Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:21 - ಕನ್ನಡ ಸತ್ಯವೇದವು C.L. Bible (BSI)

21 ನಫ್ತಾಲಿ ಸ್ವಚ್ಛಂದ ಜಿಂಕೆಮರಿಯಂತೆ ಸಿಗುವುದವನಲಿ ಸುಮಧುರವಾದ ಮಾತುಕತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಫ್ತಾಲಿಯು ಸ್ವತಂತ್ರವಾಗಿ ಜಿಂಕೆಯಂತಿದ್ದಾನೆ. ಅವನಿಂದ ಇಂಪಾದ ಮಾತುಗಳುಂಟಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಫ್ತಾಲಿ ಬಿಡಿಸಿಕೊಂಡಿರುವ ಜಿಂಕೆಯಂತಿದ್ದಾನೆ. ಅವನಿಂದ ಇಂಪಾದ ಮಾತುಗಳುಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಫ್ತಾಲಿಯು ಸ್ವತಂತ್ರವಾಗಿ ಓಡುವ ಜಿಂಕೆಯಂತಿದ್ದಾನೆ. ಅವನ ಮಾತುಗಳು ಅದರ ಸುಂದರವಾದ ಮರಿಗಳಂತಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ನಫ್ತಾಲಿ ಬಿಡುಗಡೆ ಹೊಂದಿದ ಜಿಂಕೆ, ಅವನು ಮಾತುಗಳು ಸುಂದರ ಮಕ್ಕಳ ಮಾತುಗಳಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:21
13 ತಿಳಿವುಗಳ ಹೋಲಿಕೆ  

ನಫ್ತಾಲಿ ಕುಲ ಕುರಿತು ಮೋಶೆ ನುಡಿದದ್ದು: “ಎಲೈ ನಫ್ತಾಲಿ, ಸರ್ವೇಶ್ವರನ ದಯೆಹೊಂದಿ ನೀ ತೃಪ್ತನಾದೆ ಆತನ ಆಶೀರ್ವಾದದಿಂದ ಸಮೃದ್ಧಿಯುಂಟು ನಿನಗೆ ಸಮುದ್ರದ ದಕ್ಷಿಣಪ್ರದೇಶ ಸೊತ್ತಾಗಲಿ ನಿನಗೆ.”


ಆಗ ರಾಖೇಲಳು, “ನನ್ನ ಅಕ್ಕನ ಸಂಗಡ ಬಹಳವಾಗಿ ಹೋರಾಡಿ ಗೆದ್ದಿದ್ದೇನೆ,” ಎಂದು ಹೇಳಿ ಆ ಮಗುವನ್ನು ‘ನಫ್ತಾಲಿ’ ಎಂದು ಹೆಸರಿಸಿದಳು.


ಅಂಥವರಲ್ಲ ಈ ಜೆಬುಲೂನ್ಯರು, ನಫ್ತಾಲ್ಯರು ಪ್ರಾಣವನ್ನೇ ಮುಡಿಪಾಗಿಟ್ಟರು ರಣಭೂಮಿಯೊಳು.


ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಸಿದನು. ಅವರಲ್ಲಿ ಹತ್ತುಸಾವಿರ ಮಂದಿ ಅವನ ಹೆಜ್ಜೆಹಿಡಿದು ಯುದ್ಧಕ್ಕೆ ಹೋದರು. ದೆಬೋರಳೂ ಹೋದಳು.


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗ ಬಾರಾಕನನ್ನು ಬರಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಆಜ್ಞಾಪಿಸಿದ್ದಾರೆ: ‘ನೀನೆದ್ದು ನಫ್ತಾಲಿ ಮತ್ತು ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;


ನಪ್ತಾಲಿಯ ಮಕ್ಕಳು - ಯಹೇಲ್, ಗೂನಿ, ಯೇಚರ್ ಮತ್ತು ಶಿಲ್ಲೇಮ್;


ಆಕೆ ಮನೋಹರವಾದ ಹರಿಣಿ, ಸುಂದರವಾದ ಜಿಂಕೆಮರಿ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಒಲವಿನಲ್ಲೇ ಸದಾ ತಲ್ಲೀನನಾಗಿರು.


ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆ ಆಣೆಯಿಟ್ಟು ವನದ ಹುಲ್ಲೆ ಹರಿಣಿಗಳ ಮೇಲೆ. ನಲ್ಲೆ :


ಕಾಡಿನಲ್ಲಿ ಹುಲ್ಲಿಲ್ಲದ ಕಾರಣ ತಾಯಿಹುಲ್ಲೆ ಮರಿಹಾಕಿ ಮರೆಯಾಗುತ್ತದೆ.


ಅವರು, “ನೀವು ಈ ಜನರಿಗೆ ದಯೆತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರಕೊಟ್ಟರೆ ಅವರು ಯಾವಾಗಲೂ ನಿಮಗೆ ಅಧೀನರಾಗಿರುವರು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು