Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:6 - ಕನ್ನಡ ಸತ್ಯವೇದವು C.L. Bible (BSI)

6 ನನ್ನ ಮನವೇ, ಒಳಗಾಗಬೇಡ ಅವರ ದುರಾಲೋಚನೆಗೆ ನನ್ನ ಪ್ರಾಣವೇ, ಸೇರಬೇಡ ನೀನವರ ಗುಂಪಿಗೆ ಕೊಂದರವರು ನರರನು ಕೋಪೋದ್ರೇಕದಿಂದ ಊನಪಡಿಸಿದರು ಎತ್ತುಗಳನ್ನು ಮದದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನನ್ನ ಪ್ರಾಣವೇ ಅವರ ಗುಪ್ತವಾದ ದುರಾಲೋಚನೆಗಳಿಗೆ ನೀನು ಒಳಪಡಬಾರದು. ನನ್ನ ಮನವೇ ಅವರ ಗುಂಪಿಗೆ ನೀನು ಸೇರಬೇಡ. ಆದುದರಿಂದ ನನ್ನ ಹೃದಯವು ಸಂತೋಷಿಸುತ್ತದೆ. ಅವರು ಕೋಪೋದ್ರೆಕದಿಂದ ಮನುಷ್ಯರನ್ನು ಸಂಹರಿಸಿದರು. ಮದದಿಂದ ಎತ್ತುಗಳನ್ನು ದುರ್ಬಲಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನನ್ನ ಪ್ರಾಣವೇ, ಅವರ ಗುಪ್ತವಾದ ದುರಾಲೋಚನೆಗೆ ನೀನು ಒಳಪಡಬಾರದು; ನನ್ನ ಮನವೇ, ಅವರ ಗುಂಪಿಗೆ ನೀನು ಸೇರಬೇಡ. ಅವರು ಕೋಪೋದ್ರೇಕದಿಂದ ಮನುಷ್ಯರನ್ನು ಸಂಹರಿಸಿದರು; ಮದದಿಂದ ಎತ್ತುಗಳನ್ನು ಊನಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ಗುಟ್ಟಾಗಿ ಕೆಟ್ಟಕಾರ್ಯಗಳನ್ನು ಯೋಚಿಸಿದರು. ಅವರ ರಹಸ್ಯಕೂಟಗಳನ್ನು ನನ್ನ ಆತ್ಮವು ಸ್ವೀಕರಿಸುವುದಿಲ್ಲ. ಅವರು ಕೋಪಗೊಂಡಾಗ ಗಂಡಸರನ್ನು ಕೊಂದುಹಾಕಿದರು. ಅವರು ಮೋಜಿಗೆಂದೇ ಪ್ರಾಣಿಗಳನ್ನು ಹಿಂಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಮನವೇ, ಅವರ ಆಲೋಚನೆಗೆ ಒಳಪಡಬೇಡ. ನನ್ನ ಪ್ರಾಣವೇ, ಅವರ ಕೂಟಗಳಲ್ಲಿ ಸೇರಬೇಡ. ಅವರು ತಮ್ಮ ಕೋಪದಲ್ಲಿ ಮನುಷ್ಯರನ್ನು ಕೊಂದರು, ಮದದಿಂದ ಎತ್ತುಗಳನ್ನು ಊನಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:6
29 ತಿಳಿವುಗಳ ಹೋಲಿಕೆ  

ಆಗ ಯಕೋಬನು, ಸಿಮೆಯೋನ್ ಮತ್ತು ಲೇವಿಯರಿಗೆ, “ನೀವು ನನ್ನ ಹೆಸರನ್ನು ಈ ನಾಡಿನ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯಮಾಡಿಬಿಟ್ಟರಿ; ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಕೆಲವರೇ. ಈ ನಾಡಿನವರೆಲ್ಲರು ಒಟ್ಟಿಗೆ ಬಂದು ನನ್ನ ಮೇಲೆ ಬಿದ್ದರೆ ನಾನು ಮಾತ್ರವಲ್ಲ, ನನ್ನ ಮನೆಯವರೆಲ್ಲರೂ ನಿರ್ಮೂಲವಾಗುತ್ತೇವೆ ಅಲ್ಲವೇ?” ಎಂದನು.


ಪಾಪಿಗಳ ಸಮೇತ ಎನ್ನ ಪ್ರಾಣವನಳಿಸಬೇಡಯ್ಯಾ I ಕೊಲೆಪಾತಕರ ಸಮೇತ ಎನ್ನ ಜೀವ ತೆಗೆಯಬೇಡಯ್ಯಾ II


ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ I ಆನಂದಗೊಂಡಿದೆ ಮನ, ಸುರಕ್ಷಿತವಿದೆ ಕಾಯ II


ಅವಿಶ್ವಾಸಿಗಳೊಡನೆ ಒಂದಾಗಬೇಡಿ. ಧರ್ಮಕ್ಕೂ ಅಧರ್ಮಕ್ಕೂ ಸಾಟಿಯೆಲ್ಲಿ? ಬೆಳಕಿಗೂ ಕತ್ತಲೆಗೂ ಎಲ್ಲಿಯ ಸಂಬಂಧ?


ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.


ವಿನೋದಗಾರರ ಕೂಟದಲ್ಲಿ ಭಾಗವಹಿಸಿ ನಾನು ಉಲ್ಲಾಸಪಟ್ಟವನಲ್ಲ. ನಿಮ್ಮ ಕೈ ನನ್ನ ಮೇಲೆ ಇದ್ದುದರಿಂದ ನಾನು ಒಬ್ಬಂಟಿಗನಾದೆ. ಕೋಪಾವೇಶದಿಂದ ತುಂಬಿದವನಾದೆ.


ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?


ತಪ್ಪಿಸೆನ್ನ ಕೆಡುಕರ ಕುತಂತ್ರದಿಂದ I ಕಾದಿರಿಸೆನ್ನ ದುರುಳರ ದೊಂಬಿಯಿಂದ II


ಚೇತನಗೊಳ್ಳು ಮನವೇ, ಚೇತನಗೊಳ್ಳು I ಎಚ್ಚರಗೊಳ್ಳಲಿ ವೀಣೆ ತಂಬೂರಿಗಳು I ಎಬ್ಬಿಸಿ ರವಿಯನು ಪ್ರಾತಃಕಾಲದೊಳು II


ಸತ್ಪುರುಷನ ಉದ್ದೇಶ ನ್ಯಾಯಯುತ; ದುಷ್ಟರ ಆಲೋಚನೆ ಮೋಸಭರಿತ.


ಅವರು ನಿನಗೆ “ನಮ್ಮೊಡನೆ ಬಾ, ಹೊಂಚುಹಾಕಿ ಹತ್ಯೆಮಾಡೋಣ;


ದೇವಾ, ದುಷ್ಟರನು ಸಂಹರಿಸಿಬಿಟ್ಟರೆ ಎಷ್ಟೋ ಉಚಿತ I ಕೊಲೆಪಾತಕರು ನನ್ನಿಂದ ತೊಲಗಿಹೋದರೆ ಎಷ್ಟೋ ಹಿತ II


ಭಜಿಸು ನನ್ನ ಮನವೇ, ಭಜಿಸು ಪ್ರಭುವನು I ನನ್ನ ಅಂತರಂಗವೇ, ಭಜಿಸು ಆತನನು I ನೆನೆ ಆತನ ಪರಮಪಾವನ ನಾಮವನು II


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಎಂದೇ ಮೌನವಿರದೆ ಎನ್ನ ಮನವು ನಿನಗೆ ಹಾಡಲಿ ಕೀರ್ತನೆ I ಹೇ ಪ್ರಭು, ಎನ್ನ ದೇವ, ನಿನಗೆನ್ನ ಅನಂತ ಧನ್ಯ ವಂದನೆ II


ದುರುಳರೊಡನೆ ದೂಡಬೇಡ, ದುರ್ಜನರೊಡನೆ ವಿಸರ್ಜಿಸಬೇಡೆನ್ನನು I ಪರರಿಗವರು ನುಡಿವರು ಶಾಂತಿಯನು ಉದರದಲ್ಲಿಡುವರು ಕ್ರೋಧವನು II


ಅವರಪರಾಧಿಗಳೆಂದು ಹೇ ದೇವಾ, ನಿರ್ಣಯಿಸಿಬಿಡು I ಅವರ ಮೋಸದ ಪಾಶದಲೇ ಅವರನು ಸಿಕ್ಕಿಸಿಬಿಡು I ಅವರನೇಕ ಪಾಪಗಳಿಗಾಗಿ ಅವರನು ದಬ್ಬಿಬಿಡು I ಅವರು ನಿನ್ನ ವಿರುದ್ಧ ದಂಗೆಯೆದ್ದವರು, ನೋಡು II


ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II


ಶತ್ರುಗಳನು ಕೊಚ್ಚಿಕೊಂಡು ಹೋಯಿತು ಪೂರ್ವಪ್ರಸಿದ್ಧವಾದ ಆ ಕೀಷೋನ್ ಹೊಳೆಯು. ನನ್ನ ಮನವೇ, ನೀ ಧೈರ್ಯದಿಂದ ಮುಂದೆ ಸಾಗು.


“ಅವರು, ‘ರಹಸ್ಯವಾಗಿ ನರಹತ್ಯ ಮಾಡಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಯೆಹೋಶುವನು ಸರ್ವೇಶ್ವರನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಟ್ಟನು.


ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.


ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದನು; ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು