Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:2 - ಕನ್ನಡ ಸತ್ಯವೇದವು C.L. Bible (BSI)

2 ಅವರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಮಾಡಿದರು. ಅಂದೇ ಅವರನ್ನು ಆಶೀರ್ವದಿಸಿ ಅವರಿಗೆ ‘ಮನುಷ್ಯ’ರೆಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶೀರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು. ಇದಲ್ಲದೆ ಅದೇ ದಿವಸದಲ್ಲಿ ಅವರನ್ನು ಆಶೀರ್ವದಿಸಿ ಅವರಿಗೆ ಮನುಷ್ಯ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ಉಂಟುಮಾಡಿದನು. ಆತನು ಅವರನ್ನು ನಿರ್ಮಿಸಿದ ದಿನದಲ್ಲೇ ಅವರನ್ನು ಆಶೀರ್ವದಿಸಿ ಅವರಿಗೆ, “ಮನುಷ್ಯ” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು. ಅದೇ ದಿನದಲ್ಲಿ ಅವರನ್ನು ಆಶೀರ್ವದಿಸಿ, ಅವರಿಗೆ “ಮನುಷ್ಯ” ಎಂದು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:2
9 ತಿಳಿವುಗಳ ಹೋಲಿಕೆ  

ಆದರೆ ಸೃಷ್ಟಿಯ ಆರಂಭದಿಂದಲೇ ‘ದೇವರು ಮನುಷ್ಯರನ್ನು ಗಂಡುಹೆಣ್ಣಾಗಿ ನಿರ್ಮಿಸಿದ್ದಾರೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೃಷ್ಟಿಕರ್ತ ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ಉಂಟುಮಾಡಿದರು ಎಂದೂ,


ಅವನು ಆಕೆಯನ್ನು ನೋಡಿ ಹೀಗೆಂದನು: ಸರಿ, ನನಗೀಗ ಇವಳು ನನ್ನೆಲುಬಿನ ಎಲುಬು ನನ್ನೊಡಲಿನ ಒಡಲು ನರನಿಂದ ಉತ್ಪತ್ತಿಯಾದಿವಳನ್ನು ನಾರಿಯೆಂದೇ ಕರೆವರು.


ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ.


ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.


ದೇವರು ನಿನ್ನ ಮತ್ತು ಆಕೆಯ ತನುಮನಗಳನ್ನು ಒಂದಾಗಿ ಮಾಡಲಿಲ್ಲವೆ? ಅವರ ಉದ್ದೇಶವಾದರೂ ಏನಾಗಿತ್ತು? ದೇವರ ಮಕ್ಕಳಾಗಿ ಬಾಳುವ ಸಂತಾನಪ್ರಾಪ್ತಿಯೇ ಅವರ ಉದ್ದೇಶವಾಗಿತ್ತು. ಆದಕಾರಣ ಯೌವ್ವನದಲ್ಲಿ ಮಡದಿಗೆ ದ್ರೋಹವೆಸಗದಂತೆ, ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.


ದೇವರಾದ ಸರ್ವೇಶ್ವರ ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ವನವನ್ನು ಕೃಷಿಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಬಿಟ್ಟರು.


ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.


ಆದಾಮನು 130 ವರ್ಷದವನಾದಾಗ ರೂಪದಲ್ಲಿ ತನ್ನಂತೆಯೇ ಇದ್ದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು