Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:24 - ಕನ್ನಡ ಸತ್ಯವೇದವು C.L. Bible (BSI)

24 ಆದರೂ ಯಕೋಬಕುಲದ ಸರ್ವ ಬಲಾಢ್ಯನ ಶಕ್ತಿಯಿಂದ ಇಸ್ರಯೇಲನ ಪೊರೆಬಂಡೆ - ಪರಿಪಾಲಕನ ನಾಮದಿಂದ ನಿಂತಿತು ಸ್ಥಿರವಾಗಿ ಅವನ ಬಿಲ್ಲು ಚುರುಕುಗೊಂಡಿತು ಅವನ ಕೈಗಳ ಬಲ್ಬು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರಮಿಯ ಭುಜಬಲದಿಂದಲೂ, ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನಿಂದಲೂ ಅವನ ಕೈಗಳ ಬಿಲ್ಲು ಸ್ಥಿರವಾಗಿ ನಿಂತಿರುವುದು. ಅವನ ಕೈಗಳು ಯಾಕೋಬನ ಒಡೆಯನಿಂದ ಬಲಗೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೂ ಯಾಕೋಬನ ವಂಶಸ್ಥರನ್ನು ರಕ್ಷಿಸುವ ಪರಾಕ್ರವಿುಯ ಭುಜಬಲದಿಂದಲೂ ಇಸ್ರಾಯೇಲನಿಗೆ ಪಾಲಕನೂ ಬಂಡೆಯೂ ಆಗಿರುವಾತನ ಕಡೆಯಿಂದಲೂ ಅವನ ಬಿಲ್ಲು ಸ್ಥಿರವಾಗಿ ನಿಂತಿತು, ಅವನ ಕೈಗಳು ಚುರುಕಾಗಿ ಮಾಡಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ಅವನು ತನ್ನ ಹೋರಾಟದಲ್ಲಿ ಬಲಿಷ್ಠವಾದ ಬಿಲ್ಲಿನಿಂದಲೂ ತನ್ನ ನಿಪುಣವಾದ ತೋಳುಗಳಿಂದಲೂ ಗೆದ್ದನು. ಅವನು ಶಕ್ತಿಯನ್ನು ಯಾಕೋಬನ ಪರಾಕ್ರಮಿಯಿಂದಲೂ ಇಸ್ರೇಲನ ಬಂಡೆಯಾದಾತನಿಂದಲೂ ಕುರುಬನಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಅವನ ಬಿಲ್ಲು ಸ್ಥಿರವಾಗಿ ನಿಲ್ಲುವುದು. ಅವನ ಬಲವಾದ ತೋಳುಗಳು ಚುರುಕಾಗಿ ನಿಂತವು. ಇದಕ್ಕೆ ಕಾರಣ ಯಾಕೋಬನಿಗೆ ಸರ್ವಶಕ್ತರಾಗಿರುವ ದೇವರ ಹಸ್ತವೇ; ಇದಕ್ಕೆ ಕಾರಣ ಇಸ್ರಾಯೇಲನ ಬಂಡೆಯಾಗಿರುವ ಕುರುಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:24
53 ತಿಳಿವುಗಳ ಹೋಲಿಕೆ  

ಸ್ಮರಿಸಿಕೊ ಪ್ರಭೂ, ಆತನು ಮಾಡಿದ ಶಪಥವನು I ಯಕೋಬ್ಯ ಘನದೇವನಿಗಾತ ಕೊಟ್ಟ ಈ ಮಾತನು II


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ಮುಚ್ಚೆನು ನಾನು ಕಣ್ಣುಗಳನು I ಕೂಡಿಸೆನು ನಾನು ರೆಪ್ಪೆಗಳನು” II


ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II


ದೇವರ ಮಾರ್ಗ ದೋಷರಹಿತ I ಸರ್ವೇಶ್ವರನ ವಚನ ಪರಮಪುನೀತ I ಆಶ್ರಿತರೆಲ್ಲರಿಗಾತ ರಕ್ಷಣಾಕವಚ II


‘ನನ್ನ ಪ್ರತಿಷ್ಠತೆ ಹೊಸಹೊಸದಾಗಿ ಇರುತ್ತದೆ ನನ್ನ ಕೈಯಲ್ಲಿ ಬಿಲ್ಲು ಬಲಗೊಳ್ಳುತ್ತಾ ಇರುತ್ತದೆ’


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.


ಇಂತಿರಲು ಒಡೆಯರು, ಸೇನಾಧೀಶ್ವರರು, ಇಸ್ರಯೇಲರ ಪರಾಕ್ರಮಿಯು ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ನನ್ನ ಶತ್ರುಗಳಾದ ನಿಮ್ಮ ಮೇಲೆ ಸೇಡು ತೀರಿಸುವೆನು. ನನ್ನ ವಿರೋಧಿಗಳಾದ ನಿಮ್ಮನ್ನು ಸದೆಬಡಿದು ಶಾಂತನಾಗಿರುವೆನು.


ಮನೆಕಟ್ಟುವವರು ಮೂಲೆಗೆಸೆದ ಕಲ್ಲು I ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು II


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ವ್ಯಸನಪಡಬೇಡಿ, ನಿಮ್ಮನ್ನೇ ನಿಂದಿಸಿಕೊಳ್ಳಬೇಡಿ. ಏಕೆಂದರೆ ಜೀವರಕ್ಷಣೆಗಾಗಿಯೇ ದೇವರು ನನ್ನನ್ನು ನಿಮಗೆ ಮುಂಚಿತವಾಗಿ ಇಲ್ಲಿಗೆ ಕಳುಹಿಸಿದರು.


ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.


ಮತ್ತೊಬ್ಬನ ದಾಸನ ಮೇಲೆ ದಂಡನೆಯ ತೀರ್ಪುಕೊಡಲು ನೀನು ಯಾರು? ಅವನು ಸಮರ್ಥನು ಅಥವಾ ಅಸಮರ್ಥನು ಎಂದು ತೀರ್ಪುಕೊಡುವುದು ಅವನ ಯಜಮಾನನಿಗೆ ಸೇರಿದ್ದು. ಅವನು ಸಮರ್ಥನಾಗುವಂತೆ ಮಾಡಲು ಪ್ರಭು ಶಕ್ತರು.


ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಅವರನ್ನು ಪುನರುತ್ಥಾನಗೊಳಿಸಿದ್ದಾರೆ. ‘ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು’ ಎಂದು ಬರೆದಿರುವುದು ಇವರನ್ನು ಕುರಿತೇ.


ಇದನ್ನು ಜನರು ಕೇಳಿದ್ದೇ, “ಅಯ್ಯೋ, ಹಾಗೆ ಎಂದಿಗೂ ಸಂಭವಿಸದಿರಲಿ!” ಎಂದರು. ಯೇಸು ಅವರನ್ನು ದಿಟ್ಟಿಸಿ ನೋಡಿ, “ಹಾಗಾದರೆ; ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.’ ಎಂದು ಪವಿತ್ರಗ್ರಂಥದಲ್ಲಿ ಹೇಳಿರುವುದರ ಅರ್ಥ ಆದರೂ ಏನು?


ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು; ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?" ಎಂದರು.


ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?


ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿ. ಆ ಒಂದೇ ಕಲ್ಲಿನಲ್ಲಿ ಏಳು ಮುಖಗಳು ಇರುವ ಒಂದು ಕೆತ್ತನೆಯನ್ನು ಕೆತ್ತುವೆನು. ಒಂದೇ ದಿನದಲ್ಲಿ ಈ ನಾಡಿನ ಪಾಪವನ್ನು ತೊಡೆದುಹಾಕುವೆನು.


ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಚಂಚಲಚಿತ್ತರು ಬುದ್ಧಿವಂತರಾಗುವರು. ಗೊಣಗುಟ್ಟುವವರು ಧ್ಯಾನಮಗ್ನರಾಗುವರು.


ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು I ಸಾರುವೆನು ತಲತಲಾಂತರಕು ನಿನ್ನ ಸತ್ಯತೆಯನು II


ಹಿಂಸಕರಿಂದ ಸಂರಕ್ಷಿಸುವಾತ ನೀನೆ I ಹಗೆಗಳಿಗೆ ಆಶಾಭಂಗ ತರುವಾತ ನೀನೆ II


ಪ್ರಭುವೆ ತನ್ನ ಪ್ರಜೆಯ ಪ್ರಾಬಲ್ಯವು I ತನ್ನಭಿಷಿಕ್ತನಿಗೆ ಆಶ್ರಯ ದುರ್ಗವು II


ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II


ಪ್ರಭು ಕುರಿಗಾಹಿಯಾಗಿರಲು ನನಗೆ I ಕುಂದುಕೊರತೆಗಳೆಲ್ಲಿಯವು ಎನಗೆ? II


ಪ್ರಭುವೇ, ನೀನೆ ನನ್ನ ಬಲವು I ನನಗಿದೆ ನಿನ್ನಲೇ ಒಲವು II


ಹೀಗೆ ಎಲ್ಲರೂ, ನಮ್ಮ ಕೈಗಳು ಜೋಲುಬಿದ್ದು ಕೆಲಸ ಮುಗಿಯದೆ ನಿಂತುಹೋಗಲಿ ಎಂದುಕೊಂಡು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ನಾನೋ, “ನನ್ನ ದೇವರೇ, ನನ್ನ ಕೈಗಳನ್ನು ಬಲಪಡಿಸಿ,” ಎಂದು ಪ್ರಾರ್ಥಿಸಿದೆ.


ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.


ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಆದುದರಿಂದ ನೀವು ಸ್ವಲ್ಪವೂ ಸಂಕೋಚಪಡಬೇಕಾಗಿಲ್ಲ. ನಾನು ನಿಮ್ಮನ್ನೂ ನಿಮಗೆ ಸೇರಿದ ಎಲ್ಲರನ್ನೂ ಪೋಷಿಸುತ್ತೇನೆ,” ಎಂದು ಹೇಳಿ ಅವರನ್ನು ಸಂತೈಸಿ, ಅವರ ಸಂಗಡ ಪ್ರೀತಿಯಿಂದ ಮಾತಾಡಿದನು.


ತಂದೆಗೂ ಸಹೋದರರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕೊಟ್ಟು ಅವರನ್ನು ಸಂರಕ್ಷಿಸಿದನು.


ಬರಗಾಲ ತೀರುವುದಕ್ಕೆ ಇನ್ನೂ ಐದು ವರ್ಷ ಕಳೆಯಬೇಕಾಗಿದೆ. ಆದುದರಿಂದ ನಿಮಗೂ ನಿಮ್ಮ ಕುಟುಂಬಕ್ಕೂ ನಿಮಗಿರುವ ಸಮಸ್ತಕ್ಕೂ ಬಡತನ ತಟ್ಟದಂತೆ ನಾನು ನಿಮ್ಮನ್ನು ಪೋಷಿಸುತ್ತೇನೆ’, ಎಂದು ಹೇಳಿರುವುದಾಗಿ ತಿಳಿಸಿರಿ.


ನಿಮ್ಮ ಜನ ಧರೆಯಲ್ಲಿ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಅಭಿವೃದ್ಧಿಯಾಗುವಂತೆಯೂ ದೇವರು ನನ್ನನ್ನು ನಿಮಗೆ ಮುಂಚಿತವಾಗಿ ಕಳಿಸಿದರು.


ಜೋಸೆಫನನ್ನು ಹೀಗೆಂದು ಆಶೀರ್ವದಿಸಿದನು: “ನನ್ನ ಪಿತೃಗಳಾದ ಅಬ್ರಹಾಮ್, ಇಸಾಕರು ಯಾವ ದೇವರ ಸಮ್ಮುಖದಲ್ಲಿ ನಡೆದುಕೊಂಡರೋ ಆ ದೇವರು, ಚಿಕ್ಕಂದಿನಿಂದ ಇಂದಿನವರೆಗೆ ನನ್ನನ್ನು ಪರಿಪಾಲಿಸಿಕೊಂಡು ಬಂದ ಆ ದೇವರು,


ಬಿಲ್ಲುಗಾರರೆಸಗಿದರು ಅವನ ಮೇಲೆ ಆಕ್ರಮಣ ಸುತ್ತುವರೆದರವನನು ಎಸೆದು ಬಿರುಸುಬಾಣ.


ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.


ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


ಆದರೂ ನಾನಿರುವೆ ನಿನ್ನ ಸನ್ನಿಧಿಯಲಿ I ನೀ ಹಿಡಿದಿರುವೆ ನನ್ನ ಬಲಗೈಯನು ಭದ್ರವಾಗಿ II


ನೆನಸಿಕೋ ಹೇ ಪ್ರಭೂ, ದಾವೀದನನು I ಆತ ಸಹಿಸಿದ ಕಷ್ಟದುಃಖಗಳನು II


ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


ಆಮೇಲೆ ನಾಡನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬಯಲುಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರು ಹಾಗೂ ಕಬ್ಬಿಣದ ರಥಗಳುಳ್ಳವರು. ಆದರೂ ನೀವು ಅವರನ್ನು ಹೊರದೂಡಬಲ್ಲಿರಿ,” ಎಂದು ಉತ್ತರ ಕೊಟ್ಟನು.


ಇವರ ಹಾಗೆಯೇ ಜೋಸೆಫನ ಕುಲದವರು ಹೊರಟು ಬೇತೇಲಿಗೆ ಬಂದರು. ಸರ್ವೇಶ್ವರಸ್ವಾಮಿ ಅವರೊಂದಿಗೆ ಇದ್ದರು.


ಆಗ, “ಬಿಲ್ಲನ್ನು ಹಿಡಿದುಕೋ,” ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈ ಮೇಲೆ ಇಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು