Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 48:9 - ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಜೋಸೆಫನು, “ಈ ದೇಶದಲ್ಲಿ ದೇವರು ನನಗೆ ಅನುಗ್ರಹಿಸಿದ ಮಕ್ಕಳು,” ಎಂದನು. ಆಗ ತಂದೆ ಯಕೋಬನು, “ಇವರನ್ನು ನಾನು ಆಶೀರ್ವದಿಸುತ್ತೇನೆ; ನನ್ನ ಹತ್ತಿರಕ್ಕೆ ಕರೆದುಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೋಸೇಫನು ತನ್ನ ತಂದೆಗೆ, “ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು” ಎಂದು ಹೇಳಿದನು. ಅದಕ್ಕವನು, “ನಾನು ಇವರನ್ನು ಆಶೀರ್ವದಿಸುತ್ತೇನೆ. ನನ್ನ ಹತ್ತಿರ ಕರೆದುಕೊಂಡು ಬಾ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇವರು ಯಾರೆಂದು ಕೇಳಲು ಯೋಸೇಫನು ತನ್ನ ತಂದೆಗೆ - ಇವರು ಈ ದೇಶದಲ್ಲಿ ನನಗೆ ದೇವರು ಅನುಗ್ರಹಿಸಿದ ಮಕ್ಕಳು ಎಂದು ಹೇಳಿದನು. ಅದಕ್ಕವನು - ಇವರನ್ನು ನಾನು ಆಶೀರ್ವದಿಸುತ್ತೇನೆ; ನನ್ನ ಹತ್ತಿರಕ್ಕೆ ಕರಕೊಂಡು ಬಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೋಸೇಫನು ತನ್ನ ತಂದೆಗೆ, “ಇವರು ನನ್ನ ಮಕ್ಕಳು. ದೇವರು ನನಗೆ ಕೊಟ್ಟಿರುವ ಗಂಡುಮಕ್ಕಳೇ ಇವರು” ಎಂದು ಹೇಳಿದನು. ಇಸ್ರೇಲನು, “ಅವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ನಾನು ಅವರನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದಕ್ಕೆ ಯೋಸೇಫನು ತನ್ನ ತಂದೆಗೆ, “ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಪುತ್ರರು,” ಎಂದನು. ಆಗ ಇಸ್ರಾಯೇಲನು, “ಅವರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 48:9
18 ತಿಳಿವುಗಳ ಹೋಲಿಕೆ  

ಅದರಿಂದ ನನಗಿಷ್ಟವಾಗಿರುವ ಸವಿಯೂಟವನ್ನೂ ಅಣಿಮಾಡಿ ಬಡಿಸು. ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಮನಸಾರೆ ಆಶೀರ್ವದಿಸುತ್ತೇನೆ,” ಎಂದು ಹೇಳಿದನು.


ಅವರಿಬ್ಬರ ಕಣ್ಣಲ್ಲೂ ನೀರು ಹರಿಯಿತು. ಬಳಿಕ ಏಸಾವನು ಕಣ್ಣೆತ್ತಿ ಆ ಮಹಿಳೆಯರನ್ನೂ ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ವಿಚಾರಿಸಿದನು. ಯಕೋಬನು, “ದೇವರು ನಿಮ್ಮ ದಾಸನಾದ ನನಗೆ ಅನುಗ್ರಹಿಸಿದ ಮಕ್ಕಳು ಇವರೇ” ಎಂದು ಹೇಳಿದನು.


ವಿಶ್ವಾಸದಿಂದಲೇ ಯಕೋಬನು, ತಾನು ಸಾಯುವ ಸಮಯದಲ್ಲಿ ಜೋಸೆಫನ ಪ್ರತಿಯೊಬ್ಬ ಮಗನನ್ನೂ ಆಶೀರ್ವದಿಸಿದನು; ಊರುಗೋಲಿನ ಮೇಲೆ ಬಾಗಿಕೊಂಡೇ ದೇವರನ್ನು ಆರಾಧಿಸಿದನು.


ಇಗೋ, ನನ್ನನ್ನೂ ನನಗೆ ಸ್ವಾಮಿ ದಯಪಾಲಿಸಿರುವ ಮಕ್ಕಳನ್ನೂ ನೋಡು. ಸಿಯೋನ್ ಶಿಖರದಲ್ಲಿ ವಾಸವಾಗಿರುವ ಸೇನಾಧೀಶ್ವರಸ್ವಾಮಿಯೇ ಇಸ್ರಯೇಲರಿಗೆ ನೀಡುವ ಸೂಚನೆಗಳು ಹಾಗೂ ಜೀವಂತ ಸಂಕೇತಗಳು ನಾವೇ ಆಗಿದ್ದೇವೆ.


ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


ಇವರೆಲ್ಲರೂ ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಅವನಿಗೆ, “ನೀನು ಅಭಿವೃದ್ಧಿಯಾಗುವ ಹಾಗೆ ಮಾಡುವೆನು,” ಎಂಬುದಾಗಿ ವಾಗ್ದಾನ ಮಾಡಿದ್ದರು. ಅದರಂತೆಯೇ ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳನ್ನೂ ಮೂರು ಮಂದಿ ಹೆಣ್ಣುಮಕ್ಕಳನ್ನೂ ದಯಪಾಲಿಸಿದರು.


ಸರ್ವೇಶ್ವರ ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ.


ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. “ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದೆ,” ಎಂದು ಹೇಳಿ ಆ ಮಗುವಿಗೆ ‘ಸಮುವೇಲ’ ಎಂದು ಹೆಸರಿಟ್ಟಳು.


ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು:


ಇವೇ ಇಸ್ರಯೇಲಿನ ಹನ್ನೆರಡು ಕುಲಗೋತ್ರಗಳು; ಇದೇ ಅವರ ತಂದೆ ಕೊಟ್ಟ ಆಶೀರ್ವಾದ: ಒಂದೊಂದು ಕುಲಕ್ಕೆ ಅವನು ನುಡಿದ ಒಂದೊಂದು ಆಶೀರ್ವಚನ.


ಯಕೋಬನು ಆಕೆಯ ಮೇಲೆ ಸಿಟ್ಟುಗೊಂಡು, "ನಾನೇನು ದೇವರೋ? ಅವರೇ ಅಲ್ಲವೆ ನಿನಗೆ ಮಕ್ಕಳನ್ನು ಕೊಡದೆ ಇರುವುದು?” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು