ಆದಿಕಾಂಡ 49:10 - ಕನ್ನಡ ಸತ್ಯವೇದವು C.L. Bible (BSI)10 ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು. ಅಧ್ಯಾಯವನ್ನು ನೋಡಿ |