Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:25 - ಕನ್ನಡ ಸತ್ಯವೇದವು C.L. Bible (BSI)

25 ಹೀಗಾಯಿತು ನಿನ್ನ ತ0ದೆಯ‍‍ ದೇವರಿ0ದ ಸಿಗಲಿ ನಿನಗಾತನ ಸಹಾಯ ಹೀಗಾಯಿತು ಸರ್ವವಲ್ಲಭ ದೇವರಿ0ದ. ದೊರಕಲಿ ನಿನಗಾತನ ಆಶೀರ್ವಾದ. ಮೇಲಣ ಆಕಾಶದಿ0ದ, ಕೆಳಗಣ ಸಾಗರ ಸೆಲೆಗಳಿ0ದ ಸ್ತನ್ಯದಿ0ದ, ಗರ್ಭದಿ0ದ, ಆತ ನೀಡುವ ವರದಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಿನ್ನ ತಂದೆಯ ದೇವರು ನಿನಗೆ ಸಹಾಯ ಹಸ್ತವಾಗಿದ್ದಾನೆ. ನಿನ್ನ ತಂದೆಯ ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು, ಆತನು ಮೇಲಣ ಆಕಾಶದಿಂದಲೂ, ಕೆಳಗಣ ಸಾಗರದ ಸೆಲೆಗಳಿಂದಲೂ, ಸ್ತನದಿಂದಲೂ, ಗರ್ಭಫಲದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇದು ನಿನ್ನ ತಂದೆಯ ದೇವರಿಂದಾಯಿತು, ಆತನು ನಿನಗೆ ಸಹಾಯ ಮಾಡಲಿ; ಸರ್ವಶಕ್ತನಾದ ದೇವರಿಂದಾಯಿತು,ಅತನು ನಿನ್ನನ್ನು ಆಶೀರ್ವದಿಸಲಿ. ಆತನು ಮೇಲಣ ಆಕಾಶದಿಂದಲೂ ಕೆಳಗಣ ಸಾಗರದ ಸೆಲೆಗಳಿಂದಲೂ ಸ್ತನ್ಯದಿಂದಲೂ ಗರ್ಭದಿಂದಲೂ ಉಂಟಾಗುವ ಸೌಭಾಗ್ಯಗಳನ್ನು ಕೊಟ್ಟು ನಿನ್ನನ್ನು ಆಶೀರ್ವದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಿಮ್ಮ ತಂದೆಯ ದೇವರಿಂದಲೂ ಪಡೆದುಕೊಳ್ಳುವನು. ದೇವರು ನಿನ್ನನ್ನು ಆಶೀರ್ವದಿಸುವನು. ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಲಿ. ಆತನು ಮೇಲಿರುವ ಆಕಾಶದಿಂದ ನಿನಗೆ ಆಶೀರ್ವಾದಗಳನ್ನು ಕೊಡಲಿ. ಆತನು ಕೆಳಗಿನ ಆಳವಾದ ಸಾಗರದ ಸೆಲೆಗಳಿಂದಲೂ ನಿನಗೆ ಆಶೀರ್ವಾದಗಳನ್ನು ಕೊಡಲಿ. ಆತನು ನಿನಗೆ ಸ್ತನ್ಯಗಳಿಂದಲೂ ಗರ್ಭದಿಂದಲೂ ಆಶೀರ್ವಾದಗಳನ್ನು ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಕ್ಕೆ ಕಾರಣ ನಿನಗೆ ಸಹಾಯ ಮಾಡುವ ನಿನ್ನ ಪಿತೃಗಳ ದೇವರು; ನಿನ್ನನ್ನು ಸರ್ವಶಕ್ತರಾದ ದೇವರು ಆಶೀರ್ವದಿಸಲಿ. ಆ ಆಶೀರ್ವಾದಗಳು ಪರಲೋಕದವುಗಳು. ಆ ಆಶೀರ್ವಾದಗಳು ಕೆಳಗಿನಾಳದಲ್ಲಿರುವವುಗಳು. ಅವು ಎದೆಯ ಹಾಗೂ ಗರ್ಭದ ಆಶೀರ್ವಾದಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:25
22 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನಿಗೆ ದೇವರು, “ನಾನೇ ಸರ್ವವಲ್ಲಭನಾದ ದೇವರು; ನೀನು ವೃದ್ಧಿಯಾಗಿ ಬಹುಸಂತಾನವುಳ್ಳವನಾಗು. ನಿನ್ನಿಂದ ರಾಷ್ಟ್ರವೊಂದು ಉಂಟಾಗುವುದು, ಅನೇಕ ರಾಷ್ಟ್ರಗಳೂ ರಾಜರುಗಳೂ ನಿನ್ನಿಂದ ಹುಟ್ಟುವರು.


ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು.


‘ಈ ಭಾಗ್ಯ ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗೆ ಲಭಿಸಿತು’ ಎಂದುಕೊಂಡೀರಿ ಎಚ್ಚರಿಕೆ!


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು:


ಅದಕ್ಕೆ ಆ ಗೃಹನಿರ್ವಾಹಕ, “ಸಮಾಧಾನದಿಂದಿರಿ, ಹೆದರಬೇಡಿ. ನಿಮ್ಮ ತಂದೆಗೂ ನಿಮಗೂ ದೇವರಾದವರು ನಿಮ್ಮ ಚೀಲಗಳಲ್ಲಿಯೇ ನಿಧಿ ನಿಕ್ಷೇಪ ದೊರಕುವಂತೆ ಅನುಗ್ರಹಿಸಿದ್ದಾರೆ; ನೀವು ಕೊಟ್ಟ ಹಣ ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.


ದಯಪಾಲಿಸಲಿ ದೇವ ನಿನಗೆ ಆಗಸದ ಮಂಜನು, ಸಾರವುಳ್ಳ ಹೊಲವನು ಅನುಗ್ರಹಿಸಲಿ ಹೇರಳ ದವಸ ಧಾನ್ಯವನು, ದ್ರಾಕ್ಷಾರಸವನು.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಪ್ರಭು ಕೊಟ್ಟೇ ತೀರುವನು ಒಳಿತನು I ನಮ್ಮ ನಾಡು ನೀಡುವುದು ಬೆಳೆಯನು II


ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಮರಳಿ ಬರಮಾಡಿದರೆ ಸರ್ವೇಶ್ವರಸ್ವಾಮಿಯೇ ನನಗೆ ದೇವರು ಆಗುವರು.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ಕಡೆಯೆಲ್ಲ ನನ್ನೊಂದಿಗಿದ್ದ ದೇವರಿಗೆ ಅಲ್ಲೊಂದು ಬಲಿಪೀಠವನ್ನು ಕಟ್ಟಿಸುತ್ತೇನೆ,” ಎಂದು ಹೇಳಿದನು.


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


“ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಲಿ; ನಿನಗೆ ಬಹಳ ಸಂತತಿಯನ್ನು ಕೊಡಲಿ; ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;


ಇದಲ್ಲದೆ ಯಕೋಬನು ದೇವರನ್ನು ಹೀಗೆಂದು ಪ್ರಾರ್ಥಿಸಿದನು: “ಸ್ವಾಮಿ ಸರ್ವೇಶ್ವರಾ, ನನ್ನ ತಂದೆ ತಾತಂದಿರಾದ ಇಸಾಕ, ಅಬ್ರಹಾಮರ ದೇವರೇ, ಸ್ವಂತ ನಾಡಿಗೆ, ಬಂಧುಬಳಗದವರ ಬಳಿಗೆ ಹಿಂದಿರುಗಬೇಕೆಂದು ನನಗೆ ನೀವೇ ಆಜ್ಞಾಪಿಸಿದಿರಿ: 'ನಿನಗೆ ಒಳ್ಳೆಯದನ್ನೇ ಮಾಡುತ್ತೇನೆ' ಎಂದು ವಾಗ್ದಾನ ಮಾಡಿದವರು ನೀವೇ ಅಲ್ಲವೆ?


ಅವನು ಜೋಸೆಫನಿಗೆ, “ಸರ್ವವಲ್ಲಭರಾದ ದೇವರು ಕಾನಾನ್ ನಾಡಿನ ಲೂಜಿನಲ್ಲಿ ನನಗೆ ದರ್ಶನಕೊಟ್ಟು, ಆಶೀರ್ವದಿಸಿ -


ತನ್ನ ತಂದೆಯ ದೇವರು ನನಗೆ ಸಹಾಯಕರಾಗಿದ್ದು ನನ್ನನ್ನು ಫರೋಹನ ಕತ್ತಿಯಿಂದ ಕಾಪಾಡಿದರು ಎಂದು ಕಿರಿಯ ಮಗನಿಗೆ ‘ಎಲಿಯೇಜರ್’ ಎಂದು ಹೆಸರಿಟ್ಟಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು