Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:22 - ಕನ್ನಡ ಸತ್ಯವೇದವು C.L. Bible (BSI)

22 ಇದಲ್ಲದೆ, ಕತ್ತಿ - ಬಿಲ್ಲುಗಳಿಂದ ನಾನು ಅಮೋರಿಯರ ವಶದಿಂದ ಪಡೆದ ಬೆಟ್ಟದ ತಪ್ಪಲನ್ನು, ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ, ನಿನಗೆ ಕೊಟ್ಟಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಲ್ಲದೆ, ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದಲ್ಲದೆ ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ನಿನ್ನ ಸಹೋದರರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ಬೇರೊಂದನ್ನು ನಿನಗೆ ಕೊಟ್ಟಿದ್ದೇನೆ. ನಾನು ಅಮೋರಿಯರಿಂದ ಗೆದ್ದುಕೊಂಡಿರುವ ಬೆಟ್ಟವನ್ನು ನಿನಗೆ ಕೊಡುವೆನು. ನಾನು ಅವರೊಂದಿಗೆ ಖಡ್ಗಗಳಿಂದಲೂ ಬಿಲ್ಲುಗಳಿಂದಲೂ ಹೋರಾಡಿ ಆ ಬೆಟ್ಟವನ್ನು ವಶಪಡಿಸಿಕೊಂಡಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ ನಾನು ನನ್ನ ಖಡ್ಗದಿಂದಲೂ ಬಿಲ್ಲಿನಿಂದಲೂ ಅಮೋರಿಯರ ಕೈಯಿಂದ ತೆಗೆದುಕೊಂಡ ಒಂದು ಹೊಲವನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:22
12 ತಿಳಿವುಗಳ ಹೋಲಿಕೆ  

ಯೇಸು ಹೋಗುತ್ತಿರುವಾಗ ಸಮಾರಿಯದ ಸಿಖಾರೆಂಬ ಊರನ್ನು ತಲುಪಿದರು. ಈ ಊರಿನ ಪಕ್ಕದಲ್ಲೇ ಯಕೋಬನು ತನ್ನ ಮಗನಾದ ಜೋಸೆಫನಿಗೆ ಕೊಟ್ಟ ಭೂಮಿ ಇದೆ.


ಇಸ್ರಯೇಲರು ಈಜಿಪ್ಟಿನಿಂದ ತಂದ ಜೋಸೆಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯ ಕೊಟ್ಟು ಕೊಂಡುಕೊಂಡಿದ್ದನು. ಅದು ಜೋಸೆಫ್ಯರ ಸೊತ್ತಾಗಿತ್ತು.


ಯೆಹೂದನ ಕುಲ ಅತಿ ಬಲಶಾಲಿಯಾಗಿ ಎಲ್ಲಾ ಕುಲಗಳಿಗೆ ನಾಯಕನೊಬ್ಬನನ್ನು ಒದಗಿಸಿಕೊಟ್ಟಿತು.)


“ಆದರೂ ನನ್ನ ಜನರೇ, ನಿಮಗೆ ಎದುರಾಗಿ ನಿಂತ ಅಮೋರ್ಯದವರನ್ನು ಧ್ವಂಸಮಾಡಿದೆನು. ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ ನಿಮ್ಮ ಶತ್ರು ಅಮೋರ್ಯದವರನ್ನು ನಾಶಪಡಿಸಿದೆನು. ಮರದ ಮುಡಿಯಿಂದ ಫಲವನ್ನೂ ಅಡಿಯಿಂದ ಬೇರನ್ನೂ ಕಿತ್ತುಹಾಕುವಂತೆ ಅವರನ್ನು ನಿರ್ಮೂಲಮಾಡುವೆನು.


“ಇಸ್ರಯೇಲರ ದೇವರಾದ ಸರ್ವೇಶ್ವರ ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?


ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲವನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ಪ್ರಥಮಫಲ, ಅವನೇ ಚೊಚ್ಚಲುತನದ ಹಕ್ಕಿಗೆ ಬಾಧ್ಯಸ್ತ.


ಊರ ಒಳಗೂ ಹೊರಗೂ ಇದ್ದ ಕುರಿ, ದನ, ಕತ್ತೆಗಳನ್ನು ಕಿತ್ತುಕೊಂಡರು.


ಗುಡಾರ ಹಾಕಿಸಿದ ಭೂಮಿಯನ್ನು, ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಗೆ ನೂರು ವರಹಗಳನ್ನು ಕೊಟ್ಟು ಅವರಿಂದ ಕೊಂಡುಕೊಂಡನು.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ಇಸ್ರಯೇಲಿನ ಹನ್ನೆರಡು ಕುಲಗಳಿಗೆ ನಾಡನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಜೋಸೆಫಿಗೆ ಎರಡು ಪಾಲು ಸೇರಲಿ.


ಯೆಬೂಸಿಯ, ಅಮೋರಿಯ, ಗಿರ್ಗಾಷಿಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು