Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:21 - ಕನ್ನಡ ಸತ್ಯವೇದವು C.L. Bible (BSI)

21 ಬಳಿಕ ಯಕೋಬನು ಜೋಸೆಫನಿಗೆ, “ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ನಾಡಿಗೆ ಮರಳಿ ಬರಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲನು ಯೋಸೇಫನಿಗೆ, “ನನಗೆ ಮರಣವು ಸಮೀಪಿಸಿದೆ, ಆದರೆ ದೇವರು ನಿಮ್ಮೊಂದಿಗಿದ್ದು, ನಿಮ್ಮನ್ನು ಪೂರ್ವಿಕರ ದೇಶಕ್ಕೆ ಪುನಃ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲನು ಯೋಸೇಫನಿಗೆ - ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ದೇಶಕ್ಕೆ ತಿರಿಗಿ ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬಳಿಕ ಇಸ್ರೇಲನು ಯೋಸೇಫನಿಗೆ, “ನೋಡು, ನಾನು ಸಾಯುವ ಕಾಲ ಸಮೀಪಿಸಿದೆ. ಆದರೆ ದೇವರು ಇನ್ನೂ ನಿನ್ನ ಸಂಗಡವಿರುವನು. ಅವನು ನಿನ್ನನ್ನು ನಿನ್ನ ಪೂರ್ವಿಕರ ದೇಶಕ್ಕೆ ಹಿಂತಿರುಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಇಸ್ರಾಯೇಲನು ಯೋಸೇಫನಿಗೆ, “ನಾನು ಸಾಯುತ್ತೇನೆ, ಆದರೆ ದೇವರು ನಿಮ್ಮ ಸಂಗಡವಿದ್ದು, ನಿಮ್ಮನ್ನು ನಿಮ್ಮ ಪಿತೃಗಳ ದೇಶಕ್ಕೆ ಮತ್ತೆ ಸೇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:21
29 ತಿಳಿವುಗಳ ಹೋಲಿಕೆ  

ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ನಾನೇ ನಿನ್ನೊಂದಿಗೆ ಈಜಿಪ್ಟಿಗೆ ಬರುವೆನು. ಅಲ್ಲಿಂದ ನಿನ್ನನ್ನು ನಿಶ್ಚಯವಾಗಿ ವಾಪಸ್ಸು ಕರೆದುಕೊಂಡು ಬರುವೆನು. ನೀನು ಸಾಯುವ ಕಾಲದಲ್ಲಿ ಜೋಸೆಫನು ಹಾಜರಿದ್ದು ನಿನ್ನ ಕಣ್ಣುಗಳನ್ನು ಮುಚ್ಚುವನು,” ಎಂದರು.


ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಆತನಿಗೆ ತಂದೆತಾಯಿಯಾಗಲಿ ವಂಶಾವಳಿಯಾಗಲಿ ಇಲ್ಲ. ಆತನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಆತನು ದೇವಪುತ್ರನನ್ನು ಹೋಲುತ್ತಾನೆ. ಶಾಶ್ವತ ಯಾಜಕನಾಗಿ ಉಳಿಯುತ್ತಾನೆ.


ನಾನು ಈ ಗುಡಾರವನ್ನು ತ್ಯಜಿಸುವ ಕಾಲವು ಸಮೀಪಿಸಿತೆಂದು ಬಲ್ಲೆ. ನಮ್ಮ ಪ್ರಭು ಯೇಸುಕ್ರಿಸ್ತರೇ ನನಗಿದನ್ನು ಸ್ಪಷ್ಟಪಡಿಸಿದ್ದಾರೆ.


ಇದಲ್ಲದೆ, ದಶಮಾಂಶವನ್ನು ಪಡೆಯುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು; ಅದನ್ನು ಪಡೆದ ಮೆಲ್ಕಿಸದೇಕನು ತಾನು ಅಮರ್ತ್ಯ ಯಾಜಕನೆಂದು ಸಾಕ್ಷ್ಯಾಧಾರ ಪಡೆದವನು.


ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ.


“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.


“ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.


ಸರ್ವೇಶ್ವರನು ಚೈತನ್ಯಸ್ವರೂಪನು I ನನ್ನುದ್ಧಾರಕನಾದವಗೆ ಸ್ತುತಿಸ್ತೋತ್ರವು I ನನ್ನ ರಕ್ಷಿಸುವ ದೇವರಿಗೆ ಜಯಕಾರವು II


ಈಗ ನಾನು, ಭೂನಿವಾಸಿಗಳೆಲ್ಲರು ಹಿಡಿಯುವ ಹಾದಿಯನ್ನು ಹಿಡಿಯಬೆಕಾಗಿದೆ. ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿವೆ ಎಂಬುದು ನಿಮಗೆ ಮನದಟ್ಟಾಗಿರಲಿ.


ಆಗ ಸರ್ವೇಶ್ವರ, ಯೆಹೋಶುವನಿಗೆ: “ನಾನು ಇಂದಿನಿಂದ ನಿನ್ನನ್ನು ಇಸ್ರಯೇಲರ ಮುಂದೆ ಮಹಾತ್ಮನನ್ನಾಗಿಸುವೆನು. ನಾನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡವೂ ಇರುವೆನೆಂದು ಅವರಿಗೆ ಗೊತ್ತಾಗುವುದು.


ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ಸರ್ವೇಶ್ವರ ತಾವೇ ನಿನ್ನ ಮುಂದುಗಡೆ ಹೋಗುವರು; ಅವರೇ ನಿನ್ನ ಸಂಗಡ ಇರುವರು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ. ಅಂಜಬೇಡ; ಧೈರ್ಯದಿಂದಿರು,” ಎಂದು ಹೇಳಿದನು.


ಯಕೋಬನು ತನ್ನ ತಂದೆ ಪ್ರವಾಸಿ ಆಗಿದ್ದ ಕಾನಾನ್ ನಾಡಿನಲ್ಲಿ ವಾಸ ಆಗಿದ್ದನು. ಅವನ ಮಕ್ಕಳ ಚರಿತ್ರೆ ಇದು:


ಆದರೆ ಅವರನ್ನು ಗುಲಾಮರನ್ನಾಗಿಸಿಕೊಳ್ಳುವ ರಾಷ್ಟ್ರವನ್ನು ನಾನು ದಂಡಿಸುವೆನು. ಬಳಿಕ ಬಿಡುಗಡೆ ಹೊಂದಿ ಅಧಿಕ ಆಸ್ತಿವಂತರಾಗಿ ಹಿಂತಿರುಗುವರು.


ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು.


ಆಗ, ನಿಮ್ಮ ದೇವರಾದ ಸರ್ವೇಶ್ವರ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ನಿಮ್ಮನ್ನು ಚದುರಿಸಿದ ಎಲ್ಲ ದೇಶಗಳಿಂದ ಮತ್ತೆ ಕೂಡಿಸುವರು.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.


ಯಕೋಬನಿಗೆ ಅಂತಿಮಕಾಲ ಹತ್ತಿರ ಆದಾಗ ಅವನು ತನ್ನ ಮಗ ಜೋಸೆಫನನ್ನು ಕರೆಸಿ, “ನನ್ನ ಮೇಲೆ ನಿನಗೆ ಪ್ರೀತಿಯಿದ್ದರೆ ನೀನು ನನ್ನ ಮಾತನ್ನು ಪ್ರೀತಿಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆಸಿಕೊಡಬೇಕು. ಅದೇನೆಂದರೆ; ನನ್ನನ್ನು ಈಜಿಪ್ಟ್ ದೇಶದಲ್ಲಿ ಸಮಾಧಿ ಮಾಡಬಾರದು.


ಫರೋಹನು ಈ ಸಂಗತಿಯನ್ನು ಕೇಳಿ ಜೋಸೆಫನಿಗೆ, “ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿಮಾಡಿ ಬರಬಹುದು,” ಎಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು