Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:28 - ಕನ್ನಡ ಸತ್ಯವೇದವು C.L. Bible (BSI)

28 ಇವೇ ಇಸ್ರಯೇಲಿನ ಹನ್ನೆರಡು ಕುಲಗೋತ್ರಗಳು; ಇದೇ ಅವರ ತಂದೆ ಕೊಟ್ಟ ಆಶೀರ್ವಾದ: ಒಂದೊಂದು ಕುಲಕ್ಕೆ ಅವನು ನುಡಿದ ಒಂದೊಂದು ಆಶೀರ್ವಚನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಅವರ ತಂದೆ ಅವರನ್ನು ಆಶೀರ್ವದಿಸಿ ಹೇಳಿದ ನುಡಿಗಳು ಇವುಗಳೇ. ಅವನು ಪ್ರತಿಯೊಬ್ಬನಿಗೂ ಅವನವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವಚನಗಳನ್ನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಇದೇ ಅವರ ತಂದೆ ಅವರಿಗೆ ಹೇಳಿದ ಆಶೀರ್ವಾದ. ಒಂದೊಂದು ಕುಲಕ್ಕೆ ಒಂದೊಂದು ಆಶೀರ್ವಚನವನ್ನು ನುಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇವು ಇಸ್ರೇಲನ ಹನ್ನೆರಡು ಕುಲಗಳು. ಈ ವಿಷಯಗಳನ್ನೆಲ್ಲ ಅವರ ತಂದೆಯಾದ ಇಸ್ರೇಲನು ಅವರಿಗೆ ಹೇಳಿದನು. ಅವನು ತನ್ನ ಪ್ರತಿಯೊಬ್ಬ ಗಂಡುಮಗನಿಗೆ ಸರಿತಕ್ಕ ಆಶೀರ್ವಾದ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇವರೆಲ್ಲಾ ಇಸ್ರಾಯೇಲಿನ ಹನ್ನೆರಡು ಗೋತ್ರಗಳು. ಅವರ ತಂದೆ ಅವರಿಗೆ ಹೇಳಿದ್ದೂ ಇದೇ. ಅವನು ಒಬ್ಬೊಬ್ಬನನ್ನೂ ಅವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:28
16 ತಿಳಿವುಗಳ ಹೋಲಿಕೆ  

ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕುಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಮಂದಿ. ಅವರ ಬಿಡಿ ಸಂಖ್ಯೆ ಹೀಗಿತ್ತು :


ಹನ್ನೆರಡು ಗೋತ್ರಗಳ ನಮ್ಮ ಜನರು, ಹಗಲಿರುಳು ದೇವರನ್ನು ಆರಾಧಿಸುತ್ತಾ, ಆ ವಾಗ್ದಾನ ಈಡೇರಿಯೇ ತೀರುವುದೆಂದು ನಂಬಿದ್ದಾರೆ. ಈ ನಂಬಿಕೆಗಾಗಿಯೇ, ಓ ರಾಜರೇ, ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡಿದ್ದಾರೆ.


ಆ ಪತ್ರಗಳಲ್ಲಿ ಅರಸನ ರಾಜಾಜ್ಞೆ ಹೀಗೆಂದು ಬರೆಯಲಾಗಿತ್ತು: ‘ಅರಸ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಂದೇ ದಿನದಲ್ಲಿ


ಆಗ ರಾಜಲೇಖಕರನ್ನು ಕರೆಯಿಸಲಾಯಿತು. ಇವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೇ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ, ಯೆಹೂದ್ಯರಿಗೂ ಭಾರತ ಮೊದಲ್ಗೊಂಡು ಕೂಷಿನವರೆಗೂ ಹರಡಿರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ, ಆಯಾ ಸಂಸ್ಥಾನಗಳ ಲಿಪಿಯಲ್ಲೂ ಆಯಾ ಜನಾಂಗಗಳ ಭಾಷೆಯಲ್ಲೂ ಪತ್ರಗಳನ್ನು ಬರೆದರು.


ಆಗ ಅರಸನು, ರಾಣಿ ಎಸ್ತೇರಳಿಗೂ ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೇರಿಸಿ ಅವನ ಮನೆಯನ್ನು ಎಸ್ತೇರಳಿಗೆ ದಾನ ಮಾಡಿದೆನಲ್ಲವೆ?


ಸರ್ವೇಶ್ವರನಿಂದ ‘ಇಸ್ರಯೇಲ್’ ಎಂಬ ಹೆಸರು ಹೊಂದಿದ ಯಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,


ಈ ಜನಾಂಗ ಯುವಸಿಂಹದಂತೆ ನಿಂತಿಹುದು ಮೃಗೇಂದ್ರನಂತೆ ಮೃಗ ಕೊಂದು, ರಕ್ತ ಕುಡಿದು, ಮಾಂಸ ತಿಂದು, ತೃಪ್ತಿಹೊಂದದ ಹೊರತು ಆ ಸಿಂಹ ವಿರಮಿಸದು.”


ಇಸ್ರಯೇಲನು ಆ ನಾಡಿನಲ್ಲಿ ವಾಸವಾಗಿದ್ದಾಗ ರೂಬೇನ್ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗಮಿಸಿದನು, ಈ ಸಂಗತಿ ತಿಳಿದುಬಂದಾಗ ಇಸ್ರಯೇಲನಿಗೆ ಕಡುಕೋಪವಾಯಿತು.


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ಇಸ್ರಯೇಲರ ಕುಲಗಳ ಸಂಖ್ಯಾನುಸಾರ ಹನ್ನೆರಡು ರತ್ನಗಳಿರಬೇಕು. ಮುದ್ರಾ ರತ್ನದಲ್ಲಿ ಕೆತ್ತುವಂತೆ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.


ಕಿತ್ತು ತಿನ್ನುವ ತೋಳ ಬೆನ್ಯಾಮೀನನು ಬೆಳಿಗ್ಗೆ ತಿನ್ನುವನು ಹಿಡಿದುಕೊಂಡದುದನು ಸಂಜೆ ಹಂಚಿಕೊಳ್ಳುವನು ಕೊಳ್ಳೆಹೊಡೆದುದನು.


ಯಕೋಬನು ತನ್ನ ಮಕ್ಕಳಿಗೆ ಕೊಟ್ಟ ಆಜ್ಞೆ ಇದು: “ನಾನು ನನ್ನ ದಿವಂಗತ ಪೂರ್ವಜರನ್ನು ಸೇರುವ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ, ಪಿತೃಗಳ ಬಳಿಯಲ್ಲಿ ನನ್ನನ್ನು ಸಮಾಧಿಮಾಡಬೇಕು.


ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು