Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:11 - ಕನ್ನಡ ಸತ್ಯವೇದವು C.L. Bible (BSI)

11 ಕಟ್ಟುವನು ತನ್ನ ವಾಹನಪಶುವನು ದ್ರಾಕ್ಷಾಲತೆಗೆ ಬಿಗಿಯುವನು ತನ್ನ ಹೇಸರಕತ್ತೆಯನು ರಾಜದ್ರಾಕ್ಷೆಗೆ ಒಗೆಯುವನು ತನ್ನ ಬಟ್ಟೆಯನು ದ್ರಾಕ್ಷಾರಸದಲಿ ತೊಳೆವನು ಮೇಲಂಗಿಯನು ಆ ರಕ್ತಗೆಂಪು ರಸದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು. ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು; ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವನು ತನ್ನ ವಾಹನಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು, ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಬಟ್ಟೆಗಳನ್ನು ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು. ಅವನು ಉತ್ತಮವಾದ ದ್ರಾಕ್ಷಾರಸದಿಂದ ತನ್ನ ಬಟ್ಟೆಗಳನ್ನು ತೊಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ತನ್ನ ವಾಹನ ಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು. ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು. ದ್ರಾಕ್ಷಾರಸದಲ್ಲಿ ತನ್ನ ಬಟ್ಟೆ ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:11
15 ತಿಳಿವುಗಳ ಹೋಲಿಕೆ  

ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.


ರಾಜರುಗಳ ಮಾಂಸವನ್ನು, ಸೇನಾಧಿಪತಿಗಳ ಮಾಂಸವನ್ನು ಮತ್ತು ಪರಾಕ್ರಮಶಾಲಿಗಳ ಮಾಂಸವನ್ನು ತಿನ್ನ ಬನ್ನಿ; ಕುದುರೆಗಳ ಮಾಂಸವನ್ನೂ ರಾವುತರ ಮಾಂಸವನ್ನೂ ಉಣ ಬನ್ನಿ; ಯಜಮಾನರ, ಗುಲಾಮರ, ಚಿಕ್ಕವರ, ದೊಡ್ಡವರ ಈ ಎಲ್ಲಾ ನರಮಾನವರ ಮಾಂಸವನ್ನು ರುಚಿಸ ಬನ್ನಿ,” ಎಂದನು.


ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.


ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಸಮಸ್ತ ಇಸ್ರಯೇಲರು ಹಾಗು ಯೆಹೂದ್ಯರು ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದಗಿಡ, ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.


ಇಸ್ರಯೇಲ್ ಹಾಗು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾದರು; ಅನ್ನ ಪಾನಗಳಲ್ಲಿ ಸಂತೃಪ್ತರಾಗಿ ಸಂತೋಷದಿಂದ ಬಾಳುತ್ತಿದ್ದರು.


ಸ್ವಲ್ಪಕಾಲವಾದ ನಂತರ ನಾನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವೆನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೀತೋಟ, ಎಣ್ಣೇಮರ, ಜೇನುತುಪ್ಪ ಸಮೃದ್ಧಿಯಾಗಿರುವುವು. ನಿಮ್ಮ ನಾಡಿಗೆ ಸರಿಸಮಾನವಾಗಿರುವುವು; ನೀವು ಸಾಯುವುದಿಲ್ಲ, ಬದುಕುವಿರಿ; ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ.


ಪಟ್ಟಣದ ಹೊರಗಿನ ಆಲೆಯಲ್ಲಿ ದ್ರಾಕ್ಷಿಯ ಹಣ್ಣನ್ನು ಹಿಂಡಲಾಯಿತು. ಆ ಆಲೆಯಿಂದ ರಕ್ತವು ಹರಿಯಿತು. ಅದು ಮುನ್ನೂರು ಕಿಲೊಮೀಟರಿನಷ್ಟು ದೂರವಾಗಿಯೂ ಎರಡು ಮೀಟರಿನಷ್ಟು ಆಳವಾಗಿಯೂ ಹರಿಯಿತು.


ಅವನ ಕಣ್ಣು ಕೆಂಪಾಗಿರುವುವು ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಹಲ್ಲು ಬೆಳ್ಳಗಿರುವುವು ಹಾಲಿನ ಸಮೃದ್ಧಿಯಿಂದ.


“ನಿಮ್ಮ ದೇವರಾದ ಸರ್ವೇಶ್ವರ ಉತ್ತಮವಾದ ನಾಡಿಗೆ ನಿಮ್ಮನ್ನು ಸೇರಿಸುತ್ತಾರೆ. ಆ ನಾಡಿನ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತಿರುತ್ತದೆ; ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಿ ಆಗಲಿ, ಎಲ್ಲಾ ಕಡೆಯು ಬಾವಿಗಳಿಂದಲೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತಿರುತ್ತದೆ.


ಆ ನಾಡಿನಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬೆ ಇವುಗಳು ಬೆಳೆಯುತ್ತವೆ; ಎಣ್ಣೆಮರಗಳು ಹಾಗು ಜೇನುತುಪ್ಪ ಸಿಕ್ಕುತ್ತವೆ.


ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ.


ಕಾಲ ಬರುವುದು: ಆಗ - ಹೊಸ ಬಿತ್ತನೆಯಾಗುವುದು ಕೊಯ್ಯುವವನ ಹಿಂದೆಯೆ; ಹೊಸ ಫಸಲು ಸಿದ್ಧವಾಗುವುದು ದ್ರಾಕ್ಷೆ ತುಳಿಯುವವನ ಮುಂದೆಯೆ. ಸುರಿಸುವುವು ದ್ರಾಕ್ಷಾರಸವನು ಬೆಟ್ಟಗಳು ಕರಗುವಂತಿರುವುವು ಅದರಿಂದ ಎಲ್ಲ ಗುಡ್ಡಗಳು.


ಸಿಮೆಯೋನನ ಕುಲದಿಂದ ಹನ್ನೆರಡು ಸಾವಿರ ಲೇವಿಯ ಕುಲದಿಂದ ಹನ್ನೆರಡು ಸಾವಿರ ಇಸ್ಸಾಕರನ ಕುಲದಿಂದ ಹನ್ನೆರಡು ಸಾವಿರ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು