ಲಿಸಿದಳು.


ಸಂಜೆಯಾಗುತ್ತಿದ್ದಂತೆ ಜನರು ತಮ್ಮ ಮನೆಯಲ್ಲಿ ವಿಧವಿಧವಾದ ಕಾಯಿಲೆಯಿಂದ ನರಳುತ್ತಿದ್ದವರನ್ನೆಲ್ಲಾ ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಪ್ರತಿಯೊಬ್ಬನ ಮೇಲೆ ತಮ್ಮ ಕೈಯಿಟ್ಟು ಗುಣಪಡಿಸಿದರು.


ತರುವಾಯ ಆ ಮಕ್ಕಳ ಮೇಲೆ ಕೈಯಿಟ್ಟು ಆಶೀರ್ವದಿಸಿದರು. ಬಳಿಕ ಅಲ್ಲಿಂದ ಹೊರಟುಹೋದರು.


ಅನಂತರ ಕೆಲವರು ಚಿಕ್ಕಮಕ್ಕಳನ್ನು ಯೇಸುಸ್ವಾಮಿಯ ಬಳಿಗೆ ತಂದರು. ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಿಕೊಂಡರು. ಶಿಷ್ಯರು ಅವರನ್ನು ಗದರಿಸಿದರು.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


“ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.


ವಿಜಯಸಾಧನ ಪ್ರಭುವಿನಾ ಬಲಗೈಯಿಂದ I ಪರಾಕ್ರಮ, ಪ್ರದರ್ಶನವೂ ಅದರಿಂದ” II


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.


ಈಗ ಇಸ್ರಯೇಲರ ಚೊಚ್ಚಲು ಮಕ್ಕಳಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ.


ಲೇವಿಯರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸು. ಇಸ್ರಯೇಲರು ಅವರ ಮೇಲೆ ತಮ್ಮ ಕೈಗಳನ್ನು ಇಡಲಿ.


ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ!


“ಹಾಗಲ್ಲ ಅಪ್ಪಾ, ಇವನೇ ಜೇಷ್ಠ ಪುತ್ರ; ಬಲಗೈಯನ್ನು ಇವನ ತಲೆಯ ಮೇಲೆ ಇಡು”, ಎಂದು ಹೇಳಿದ.


ಈಜಿಪ್ಟಿನಲ್ಲಿ ಜೋಸೆಫನಿಗೆ ಓನ್ ಪಟ್ಟಣದ ಆಚಾರ್ಯ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದ ಮನಸ್ಸೆ ಮತ್ತು ಎಫ್ರಯಿಮ್.


ಎರಡನೆಯ ಮಗನು ಹುಟ್ಟಿದಾಗ, ಯಾವ ದೇಶದಲ್ಲಿ ನನಗೆ ಸಂಕಷ್ಟವಿತ್ತೋ ಆ ದೇಶದಲ್ಲಿ ದೇವರು ನನಗೆ ಸಮೃದ್ಧಿಯನ್ನು ದಯಪಾಲಿಸಿದ್ದಾರೆ!” ಎಂದು ಆ ಮಗನಿಗೆ ‘ಎಫ್ರಾಯೀಮ್’ ಎಂದು ನಾಮಕರಣ ಮಾಡಿದನು.


ತರುವಾಯ ಜೋಸೆಫನು ಎಫ್ರಯಿಮನನ್ನು ತನ್ನ ಬಲಕ್ಕೆ ಯಕೋಬನ ಎಡಗೈಗೆದುರಾಗಿ ಮತ್ತು ಮನಸ್ಸೆಯನ್ನು ತನ್ನ ಎಡಕ್ಕೆ, ಯಕೋಬನ ಬಲಗೈಗೆದುರಾಗಿ, ತಂದೆಯ ಮುಂದೆ ನಿಲ್ಲಿಸಿದನು.


ತನ್ನ ತಂದೆ ಬಲಗೈಯನ್ನು ಎಫ್ರಯಿಮನ ತಲೆಯ ಮೇಲೆ ಇಟ್ಟದ್ದು ಜೋಸೆಫನಿಗೆ ಹಿಡಿಸಲಿಲ್ಲ. ಅವನು ಆ ಕೈಯನ್ನು ಹಿಡಿದು ಎಫ್ರಯಿಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವಂತೆ ತಂದೆಗೆ,


ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅಮ್ಮೀಹೂದನ ಮಗ ಎಲೀಷಾಮಾ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು