Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:30 - ಕನ್ನಡ ಸತ್ಯವೇದವು C.L. Bible (BSI)

30 ಆ ಗವಿ ಕಾನಾನ್ ನಾಡಿನ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿಸಹಿತ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ಗವಿಯು ಕಾನಾನ್ ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿ ಇದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿ ಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆ ಗವಿಯು ಕಾನಾನ್‍ದೇಶದ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬೈಲಿನಲ್ಲಿ ಅದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂವಿುಸಹಿತವಾಗಿ ಹಿತ್ತಿಯನಾದ ಎಫ್ರೋನನಿಂದ ಸ್ವಕೀಯ ಶ್ಮಶಾನಭೂವಿುಯಾಗುವದಕ್ಕೆ ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆ ಗವಿಯು ಕಾನಾನ್ ದೇಶದ ಮಮ್ರೆಗೆ ಎದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿದೆ. ಅಬ್ರಹಾಮನು ತನ್ನ ಸಮಾಧಿಗಾಗಿ ಈ ಸ್ಥಳವನ್ನು ಎಫ್ರೋನನಿಂದ ಕೊಂಡುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲದಲ್ಲಿರುವಂಥ ಅಬ್ರಹಾಮನು, ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:30
6 ತಿಳಿವುಗಳ ಹೋಲಿಕೆ  

ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ಅಬ್ರಹಾಮನಿಗೆ ಸ್ವಂತ ಸ್ಮಶಾನಭೂಮಿಯಾಗಲೆಂದು ಸ್ವಾಧೀನಗೊಳಿಸಿದವರು ಆ ಹಿತ್ತಿಯರೇ.


ಅನಂತರ ಅವನು ಶವದ ಬಳಿಯಿಂದ ಎದ್ದು ಹಿತ್ತಿಯರ ಬಳಿಗೆ ಬಂದು,


“ನಿಮ್ಮ ಮಧ್ಯೆ ನಾನೊಬ್ಬ ಹೊರನಾಡಿಗ, ಒಬ್ಬ ಪ್ರವಾಸಿ, ಮೃತಳಾಗಿರುವ ನನ್ನ ಪತ್ನಿಯನ್ನು ಸಮಾಧಿ ಮಾಡಲು ಸ್ವಲ್ಪ ಜಮೀನನ್ನು ನನ್ನ ಸ್ವಂತಕ್ಕೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ,” ಎಂದನು.


ಅವನ ಮಕ್ಕಳಾದ ಇಸಾಕ್ - ಇಷ್ಮಾಯೇಲರು ಅವನನ್ನು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಹೊಲದಲ್ಲಿದ್ದ ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು