Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:16 - ಕನ್ನಡ ಸತ್ಯವೇದವು C.L. Bible (BSI)

16 ದಾನನು ತನ್ನ ಜನರನ್ನಾಳುವನು ಇಸ್ರಯೇಲಿನಿತರ ಕುಲಗಳಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಾನನು ಇಸ್ರಾಯೇಲರ ಕುಲಗಳಲ್ಲಿ ಒಂದರಂತೆ ತನ್ನ ಜನರಿಗೆ ನ್ಯಾಯತೀರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದಾನನು ಇಸ್ರಾಯೇಲ್ಯರ ಕುಲಗಳಿಗೆ ಯೋಗ್ಯವಾಗುವ ರೀತಿಯಲ್ಲಿ ತನ್ನ ಜನರ ವ್ಯಾಜ್ಯವನ್ನು ಜಯಕ್ಕೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಇತರ ಇಸ್ರೇಲರ ಕುಟುಂಬಗಳಿಗೆ ತೀರ್ಪುಮಾಡುವಂತೆ, ದಾನನು ತನ್ನ ಸ್ವಂತ ಜನರಿಗೆ ತೀರ್ಪು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ದಾನನು ಇಸ್ರಾಯೇಲನ ಗೋತ್ರಗಳಲ್ಲಿ ಒಂದು ಗೋತ್ರವಾಗಿ ತನ್ನ ಜನರಿಗೆ ನ್ಯಾಯತೀರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:16
10 ತಿಳಿವುಗಳ ಹೋಲಿಕೆ  

ದಾನ್ ಕುಲ ಕುರಿತು ಮೋಶೆ ನುಡಿದದ್ದು: “ದಾನನು ಬಾಷಾನ್ ದೇಶದಿಂದ ಧಾವಿಸಿಬಂದ ಯುವಸಿಂಹನು!”


ಆಗ ರಾಖೇಲಳು, “ದೇವರು ನನಗೆ ನ್ಯಾಯ ದೊರಕಿಸಿದ್ದಾರೆ, ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾರೆ,” ಎಂದು ಹೇಳಿ ಆ ಮಗುವಿಗೆ ‘ದಾನ್’ ಎಂದು ಹೆಸರಿಟ್ಟಳು.


ಫಿಲಿಷ್ಟಿಯರ ಕಾಲದಲ್ಲಿ ಸಂಸೋನನು ಇಸ್ರಯೇಲರನ್ನು ಇಪ್ಪತ್ತು ವರ್ಷಗಳವರೆಗೆ ಪಾಲಿಸಿದನು.


ಚೊರ್ಗಾ ಎಂಬ ಊರಲ್ಲಿ ದಾನ್ ಕುಲದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿ ಬಂಜೆಯಾಗಿದ್ದುದರಿಂದ ಅವನಿಗೆ ಮಕ್ಕಳಿರಲಿಲ್ಲ.


ಈ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕ ಅಮ್ಮೀಷದ್ದೈಯನ ಮಗ ಅಹೀಗೆಜೆರನು.


ಸೂಕ್ತವೆಂದುಕೊಂಡು ತನ್ನ ನಾಡು ವಿಶ್ರಾಂತಿಗೆ, ಸುಖಾನುಭವಕೆ ಬಗ್ಗಿಸುವನು ಬೆನ್ನನು ಹೊರೆ ಹೊರುವುದಕ್ಕೆ, ಬಿಟ್ಟಿಯ ಕೆಲಸಕ್ಕೆ.


ಇರುವನವನು ದಾರಿಯಲ್ಲಿರುವ ವಿಷಸರ್ಪದಂತೆ, ಕುದುರೆಯ ಹಿಮ್ಮಡಿಕಚ್ಚಿ ರಾಹುತನನು ಕೆಡವುವ ಹಾವಿನಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು