ಆದಿಕಾಂಡ 49:27 - ಕನ್ನಡ ಸತ್ಯವೇದವು C.L. Bible (BSI)27 ಕಿತ್ತು ತಿನ್ನುವ ತೋಳ ಬೆನ್ಯಾಮೀನನು ಬೆಳಿಗ್ಗೆ ತಿನ್ನುವನು ಹಿಡಿದುಕೊಂಡದುದನು ಸಂಜೆ ಹಂಚಿಕೊಳ್ಳುವನು ಕೊಳ್ಳೆಹೊಡೆದುದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ರಾತ್ರಿ ಹಿಡಿದುಕೊಂಡದ್ದನ್ನು ಬೆಳಿಗ್ಗೆ ತಿನ್ನುತ್ತಾನೆ. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಬೆನ್ಯಾಮೀನನು ಕುರಿಗಳನ್ನು ಹಿಡಿದುಕೊಳ್ಳುವ ತೋಳದಂತಿದ್ದಾನೆ. ಹಿಡಿದುಕೊಂಡದ್ದನ್ನು ಬೆಳಿಗ್ಗೆ ಉಣ್ಣುವನು. ಕೊಳ್ಳೆಮಾಡಿದ್ದನ್ನು ಸಂಜೆಯಲ್ಲಿ ಹಂಚಿಕೊಳ್ಳುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ಬೆನ್ಯಾಮೀನನು ಹಸಿದಿರುವ ತೋಳದಂತಿದ್ದಾನೆ. ಅವನು ಮುಂಜಾನೆಯಲ್ಲಿ ಕೊಂದು ತಿನ್ನುವನು. ಅವನು ಸಾಯಂಕಾಲ ಮಿಕ್ಕುಳಿದುದ್ದನ್ನು ಹಂಚಿಕೊಳ್ಳುವನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ಬೆನ್ಯಾಮೀನನು ಕ್ರೂರವಾದ ತೋಳದಂತಿದ್ದಾನೆ. ಬೆಳಿಗ್ಗೆ ತಿನ್ನುತ್ತಾನೆ, ಸಂಜೆ ಕೊಳ್ಳೆಯನ್ನು ಹಂಚಿಕೊಳ್ಳುತ್ತಾನೆ.” ಅಧ್ಯಾಯವನ್ನು ನೋಡಿ |