Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:22 - ಕನ್ನಡ ಸತ್ಯವೇದವು C.L. Bible (BSI)

22 ಜೋಸೆಫನು ಫಲಭರಿತ ವೃಕ್ಷದಂತೆ ಒರತೆ ಬಳಿಯಲೆ ಬೆಳೆದ ದ್ರಾಕ್ಷಿಯಂತೆ ಚಾಚಿದೆ ಅದರ ರೆಂಬೆ ಬೇಲಿಯಿಂದಾಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೋಸೇಫನು ಫಲಭರಿತವಾದ ವೃಕ್ಷವು, ಒರತೆಯ ಬಳಿಯಲ್ಲಿರುವ ಫಲವತ್ತಾದ ವೃಕ್ಷವೇ ಆಗಿದ್ದಾನೆ. ಗೋಡೆಯ ಆಚೆಗೆ ಅದರ ರೆಂಬೆಗಳು ಹರಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೋಸೇಫನು ಬಹುಫಲವನ್ನು ಬಿಡುವ ವೃಕ್ಷಕ್ಕೆ ಸಮಾನನಾಗಿದ್ದಾನೆ, ಒರತೆಯ ಬಳಿಯಲ್ಲಿ ಬೆಳೆದು ರೆಂಬೆಗಳನ್ನು ಗೋಡೆಯ ಆಚೆಗೆ ಚಾಚಿರುವ ಫಲವೃಕ್ಷದಂತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಯೋಸೇಫನು ಬಹು ಯಶಸ್ವಿಯಾಗಿದ್ದಾನೆ. ಯೋಸೇಫನು ಹಣ್ಣನ್ನು ಅಧಿಕವಾಗಿ ಫಲಿಸುವ ದ್ರಾಕ್ಷೆ ಬಳ್ಳಿಯಂತಿರುವನು. ಅವನು ವಸಂತಕಾಲದಲ್ಲಿ ಬೆಳೆಯುವ ದ್ರಾಕ್ಷೆಬಳ್ಳಿಯಂತಿರುವನು. ಅವನು ಗೋಡೆಯ ಆಚೆಗೆ ಚಾಚಿಕೊಂಡಿರುವ ದ್ರಾಕ್ಷೆಬಳ್ಳಿಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಯೋಸೇಫನು ಫಲಭರಿತವಾದ ದ್ರಾಕ್ಷಿಬಳ್ಳಿ ಕಾಲುವೆಗಳ ಬಳಿಯಲ್ಲಿರುವ ಫಲಭರಿತ ದ್ರಾಕ್ಷಿಬಳ್ಳಿ, ಅದರ ಕೊಂಬೆಗಳು ಗೋಡೆಗಳನ್ನೇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:22
19 ತಿಳಿವುಗಳ ಹೋಲಿಕೆ  

ಎರಡನೆಯ ಮಗನು ಹುಟ್ಟಿದಾಗ, ಯಾವ ದೇಶದಲ್ಲಿ ನನಗೆ ಸಂಕಷ್ಟವಿತ್ತೋ ಆ ದೇಶದಲ್ಲಿ ದೇವರು ನನಗೆ ಸಮೃದ್ಧಿಯನ್ನು ದಯಪಾಲಿಸಿದ್ದಾರೆ!” ಎಂದು ಆ ಮಗನಿಗೆ ‘ಎಫ್ರಾಯೀಮ್’ ಎಂದು ನಾಮಕರಣ ಮಾಡಿದನು.


ಇರುವಳು ನಿನ್ನ ಪತ್ನಿ ಮನೆಯಲ್ಲಿ ಫಲಭರಿತ ದ್ರಾಕ್ಷಾಲತೆಯಂತೆ I ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ ಓಲಿವ್ ಸಸಿಗಳಂತೆ II


ಅವರಲ್ಲದೆ ಈಜಿಪ್ಟ್ ದೇಶದಲ್ಲಿ ಜೋಸೆಫನಿಗೆ ಹುಟ್ಟಿದವರು ಇಬ್ಬರು. ಈಜಿಪ್ಟ್ ದೇಶಕ್ಕೆ ಹೋದ ಯಕೋಬನ ಕುಟುಂಬದವರೆಲ್ಲರು ಒಟ್ಟಾಗಿ ಎಪ್ಪತ್ತು ಮಂದಿ.


ಅದರಲ್ಲಿದ್ದವು ರಾಜದಂಡ ಯೋಗ್ಯವಾದ ಗಟ್ಟಿ ಕೊಂಬೆಗಳು ಮಿಕ್ಕ ರೆಂಬೆಗಳಿಗಿಂತ ಅಧಿಕವಾಗಿತ್ತವುಗಳ ಎತ್ತರವು ಹಲವಾರು ರೆಂಬೆಗಳ ಮಧ್ಯೆ ಉದ್ದುದ್ದವಾಗಿ ಕಾಣಿಸಿದವು.


ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


“ನಾನು ನಿನ್ನ ಬಳಿಗೆ ಈಜಿಪ್ಟ್ ದೇಶಕ್ಕೆ ಬರುವುದಕ್ಕೆ ಮುಂಚೆ ಇಲ್ಲಿ ಹುಟ್ಟಿದ್ದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಬೇಕು. ರೂಬೇನ್ ಮತ್ತು ಸಿಮೆಯೋನ್ ನನ್ನ ಮಕ್ಕಳಾಗಿರುವಂತೆಯೇ ಎಫ್ರಯಿಮ್ ಮತ್ತು ಮನಸ್ಸೆ ನನ್ನ ಮಕ್ಕಳಾಗಿರಲಿ.


ಕೆಲವು ಕಾಲವಾದ ಮೇಲೆ, “ತಂದೆ ಬಹಳ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದಾರೆ,” ಎಂಬ ಸುದ್ದಿ ಜೋಸೆಫನಿಗೆ ಬಂದಿತು. ಅವನು ಮನಸ್ಸೆ ಮತ್ತು ಎಫ್ರಯಿಮ್‍ ಎಂಬ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು.


ಬಿಲ್ಲುಗಾರರೆಸಗಿದರು ಅವನ ಮೇಲೆ ಆಕ್ರಮಣ ಸುತ್ತುವರೆದರವನನು ಎಸೆದು ಬಿರುಸುಬಾಣ.


ಬೆಟ್ಟಗುಡ್ಡಗಳನಿದೋ ಕವಿದಿದೆ ಅದರ ಕುಡಿಗಳು I ದೇವದಾರು ಮರಗಳ ಮೇಲೆ ಹಬ್ಬಿವೆ ಬಳ್ಳಿಗಳು II


ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ಜೋಸೆಫನನ್ನು ಹೀಗೆಂದು ಆಶೀರ್ವದಿಸಿದನು: “ನನ್ನ ಪಿತೃಗಳಾದ ಅಬ್ರಹಾಮ್, ಇಸಾಕರು ಯಾವ ದೇವರ ಸಮ್ಮುಖದಲ್ಲಿ ನಡೆದುಕೊಂಡರೋ ಆ ದೇವರು, ಚಿಕ್ಕಂದಿನಿಂದ ಇಂದಿನವರೆಗೆ ನನ್ನನ್ನು ಪರಿಪಾಲಿಸಿಕೊಂಡು ಬಂದ ಆ ದೇವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು