ಆದಿಕಾಂಡ 49:7 - ಕನ್ನಡ ಸತ್ಯವೇದವು C.L. Bible (BSI)7 ಅವರ ಕೋಪ ಭೀಕರ, ಅದಕ್ಕಿರಲಿ ಧಿಕ್ಕಾರ! ಅವರ ರೌದ್ರ - ಕ್ರೂರ, ಅದಕ್ಕಿರಲಿ ಧಿಕ್ಕಾರ! ವಿಭಾಗಿಸುವೆನವರನು ಯಕೋಬ ಕುಲದಲಿ ಚದರಿಸುವೆನವರನು ಇಸ್ರಯೇಲರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು ಅದು ಶಾಪಗ್ರಸ್ಥವಾದುದಾಗಿದೆ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು. ಇಸ್ರಾಯೇಲರಲ್ಲಿ ಅವರನ್ನು ಚದುರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅದಕ್ಕೆ ಶಾಪವುಂಟಾಗಲಿ. ಯಾಕೋಬನ ಕುಲದವರಲ್ಲಿ ಅವರನ್ನು ವಿಭಾಗಿಸುವೆನು; ಇಸ್ರಾಯೇಲ್ಯರಲ್ಲಿ ಅವರನ್ನು ಚದರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅವರ ಕೋಪವೇ ಅವರಿಗೆ ಶಾಪ. ಅದು ತುಂಬಾ ಶಕ್ತಿಶಾಲಿಯಾದದ್ದು. ಅವರು ಹುಚ್ಚರಾದಾಗ ತುಂಬಾ ಕ್ರೂರಿಗಳು. ಅವರು ಯಾಕೋಬನ ನಾಡಿನಲ್ಲಿ ತಮ್ಮದೇ ಆದ ನಾಡನ್ನು ಹೊಂದಿಕೊಳ್ಳುವುದಿಲ್ಲ. ಅವರು ಇಸ್ರೇಲಿನಲ್ಲೆಲ್ಲಾ ಹರಡಿಕೊಳ್ಳುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು, ಅದಕ್ಕೆ ಶಾಪಗ್ರಸ್ತವಾಗಲಿ. ಯಾಕೋಬನ ಕುಟುಂಬದಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು. ಅಧ್ಯಾಯವನ್ನು ನೋಡಿ |