Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:2 - ಕನ್ನಡ ಸತ್ಯವೇದವು C.L. Bible (BSI)

2 “ನಿಮ್ಮ ಮಗ ಜೋಸೆಫನು ಬಂದಿದ್ದಾನೆ,” ಎಂದು ಯಕೋಬನಿಗೆ ತಿಳಿಸಿದಾಗ ಅವನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಿನ್ನ ಮಗನಾದ ಯೋಸೇಫನು ನಿನ್ನ ಬಳಿಗೆ ಬಂದಿದ್ದಾನೆ” ಎಂದು ಯಾಕೋಬನಿಗೆ ತಿಳಿಸಲು, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಎದ್ದು ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿನ್ನ ಮಗನಾದ ಯೋಸೇಫನು ಬಂದನೆಂದು ಯಾಕೋಬನಿಗೆ ಒಬ್ಬನು ತಿಳಿಸಲು ಅವನು ಚೇತರಿಸಿಕೊಂಡು ಮಂಚದ ಮೇಲೆ ಕೂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೋಸೇಫನು ಬಂದಾಗ ಯಾರೋ ಒಬ್ಬನು ಇಸ್ರೇಲನಿಗೆ, “ನಿನ್ನ ಮಗನಾದ ಯೋಸೇಫನು ನಿನ್ನನ್ನು ನೋಡಲು ಬಂದಿದ್ದಾನೆ” ಎಂದು ಹೇಳಿದನು. ಆಗ ಅವನು ಬಹಳ ಬಲಹೀನನಾಗಿದ್ದರೂ ಕಷ್ಟಪಟ್ಟು ಹಾಸಿಗೆಯ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯಾಕೋಬನಿಗೆ, “ನಿನ್ನ ಮಗ ಯೋಸೇಫನು ಬಂದಿದ್ದಾನೆ,” ಎಂದು ತಿಳಿಸಿದಾಗ, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕುಳಿತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:2
8 ತಿಳಿವುಗಳ ಹೋಲಿಕೆ  

ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ಮಗನೇ, ನೀನು ಬುದ್ಧಿವಂತನಾದರೆ ಆನಂದವೇ ಆನಂದ ನನ್ನ ಮನಸ್ಸಿಗೆ.


ರೋಗದಿ ಹಾಸಿಗೆ ಹಿಡಿದಿರಲು ಪ್ರಭು ಸುಧಾರಿಸುವನು I ರೋಗ ನಿವಾರಿಸಿ ಅವನಿಗೆ ಆರೋಗ್ಯವನೀಯುವನು II


ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.


ಆಗ ಸೌಲನ ಮಗ ಯೋನಾತಾನನು ಅಲ್ಲಿಗೆ ಹೋಗಿ,


ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು.


ಕೆಲವು ಕಾಲವಾದ ಮೇಲೆ, “ತಂದೆ ಬಹಳ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದಾರೆ,” ಎಂಬ ಸುದ್ದಿ ಜೋಸೆಫನಿಗೆ ಬಂದಿತು. ಅವನು ಮನಸ್ಸೆ ಮತ್ತು ಎಫ್ರಯಿಮ್‍ ಎಂಬ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು.


ಅವನು ಜೋಸೆಫನಿಗೆ, “ಸರ್ವವಲ್ಲಭರಾದ ದೇವರು ಕಾನಾನ್ ನಾಡಿನ ಲೂಜಿನಲ್ಲಿ ನನಗೆ ದರ್ಶನಕೊಟ್ಟು, ಆಶೀರ್ವದಿಸಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು