Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:3 - ಕನ್ನಡ ಸತ್ಯವೇದವು C.L. Bible (BSI)

3 ರೂಬೇನನೇ, ನೀನೆನ್ನ ಜೇಷ್ಠಪುತ್ರನು ನನ್ನ ಚೈತನ್ಯಸ್ವರೂಪನು, ನನ್ನ ವೀರ್ಯದ ಪ್ರಥಮ ಫಲ ನೀನು ಹಿರಿಮೆಯಲು, ಒಲುಮೆಯಲು ಪ್ರಮುಖನೆನಿಸಿಕೊಳ್ಳುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ, ನನ್ನ ಪ್ರಥಮಫಲವೂ, ಗೌರವದಲ್ಲಿಯೂ, ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ರೂಬೇನನೇ, ನೀನು ನನ್ನ ಚೊಚ್ಚಲಮಗನೂ, ನನ್ನ ಚೈತನ್ಯಸ್ವರೂಪನೂ ನನ್ನ ವೀರ್ಯಕ್ಕೆ ಪ್ರಥಮ ಫಲವೂ ಗೌರವದಲ್ಲಿಯೂ ಅಧಿಕಾರದಲ್ಲಿಯೂ ಪ್ರಮುಖನೂ ಆಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ರೂಬೇನನೇ, ನೀನು ನನ್ನ ಚೊಚ್ಚಲು ಮಗ. ನೀನೇ ನನ್ನ ಮೊದಲನೆಯ ಮಗ. ನೀನು ನನ್ನ ಇತರ ಎಲ್ಲಾ ಗಂಡುಮಕ್ಕಳಿಗಿಂತ ಶಕ್ತಿಶಾಲಿಯೂ ಗೌರವಯುತನೂ ಆಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ರೂಬೇನನೇ, ನೀನು ನನ್ನ ಜೇಷ್ಠಪುತ್ರನು. ನನ್ನ ಶಕ್ತಿ, ನನ್ನ ಬಲದ ಸಂಕೇತವೂ, ಗೌರವದಲ್ಲಿ ಶಕ್ತಿಯಲ್ಲಿ ಮಿತಿಮೀರಿದವನೂ ಆಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:3
17 ತಿಳಿವುಗಳ ಹೋಲಿಕೆ  

ಸಂಹರಿಸಿದನು ಈಜಿಪ್ಟಿನ ಚೊಚ್ಚಲ ಮಕ್ಕಳನು I ಹಾಮನ ಮನೆತನದ ಮೊತ್ತಮೊದಲ ಸಂತಾನವನು II


ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲವನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ಪ್ರಥಮಫಲ, ಅವನೇ ಚೊಚ್ಚಲುತನದ ಹಕ್ಕಿಗೆ ಬಾಧ್ಯಸ್ತ.


ಕೊಂದನು ನಾಡಿನ ಜ್ಯೇಷ್ಠರೆಲ್ಲರನು I ಗಂಡಸುತನದಾ ಪ್ರಥಮ ಫಲಗಳನು II


ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. “ಸರ್ವೇಶ್ವರ ನನ್ನ ದೀನ ಸ್ಥಿತಿಯನ್ನು ನೋಡಿದ್ದಾರೆ, ಇನ್ನು ಮುಂದೆ ಗಂಡ ನನ್ನನ್ನು ಪ್ರೀತಿಸುತ್ತಾನೆ,” ಎಂದುಕೊಂಡು ಆ ಮಗುವಿಗೆ ‘ರೂಬೇನ್’ ಎಂದು ಹೆಸರಿಟ್ಟಳು.


ಯಕೋಬನ ಮಕ್ಕಳಲ್ಲಿ ಹಿರಿಯವನಾದ ರೂಬೇನನಿಗೆ ಹನೋಕ್, ಫಲ್ಲೂ, ಹೆಚ್ರೋನ್, ಕರ್ಮೀ ಎಂಬ ನಾಲ್ಕು ಜನ ಮಕ್ಕಳಿದ್ದರು.


ಯಕೋಬನ ಮಕ್ಕಳಲ್ಲಿ ಹಿರಿಯವನಾದ ರೂಬೇನನ ವಂಶಜರು ಇವರು: (ರೂಬೇನ್ ತನ್ನ ತಂದೆಯ ಉಪಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದರಿಂದ ಚೊಚ್ಚಲು ಮಗನ ಹಕ್ಕುಬಾಧ್ಯತೆಗಳನ್ನು ಕಳೆದುಕೊಂಡನು. ಆ ಹಕ್ಕುಗಳು ಜೋಸೆಫನಿಗೆ ಕೊಡಲ್ಪಟ್ಟವು;


ಯಕೋಬನ ಹನ್ನೆರಡು ಜನ ಮಕ್ಕಳು ಇವರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬೂಲೂನ್,


ಇಸ್ರಯೇಲನ ಚೊಚ್ಚಲ ಮಗ ರೂಬೇನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 46,500:


ಯಕೋಬನ ಜೇಷ್ಠ ಪುತ್ರನಾದ ರೂಬೇನನ ವಂಶಸ್ಥರು ಇವರು: ಹನೋಕನಿಂದ ಹನೋಕ್ಯರು, ಪಲ್ಲೂವಿನಿಂದ ಪಲ್ಲೂವಿನವರು,


“ಹಾಗಲ್ಲ ಅಪ್ಪಾ, ಇವನೇ ಜೇಷ್ಠ ಪುತ್ರ; ಬಲಗೈಯನ್ನು ಇವನ ತಲೆಯ ಮೇಲೆ ಇಡು”, ಎಂದು ಹೇಳಿದ.


ಈಜಿಪ್ಟಿಗೆ ಬಂದು ಸೇರಿದ ಯಕೋಬನ ಮತ್ತು ಅವನ ಮಕ್ಕಳಾದ ಇಸ್ರಯೇಲರ ಹೆಸರುಗಳು ಇವು - ಯಕೋಬನ ಜೇಷ್ಠ ಪುತ್ರ ರೂಬೇನನು.


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ರೂಬೇನ್ ಕುಲ ಕುರಿತು ಮೋಶೆ ನುಡಿದದ್ದು: “ರೂಬೇನ್ ಅಳಿಯದೆ ಉಳಿಯಲಿ ಅವನ ಮಕ್ಕಳು ಅಸಂಖ್ಯಾತರಾಗದಿರಲಿ.”


ಇಸ್ರಯೇಲನು ಆ ನಾಡಿನಲ್ಲಿ ವಾಸವಾಗಿದ್ದಾಗ ರೂಬೇನ್ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗಮಿಸಿದನು, ಈ ಸಂಗತಿ ತಿಳಿದುಬಂದಾಗ ಇಸ್ರಯೇಲನಿಗೆ ಕಡುಕೋಪವಾಯಿತು.


ಯಕೋಬನ ಹನ್ನೆರಡು ಗಂಡು ಮಕ್ಕಳ ಹೆಸರು ಇವು: ಯಕೋಬನ ಚೊಚ್ಚಲಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್ - ಇವರು ಲೇಯಳಲ್ಲಿ ಹುಟ್ಟಿದವರು.


ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂಬೀ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.


ಎಫ್ರಯಿಮಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ರೂಬೇನಿಗೆ ಒಂದು ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು