ಆದಿಕಾಂಡ 49:26 - ಕನ್ನಡ ಸತ್ಯವೇದವು C.L. Bible (BSI)26 ಪ್ರಾಚೀನ ಪರ್ವತಗಳಿಗಿ0ತ, ಚಿರಸ್ಥಾಯಿ ಗುಡ್ಡಗಳಿಗಿಂತ ಉತ್ತಮೋತ್ತಮ ನಿನ್ನ ತಂದೆಯಿಂದ ಬರುವ ಆಶೀರ್ವಾದ. ಇಳಿದು ಬರಲೀ ವರದಾನಗಳು ಜೋಸೆಫನ ಮೇಲೆ ಸೋದರರಿಂದ ಬೇರ್ಪಟ್ಟವನ ಶಿರಸ್ಸಿನ ಮೇಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಿನ್ನ ತಂದೆಯ ಆಶೀರ್ವಾದಗಳು ನಿನ್ನ ಪೂರ್ವಿಕರ ಆಶೀರ್ವಾದಕ್ಕಿಂತಲೂ ಮೀಗಿಲಾಗಿರುತ್ತದೆ. ಆದಿಯಿಂದಲೂ ಪರ್ವತಗಳಿಂದ ಉಂಟಾಗುವ ಎಲ್ಲಾ ಮೇಲುಗಳಿಗಿಂತಲೂ, ಸದಾಕಾಲ ಪ್ರಕೃತಿಯಿಂದ ಉಂಟಾಗುವ ಎಲ್ಲಾ ಸುಫಲಗಳು ಕೊನೆಯವರೆಗೂ ಯೋಸೇಫನಿಗೂ ಅವನ ಅಣ್ಣತಮ್ಮಂದಿರಿಗೂ ಸಮೃದ್ಧಿಯಾಗಿ ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಿನ್ನ ತಂದೆಯ ಆಶೀರ್ವಾದಗಳು ಆದಿಯಿಂದಿದ್ದ ಪರ್ವತಗಳಿಂದುಟಾಗುವ ಮೇಲುಗಳಿಗಿಂತಲೂ ಸದಾಕಾಲವಾಗಿರುವ ಬೆಟ್ಟಗಳಿಂದುಂಟಾಗುವ ಉತ್ತಮ ವಸ್ತುಗಳಿಗಿಂತಲೂ ವಿಶೇಷವಾಗಿವೆ. ಇವೆಲ್ಲಾ ಯೋಸೇಫನ ಪಾಲಿಗೆ ಬರಲಿ; ಅಣ್ಣತಮ್ಮಂದಿರಲ್ಲಿ ಪ್ರಭುವಾಗಿರುವವನ ಶಿರಸ್ಸಿನ ಮೇಲುಂಟಾಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನನ್ನ ತಂದೆತಾಯಿಗಳಿಗೆ ಅನೇಕಾನೇಕ ಒಳ್ಳೆಯ ಸಂಗತಿಗಳು ಸಂಭವಿಸಿದವು. ನಿನ್ನ ತಂದೆಯಾದ ನಾನು ಅದಕ್ಕಿಂತಲೂ ಹೆಚ್ಚು ಆಶೀರ್ವಾದ ಹೊಂದಿಕೊಂಡೆನು. ನಿನ್ನ ಸಹೋದರರು ನಿನ್ನನ್ನು ದೂರಮಾಡಲು ಪ್ರಯತ್ನಿಸಿದರು. ಆದರೆ ಈಗ ನನ್ನ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಎತ್ತರವಾದ ಬೆಟ್ಟದೋಪಾದಿಯಲ್ಲಿ ರಾಶಿಯಂತಿವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಪುರಾತನ ಪರ್ವತಗಳ ಆಶೀರ್ವಾದಗಳಿಗಿಂತ ನಿನ್ನ ತಂದೆಯ ಆಶೀರ್ವಾದಗಳು ಶ್ರೇಷ್ಠವಾದವುಗಳು. ಅವು ಪುರಾತನ ಶಿಖರಗಳ ಐಶ್ವರ್ಯಕ್ಕಿಂತ ಹೆಚ್ಚಿನವುಗಳು. ಇವೆಲ್ಲವೂ ಯೋಸೇಫನ ತಲೆಯ ಮೇಲೆ ಅಂದರೆ, ತನ್ನ ಸಹೋದರರಲ್ಲಿ ರಾಜಕುಮಾರನಾದವನ ಹಣೆಯ ಮೇಲಿರಲಿ. ಅಧ್ಯಾಯವನ್ನು ನೋಡಿ |