Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:16 - ಕನ್ನಡ ಸತ್ಯವೇದವು C.L. Bible (BSI)

16 ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:16
46 ತಿಳಿವುಗಳ ಹೋಲಿಕೆ  

ತನ್ನ ದಾಸರನು ಉದ್ಧಾರಮಾಡದಿರನು ಪ್ರಭು I ತನ್ನ ಶರಣರೊಳೊಬ್ಬರನು ದಂಡಿಸನಾ ವಿಭು II


ಜೋಸೆಫನು ಫಲಭರಿತ ವೃಕ್ಷದಂತೆ ಒರತೆ ಬಳಿಯಲೆ ಬೆಳೆದ ದ್ರಾಕ್ಷಿಯಂತೆ ಚಾಚಿದೆ ಅದರ ರೆಂಬೆ ಬೇಲಿಯಿಂದಾಚೆ.


“ನಾನು ನಿನ್ನ ಬಳಿಗೆ ಈಜಿಪ್ಟ್ ದೇಶಕ್ಕೆ ಬರುವುದಕ್ಕೆ ಮುಂಚೆ ಇಲ್ಲಿ ಹುಟ್ಟಿದ್ದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಬೇಕು. ರೂಬೇನ್ ಮತ್ತು ಸಿಮೆಯೋನ್ ನನ್ನ ಮಕ್ಕಳಾಗಿರುವಂತೆಯೇ ಎಫ್ರಯಿಮ್ ಮತ್ತು ಮನಸ್ಸೆ ನನ್ನ ಮಕ್ಕಳಾಗಿರಲಿ.


ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.


ಯೆಹೋಶುವನು ಜೋಸೆಫ್ಯರಾದ ಎಫ್ರಯಿಮ್ - ಮನಸ್ಸೆಕುಲದ ಆ ಜನರಿಗೆ, “ನೀವು ಮಹಾಜನಾಂಗ ಹಾಗೂ ಶಕ್ತಿಶಾಲಿಗಳೆಂಬುದೇನೋ ನಿಜ. ನೀವು ಒಂದು ಪಾಲಿಗಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ.


ವಿಶ್ವಾಸದಿಂದಲೇ ಯಕೋಬನು, ತಾನು ಸಾಯುವ ಸಮಯದಲ್ಲಿ ಜೋಸೆಫನ ಪ್ರತಿಯೊಬ್ಬ ಮಗನನ್ನೂ ಆಶೀರ್ವದಿಸಿದನು; ಊರುಗೋಲಿನ ಮೇಲೆ ಬಾಗಿಕೊಂಡೇ ದೇವರನ್ನು ಆರಾಧಿಸಿದನು.


ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು


ಇವರನ್ನು ಲೋಕದಿಂದ ತೆಗೆದುಬಿಡಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತಿಲ್ಲ. ಆದರೆ ಕೇಡಿಗನಿಂದ ಇವರನ್ನು ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಪ್ರಭು ಕಾಯುವನು ನಿನ್ನ ಪ್ರಾಣವನು I ಸಕಲ ಕೇಡಿನಿಂದ ಕಾಪಾಡುವನು II


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಅವರ ಪೈಕಿ ಕೆಲವರು ಪ್ರಭುವನ್ನು ಶೋಧಿಸಿದರು. ಪರಿಣಾಮವಾಗಿ ಸರ್ಪಗಳಿಂದ ನಾಶವಾದರು. ಅವರಂತೆ ಪ್ರಭುವನ್ನು ಶೋಧನೆಮಾಡುವುದು ನಮಗೆ ಬೇಡ.


ಹೀಗೆ ನನ್ನ ಜನರು ಎದೋಮಿನ ಮಿಕ್ಕಭಾಗವನ್ನೂ ಸರ್ವೇಶ್ವರನ ಪ್ರಜೆ ಎನಿಸಿಕೊಂಡ ಸಕಲ ಜನಾಂಗಗಳನ್ನೂ ಸ್ವಾಧೀನಪಡಿಸಿಕೊಳ್ಳುವರು.” ಈ ಕಾರ್ಯವನ್ನು ಸಾಧಿಸುವಂಥ ಸರ್ವೇಶ್ವರಸ್ವಾಮಿಯ ನುಡಿಯಿದು:


ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ.


ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೇ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಂಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ದಿಕ್ಕು ತೋಚದವನಂತೆ ನಿಶ್ಚಲರಾಗಿರುವಿರಿ, ಏಕೆ? ರಕ್ಷಿಸಲಾಗದ ರಣಧೀರನಂತಿರುವಿರಿ, ಏಕೆ? ಆದರೂ ಸರ್ವೇಶ್ವರಾ, ನೀವು ನಮ್ಮ ಮಧ್ಯೆ ಇರುವಿರಿ; ನಾವು ನಿಮ್ಮ ಹೆಸರಿನವರು, ನಮ್ಮನ್ನು ಕೈಬಿಡಬೇಡಿ.


ನಮ್ಮ ಉದ್ಧಾರಕನ ನಾಮಧೇಯ ಸೇನಾಧೀಶ್ವರ ಸರ್ವೇಶ್ವರ ಆತನೇ ಇಸ್ರಯೇಲರಿಗೆ ಪರಮಪವಿತ್ರ.


ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು I ಕಾಯುವನು ಪ್ರಭುವಿನ ದೂತನೆ ಬಂದಿಳಿದು II


ಪ್ರಭುವಿನಲ್ಲಿದೆ ನನ್ನ ಮನದಭಿಮಾನ I ದೀನರಿದನು ಕೇಳಿ, ಪಡೆಯಲಿ ಸುಮ್ಮಾನ I


ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನೇ ತಗ್ಗಿಸಿಕೊಂಡು, ನನ್ನ‍ನ್ನು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ನಾಡಿಗೆ ಆರೋಗ್ಯಭಾಗ್ಯವನ್ನು ದಯಪಾಲಿಸುವೆನು.


ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”


ಜಗದ ಜನರೆಲ್ಲರು ನಿಮ್ಮನ್ನು ಸರ್ವೇಶ್ವರನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.


ಆದರೂ ಇಸ್ರಯೇಲನ ವಂಶವು ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಿತು. ಅವರು ಶಕ್ತಿಶಾಲಿಗಳಾದರು. ಆ ದೇಶದಲ್ಲೆಲ್ಲಾ ತುಂಬಿಕೊಂಡರು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ.


“ಬೆಟ್ಟದ ಮೇಲೆ ಸರ್ವೇಶ್ವರ ಸ್ವಾಮಿಯೇ ಒದಗಿಸುತ್ತಾರೆ” ಎಂಬ ಹೇಳಿಕೆ ಇಂದಿಗೂ ರೂಢಿಯಲ್ಲಿದೆ. ಸರ್ವೇಶ್ವರ ಸ್ವಾಮಿಯ ದೂತನು ಆಕಾಶದಿಂದ ಮತ್ತೊಮ್ಮೆ ಅಬ್ರಹಾಮನನ್ನು ಕರೆದು,


ಆಗ ದೇವರು, “ನಾನೇ ದೇವರು, ನಿನ್ನ ತಂದೆ ಆರಾಧಿಸಿದ ದೇವರು, ನೀನು ಈಜಿಪ್ಟ್ ದೇಶಕ್ಕೆ ಹೋಗಲು ಅಂಜಬೇಡ; ಅಲ್ಲಿ ನಿನ್ನಿಂದ ಮಹಾಜನಾಂಗ ಉತ್ಪನ್ನವಾಗುವಂತೆ ಮಾಡುವೆನು;


ದಾವೀದನು ಬೇರೋತಿನ ರಿಮ್ಮೋನನ ಮಕ್ಕಳು ಆದ ಆ ರೇಕಾಬ್ ಹಾಗು ಬಾಣ ಎಂಬವರಿಗೆ,


ಇದು ಸರ್ವೇಶ್ವರನಾದ ನನ್ನ ಮಾತು. ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಕ್ರೂರಿಗಳ ಕೈಯಿಂದ ರಕ್ಷಿಸುವೆನು.”


“ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಸರ್ವೇಶ್ವರನಾಣೆ,


ಸವಿದು ನೋಡು ಪ್ರಭುವಿನ ಮಾಧುರ್ಯವನು I ಆತನನು ಆಶ್ರಯಿಸಿಕೊಂಡವನು ಧನ್ಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು