Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:18 - ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನೇ, ನಾನು ನಿನ್ನ ರಕ್ಷಣೆಯ ಮಾರ್ಗವನ್ನು ನಿರೀಕ್ಷಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯು ಯಾವಾಗ ಆಗುವದೋ ಎಂದು ನಿರೀಕ್ಷಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಗಾಗಿ ನಾನು ಕಾಯುತ್ತಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಯೆಹೋವ ದೇವರೇ, ನಿಮ್ಮ ವಿಮೋಚನೆಗಾಗಿ ಕಾಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:18
32 ತಿಳಿವುಗಳ ಹೋಲಿಕೆ  

ನನಗೆ ಇಷ್ಟ ನೀನು ನೀಡುವ ಜೀವೋದ್ಧಾರ I ನಿನ್ನ ಧರ್ಮಶಾಸ್ತ್ರ ಎನಗೆ ಸಂತೋಷಕರ II


ರಕ್ಷಣೆಯನು ಪ್ರಭು, ನಿರೀಕ್ಷಿಸುತ್ತಿರುವೆ I ನಿನ್ನ ಆಜ್ಞೆಗಳನು ನಾನು ಕೈಗೊಂಡಿರುವೆ II


ನಾನಾದರೋ ಸರ್ವೇಶ್ವರನ ಕಡೆಗೆ ಕಣ್ಣೆತ್ತಿ ನೋಡುವೆನು. ನನ್ನ ಉದ್ಧಾರಕ ದೇವರನ್ನು ನಿರೀಕ್ಷಿಸಿಕೊಂಡಿರುವೆನು. ನನ್ನ ದೇವರು ನನಗೆ ಕಿವಿಗೊಡುವರು.


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


ಪ್ರಭುವಿಗಾಗಿ ಎನ್ನ ಮನ ಕಾದಿದೆ I ಆತನ ವಾಕ್ಯದಲಿ ನಂಬಿಕೆ ನನಗಿದೆ II


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ದೂತನು ಆಕೆಗೆ, “ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ;


ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.


ಸರ್ವೇಶ್ವರ ಒಳ್ಳೆಯವನು ಆತನನ್ನು ನಿರೀಕ್ಷಿಸುವವರಿಗೆ ಆತನನ್ನು ಹರಸಿ ಹಂಬಲಿಸುವ ಜನರಿಗೆ.


ತೋರಿಸೆಮಗೆ ಪ್ರಭು ಕರುಣೆಯನು I ಅನುಗ್ರಹಿಸೆಮಗೆ ರಕ್ಷಣೆಯನು II


ಕಾದಿದ್ದೆನು, ಪ್ರಭುವಿಗಾಗಿ ಕಾದಿದ್ದೆನು I ಕೊನೆಗಾತ ನನ್ನತ್ತ ಬಾಗಿ ಕಿವಿಗೊಟ್ಟನು II


ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II


ನಾವಾದರೋ ಪವಿತ್ರಾತ್ಮರ ಮುಖಾಂತರ ವಿಶ್ವಾಸದಿಂದ ದೇವರೊಂದಿಗೆ ಸತ್ಸಂಬಂಧವನ್ನು ಹೊಂದುತ್ತೇವೆಂಬ ನಿರೀಕ್ಷೆ ಉಳ್ಳವರಾಗಿದ್ದೇವೆ; ಈ ನಿರೀಕ್ಷೆ ಸಫಲವಾಗುವುದನ್ನು ಎದುರುನೋಡುತ್ತಿದ್ದೇವೆ.


ಪ್ರತ್ಯಕ್ಷವಾಗದೆ ಇರುವುದನ್ನು ನಾವು ನಿರೀಕ್ಷಿಸುವವರಾಗಿದ್ದರೆ, ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.


ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೋ ಎಂದು ಸೃಷ್ಟಿಸಮಸ್ತವು ಬಹು ಉತ್ಸುಕತೆಯಿಂದ ಎದುರು ನೋಡುತ್ತಿದೆ.


ತನಗೆ ಕೊಡಿಸಬೇಕೆಂದು ಪಿಲಾತನನ್ನು ಕೇಳಿಕೊಂಡನು. ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದ ಈತನು ಯೆಹೂದ್ಯರ ನ್ಯಾಯಸಭೆಯ ಸನ್ಮಾನಿತ ಸದಸ್ಯನಾಗಿದ್ದನು.


ಆದುದರಿಂದ ಬಾ, ಎಂದು ನನ್ನ ಒಡೆಯನಾದ ಅಸ್ಸೀರಿಯದ ಅರಸನೊಂದಿಗೆ ಒಂದು ಒಪ್ಪಂದ ಮಾಡಿಕೊ. ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುವನು; ಅವುಗಳ ಮೇಲೆ ಕೂರಿಸುವಷ್ಟು ಮಂದಿ ಸವಾರರು ನಿನಗಿದ್ದಾರೋ?


ಸರ್ವೇಶ್ವರಾ, ನಮಗೆ ಕೃಪೆತೋರಿ. ನಿಮಗಾಗಿ ಕಾದಿದ್ದೇವೆ. ದಿನದಿಂದ ದಿನಕ್ಕೆ ನಮಗೆ ಬೆಂಬಲವಾಗಿರಿ. ಆಪತ್ಕಾಲದಲ್ಲಿ ನಮಗೆ ರಕ್ಷಣೆ ನೀಡಿರಿ.


ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.


ದಾಸನ ಕಣ್ಣು ಯಜಮಾನನತ್ತ I ದಾಸಿಯ ಕಣ್ಣು ಯಜಮಾನಿಯತ್ತ II ನನ್ನ ಕಣ್ಣು ಸ್ವಾಮಿದೇವನತ್ತ I ಆತನ ಕಟಾಕ್ಷವನ್ನು ನಿರೀಕ್ಷಿಸುತ್ತಾ II


ದೊರಕಲಿ ಪ್ರಭು ನನಗೆ ನಿನ್ನ ಕರುಣೆ I ನೀನು ವಾಗ್ದಾನಮಾಡಿದಾ ರಕ್ಷಣೆ II


ಎನ್ನ ಮನಕೆ ಶಾಂತಿ ದೇವನಿಂದಲೆ I ನನಗೆ ನಂಬಿಕೆ ನಿರೀಕ್ಷೆ ಆತನಿಂದಲೆ II


ಎನ್ನ ಮನಕ್ಕೆ ಶಾಂತಿ ದೇವನಿಂದಲೆ I ನನ್ನ ಜೀವೋದ್ಧಾರ ಆತನಿಂದಲೆ II


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಇರುವನವನು ದಾರಿಯಲ್ಲಿರುವ ವಿಷಸರ್ಪದಂತೆ, ಕುದುರೆಯ ಹಿಮ್ಮಡಿಕಚ್ಚಿ ರಾಹುತನನು ಕೆಡವುವ ಹಾವಿನಂತೆ.


ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ಮೋಸದ ತಕ್ಕಡಿ ಹಿಡಿದು ವ್ಯಾಪಾರಮಾಡುವ ಕಾನಾನ್ಯರಂತೆ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅದರ ದುರಾಸೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು