Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:15 - ಕನ್ನಡ ಸತ್ಯವೇದವು C.L. Bible (BSI)

15 ಜೋಸೆಫನನ್ನು ಹೀಗೆಂದು ಆಶೀರ್ವದಿಸಿದನು: “ನನ್ನ ಪಿತೃಗಳಾದ ಅಬ್ರಹಾಮ್, ಇಸಾಕರು ಯಾವ ದೇವರ ಸಮ್ಮುಖದಲ್ಲಿ ನಡೆದುಕೊಂಡರೋ ಆ ದೇವರು, ಚಿಕ್ಕಂದಿನಿಂದ ಇಂದಿನವರೆಗೆ ನನ್ನನ್ನು ಪರಿಪಾಲಿಸಿಕೊಂಡು ಬಂದ ಆ ದೇವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರು ಸೇವಿಸಿದ ದೇವರಾಗಿಯೂ ನನ್ನನ್ನು ಚಿಕ್ಕಂದಿನಿಂದ ಈ ದಿನದವರೆಗೂ ಪರಾಂಬರಿಸುತ್ತಾ ಬಂದ ದೇವರಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಳಿಕ ಇಸ್ರೇಲನು ಯೋಸೇಫನನ್ನು ಆಶೀರ್ವದಿಸಿ ಹೀಗೆಂದನು: “ನನ್ನ ಪೂರ್ವಿಕರಾದ ಅಬ್ರಹಾಮನೂ ಇಸಾಕನೂ ನಮ್ಮ ದೇವರನ್ನು ಆರಾಧಿಸಿದರು. ಆ ದೇವರೇ ನನ್ನನ್ನು ನನ್ನ ಜೀವಮಾನವೆಲ್ಲಾ ನಡೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಅವನು ಯೋಸೇಫನನ್ನು ಹೀಗೆ ಆಶೀರ್ವದಿಸಿದನು, “ನನ್ನ ತಂದೆ ಅಬ್ರಹಾಮನೂ ಇಸಾಕನೂ ಯಾವ ದೇವರ ಮುಂದೆ ನಡೆದುಕೊಂಡರೋ, ಆ ದೇವರೇ ನಾನು ಹುಟ್ಟಿದಂದಿನಿಂದ ಇಂದಿನವರೆಗೆ ನನಗೆ ಕುರುಬ ಆಗಿದ್ದ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:15
39 ತಿಳಿವುಗಳ ಹೋಲಿಕೆ  

ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ನೀವು ಕ್ರಿಸ್ತಯೇಸುವನ್ನು ಪ್ರಭುವಾಗಿ ಸ್ವೀಕರಿಸಿರುವುದರಿಂದ, ಅವರೊಡನೆ ಐಕ್ಯತೆಯಿಂದ ಬಾಳಿರಿ.


ವಿಶ್ವಾಸದಿಂದಲೇ ಯಕೋಬನು, ತಾನು ಸಾಯುವ ಸಮಯದಲ್ಲಿ ಜೋಸೆಫನ ಪ್ರತಿಯೊಬ್ಬ ಮಗನನ್ನೂ ಆಶೀರ್ವದಿಸಿದನು; ಊರುಗೋಲಿನ ಮೇಲೆ ಬಾಗಿಕೊಂಡೇ ದೇವರನ್ನು ಆರಾಧಿಸಿದನು.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಅದಕ್ಕೆ ನನ್ನ ಉತ್ತರ ಇದು: ನೀವು ಉಂಡರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿ.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು.


ಮಾನವನು ಪಡುವ ಪ್ರಯಾಸವೆಲ್ಲ ಅವನ ಹೊಟ್ಟೆಪಾಡಿಗಾಗಿಯೇ. ಆದರೂ ಅವನಿಗೆ ತೃಪ್ತಿಯಿಲ್ಲ.


ಇಗೋ, ನನಗೆ ಕಂಡುಬಂದ ಇನ್ನೊಂದು ವಿಷಯ: ದೇವರು ಮನುಷ್ಯನಿಗೆ ದಯಪಾಲಿಸಿರುವ ಅಲ್ಪಕಾಲಾವಧಿಯಲ್ಲಿ ಅವನು ತಿಂದು ಕುಡಿಯಬೇಕು. ಲೋಕದಲ್ಲಿ ಪಡಬೇಕಾದ ದುಡಿಮೆಯಲ್ಲೂ ಸುಖವನ್ನು ಅನುಭವಿಸಬೇಕು. ಇದು ಅವನಿಗೆ ಉಚಿತವಾದುದು. ಉತ್ತಮವಾದುದು. ಇದೇ ಅವನಿಗೆ ಬಂದಿರುವ ಪಾಲು.


ದುಡಿಯುವವನು ಸ್ವಲ್ಪ ತಿಂದರೂ ಸರಿ, ಹೆಚ್ಚು ತಿಂದರೂ ಸರಿ, ಹಾಯಾಗಿ ನಿದ್ರಿಸುತ್ತಾನೆ. ಐಶ್ವರ್ಯವಂತನ ಸಂಪತ್ತಾದರೋ ಅವನಿಗೆ ನಿದ್ರೆ ಬರಲು ಬಿಡುವುದಿಲ್ಲ.


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಪ್ರಭು ಕುರಿಗಾಹಿಯಾಗಿರಲು ನನಗೆ I ಕುಂದುಕೊರತೆಗಳೆಲ್ಲಿಯವು ಎನಗೆ? II


ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II


ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ.


ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು:


ಇವೇ ಇಸ್ರಯೇಲಿನ ಹನ್ನೆರಡು ಕುಲಗೋತ್ರಗಳು; ಇದೇ ಅವರ ತಂದೆ ಕೊಟ್ಟ ಆಶೀರ್ವಾದ: ಒಂದೊಂದು ಕುಲಕ್ಕೆ ಅವನು ನುಡಿದ ಒಂದೊಂದು ಆಶೀರ್ವಚನ.


ಆದರೂ ಯಕೋಬಕುಲದ ಸರ್ವ ಬಲಾಢ್ಯನ ಶಕ್ತಿಯಿಂದ ಇಸ್ರಯೇಲನ ಪೊರೆಬಂಡೆ - ಪರಿಪಾಲಕನ ನಾಮದಿಂದ ನಿಂತಿತು ಸ್ಥಿರವಾಗಿ ಅವನ ಬಿಲ್ಲು ಚುರುಕುಗೊಂಡಿತು ಅವನ ಕೈಗಳ ಬಲ್ಬು.


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ನಾನು ಸ್ಮಾರಕಸ್ತಂಭವಾಗಿ ನೆಟ್ಟಿರುವ ಈ ಕಲ್ಲು ದೇವರ ಮನೆಯಾಗುವುದು; ಅದು ಮಾತ್ರವಲ್ಲ, ನೀವು ನನಗೆ ಕೊಡುವ ಎಲ್ಲ ಆಸ್ತಿಪಾಸ್ತಿಯಲ್ಲಿ ಹತ್ತರಲ್ಲಿ ಒಂದು ಪಾಲನ್ನು ನಿಮಗೆ ಸಮರ್ಪಿಸುತ್ತೇನೆಂದು ಮಾತುಕೊಡುತ್ತೇನೆ.”


ಅದೂ ಅಲ್ಲದೆ ಅವನು ಹೀಗೆಂದು ಹರಕೆ ಮಾಡಿಕೊಂಡನು; “ದೇವರು ನನ್ನ ಸಂಗಡವಿದ್ದು ನಾನು ಕೈಗೊಂಡ ಪ್ರಯಾಣದಲ್ಲಿ ನನ್ನನ್ನು ಕಾಪಾಡಿ, ಹೊಟ್ಟೆಗೆ ಊಟವನ್ನೂ ಮೈಗೆ ಬಟ್ಟೆಯನ್ನೂ ಕೊಟ್ಟು,


“ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಲಿ; ನಿನಗೆ ಬಹಳ ಸಂತತಿಯನ್ನು ಕೊಡಲಿ; ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;


ಅದರಿಂದ ನನಗಿಷ್ಟವಾಗಿರುವ ಸವಿಯೂಟವನ್ನೂ ಅಣಿಮಾಡಿ ಬಡಿಸು. ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಮನಸಾರೆ ಆಶೀರ್ವದಿಸುತ್ತೇನೆ,” ಎಂದು ಹೇಳಿದನು.


ಕೊಡದ ನೀರನ್ನು ತೊಟ್ಟಿಗೆ ಹೊಯ್ದು ಮತ್ತೆ ನೀರು ತರುವುದಕ್ಕೆ ಬಾವಿಗೆ ಓಡಿದಳು. ಹೀಗೆ ಅವನ ಎಲ್ಲ ಒಂಟೆಗಳಿಗೂ ತಂದುಕೊಟ್ಟಳು.


ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.


ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.


ನೀನು ಹೋಗಿ ಇಸ್ರಯೇಲರ ಹಿರಿಯರನ್ನು ಕೂಡಿಸು. ಅವರಿಗೆ, “ನಿಮ್ಮ ಪೂರ್ವಜರ ದೇವರು, ಅಂದರೆ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರು ಆಗಿರುವ ಸರ್ವೇಶ್ವರ ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ ಹೀಗೆಂದಿದ್ದಾರೆ: ನಿಮ್ಮನ್ನೂ ಈಜಿಪ್ಟ್ ದೇಶದಲ್ಲಿ ನಿಮಗೆ ಸಂಭವಿಸಿದ್ದೆಲ್ಲವನ್ನೂ ನಾನು ಕಣ್ಣಾರೆ ಕಂಡು ತಿಳಿದುಕೊಂಡಿದ್ದೇನೆ.


“ಇದರಿಂದ ಆ ಜನರು ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನಿನಗೆ ಕಾಣಸಿದ್ದು ನಿಜ ಎಂಬುದನ್ನು ನಂಬುವರು,” ಎಂದು ಹೇಳಿದರು.


ಯಕೋಬನ ಮಕ್ಕಳಲ್ಲಿ ಹಿರಿಯವನಾದ ರೂಬೇನನ ವಂಶಜರು ಇವರು: (ರೂಬೇನ್ ತನ್ನ ತಂದೆಯ ಉಪಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದರಿಂದ ಚೊಚ್ಚಲು ಮಗನ ಹಕ್ಕುಬಾಧ್ಯತೆಗಳನ್ನು ಕಳೆದುಕೊಂಡನು. ಆ ಹಕ್ಕುಗಳು ಜೋಸೆಫನಿಗೆ ಕೊಡಲ್ಪಟ್ಟವು;


ಅದಕ್ಕೆ ಅವರು, ‘ಯಾವ ಸರ್ವೇಶ್ವರ ಸ್ವಾಮಿಗೆ ನಾನು ವಿಧೇಯನಾಗಿ ನಡೆದುಕೊಂಡೆನೋ ಅವರು ತಮ್ಮ ದೂತನನ್ನು ನಿನ್ನೊಂದಿಗೆ ಕಳುಹಿಸುವರು. ನನ್ನ ತಂದೆಯ ಮನೆತನಕ್ಕೆ ಸೇರಿದ ಬಂಧುಬಳಗದವರಿಂದಲೇ ನನ್ನ ಮಗನಿಗೆ ಹೆಣ್ಣು ತರಲು ನಿನಗೆ ಅನುಕೂಲ ಮಾಡಿಕೊಡುವರು.


ಇಸಾಕನು ಅವನ ಉಡುಗೆತೊಡಿಗೆಗಳ ಸುವಾಸನೆಯನ್ನು ಮೂಸಿನೋಡಿ, ಅವನಿಗೆ ಹೀಗೆಂದು ಆಶೀರ್ವಾದ ಮಾಡಿದನು - “ನನ್ನ ಸುಕುಮಾರನಿಂದೇಳುವ ಸುವಾಸನೆ ಸರ್ವೇಶ್ವರನಾಶೀರ್ವದಿಸಿದ ಮೊಗೆನೆಲದ ಸುವಾಸನೆಯಂತಿದೆ.


ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ಕಡೆಯೆಲ್ಲ ನನ್ನೊಂದಿಗಿದ್ದ ದೇವರಿಗೆ ಅಲ್ಲೊಂದು ಬಲಿಪೀಠವನ್ನು ಕಟ್ಟಿಸುತ್ತೇನೆ,” ಎಂದು ಹೇಳಿದನು.


ಜೋಸೆಫನು ಫಲಭರಿತ ವೃಕ್ಷದಂತೆ ಒರತೆ ಬಳಿಯಲೆ ಬೆಳೆದ ದ್ರಾಕ್ಷಿಯಂತೆ ಚಾಚಿದೆ ಅದರ ರೆಂಬೆ ಬೇಲಿಯಿಂದಾಚೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು