Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:22 - ಕನ್ನಡ ಸತ್ಯವೇದವು C.L. Bible (BSI)

22 ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರಲ್ಲಿ ಅನ್ಯೋನ್ಯತೆಯಿಂದ 300 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರ್ಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ಗಂಡು ಹೆಣ್ಣು ಮಕ್ಕಳನ್ನು ಪಡೆದು ದೇವರ ಅನ್ಯೋನ್ಯತೆಯಲ್ಲಿ ಮುನ್ನೂರು ವರುಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರ ಅನ್ಯೋನ್ಯತೆಯಲ್ಲಿ 300 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮೆತೂಷೆಲಹನು ಹುಟ್ಟಿದ ತರುವಾಯ, ಹನೋಕನು ಮುನ್ನೂರು ವರ್ಷ ದೇವರೊಂದಿಗೆ ನಡೆದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:22
38 ತಿಳಿವುಗಳ ಹೋಲಿಕೆ  

ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ಸತ್ಯಬೋಧೆ ಅವರ ಬಾಯಲ್ಲಿ ನೆಲೆಸಿತ್ತು. ಅವರ ತುಟಿಗಳಿಂದ ಅಪರಾಧವಾದುದೇನೂ ಹೊರಬರಲಿಲ್ಲ. ಶಾಂತಿಯಿಂದ, ಸದ್ಧರ್ಮದಿಂದ ಅವರು ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡರು. ಹಲವರನ್ನು ಪಾಪಕ್ಕೆ ವಿಮುಖರಾಗಿಸಿದರು.


ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ಎಂದೇ ನಡೆವೆನು ನಾನು ಪ್ರಭುವಿನ ಕಣ್ಮುಂದೆ I ಅಂತೆಯೇ ಬಾಳುವೆ ಜೀವಲೋಕದೊಳಿದ್ದೇ II


ನಿಮ್ಮ ನಡುವೆ ಸಂಚರಿಸುತ್ತಾ ನಿಮಗೆ ದೇವರಾಗಿರುವೆನು. ನೀವು ನನಗೆ ಪ್ರಜೆಗಳಾಗಿರುವಿರಿ.


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ಆದುದರಿಂದ ನಿಮ್ಮ ನಡತೆಯ ವಿಷಯದಲ್ಲಿ ನೀವು ಅತ್ಯಂತ ಜಾಗರೂಕರಾಗಿರಿ; ಮೂಢರಂತಿರದೆ ಜಾಣರಾಗಿ ಜೀವಿಸಿರಿ.


ಜೋಸೆಫನನ್ನು ಹೀಗೆಂದು ಆಶೀರ್ವದಿಸಿದನು: “ನನ್ನ ಪಿತೃಗಳಾದ ಅಬ್ರಹಾಮ್, ಇಸಾಕರು ಯಾವ ದೇವರ ಸಮ್ಮುಖದಲ್ಲಿ ನಡೆದುಕೊಂಡರೋ ಆ ದೇವರು, ಚಿಕ್ಕಂದಿನಿಂದ ಇಂದಿನವರೆಗೆ ನನ್ನನ್ನು ಪರಿಪಾಲಿಸಿಕೊಂಡು ಬಂದ ಆ ದೇವರು,


ಅದಕ್ಕೆ ಅವರು, ‘ಯಾವ ಸರ್ವೇಶ್ವರ ಸ್ವಾಮಿಗೆ ನಾನು ವಿಧೇಯನಾಗಿ ನಡೆದುಕೊಂಡೆನೋ ಅವರು ತಮ್ಮ ದೂತನನ್ನು ನಿನ್ನೊಂದಿಗೆ ಕಳುಹಿಸುವರು. ನನ್ನ ತಂದೆಯ ಮನೆತನಕ್ಕೆ ಸೇರಿದ ಬಂಧುಬಳಗದವರಿಂದಲೇ ನನ್ನ ಮಗನಿಗೆ ಹೆಣ್ಣು ತರಲು ನಿನಗೆ ಅನುಕೂಲ ಮಾಡಿಕೊಡುವರು.


ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ನಾಮಸ್ಮರಣೆಮಾಡಿ, ಅದರಂತೆ ನಡೆದುಕೊಳ್ಳುತ್ತಾರೆ. ನಾವಾದರೋ ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಸ್ಮರಿಸಿ ಅದಕ್ಕನುಗುಣವಾಗಿ ಸದಾಕಾಲವೂ ನಡೆದುಕೊಳ್ಳುವೆವು.


ಗೊತ್ತುಗುರಿಯಿಲ್ಲದೆ ಯಾರಾದರಿಬ್ಬರು ಜೊತೆಯಾಗಿ ಪ್ರಯಾಣಮಾಡುವುದುಂಟೆ?


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!


ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II


ನಿನ್ನ ಸತ್ಯಪಥದಲಿ ನಾ ನಡೆವಂತೆ I ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು II ನಿನ್ನ ನಾಮದಲಿ ಭಯಭಕ್ತಿಯಿರುವಂತೆ I ಅನುಗ್ರಹಿಸೆನಗೆ ನೀ ಏಕಾಗ್ರತೆಯನು II


ನೀತಿಯ ಪಥದೊಳು ನಾ ನಡೆವೆನಯ್ಯಾ I ಕರುಣೆ ತೋರುತ ಪ್ರಭು, ರಕ್ಷಿಸಯ್ಯಾ II


ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.


“ನೀವು ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿದ ಮಾರ್ಗದಲ್ಲೇ ನಡೆದರೆ ಅವರು ವಾಗ್ದಾನಮಾಡಿದಂತೆ ನಿಮ್ಮನ್ನು ತಮ್ಮ ಮೀಸಲಾದ ಜನರನ್ನಾಗಿ ನೆಲೆಗೊಳಿಸುವರು.


ಸರ್ವೇಶ್ವರ ಹೇಳುವ ಮಾರ್ಗದಲ್ಲೇ ನೀವು ನಡೆದು, ಅವರಲ್ಲಿಯೇ ಭಯಭಕ್ತಿ ಯಳ್ಳವರಾಗಿ, ಅವರ ಆಜ್ಞೆಗಳನ್ನೇ ಅನುಸರಿಸಿ, ಅವರಿಗೇ ವಿಧೇಯರಾಗಿ, ಅವರ ಸೇವೇಮಾಡುತ್ತಾ ಅವರನ್ನೇ ಹೊಂದಿಕೊಂಡಿರಬೇಕು.


ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”


ಆಗ ಸರ್ವೇಶ್ವರ, “ಇಗೋ ನೋಡು, ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವು ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ನನ್ನ ಕಟ್ಟಳೆಯ ಪ್ರಕಾರ ನಡೆಯುವರೋ ಇಲ್ಲವೋ ಎಂದು ಇದರಿಂದ ಪರೀಕ್ಷಿಸಿ ತಿಳಿಯುತ್ತೇನೆ.


ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.


ದೇವರ ಕರೆಗೆ ಮತ್ತು ಪ್ರಭು ನೀಡಿರುವ ವರದಾನಗಳಿಗೆ ಅನುಗುಣವಾಗಿ ಪ್ರತಿಯೊಬ್ಬನೂ ಬಾಳುವೆ ನಡೆಸಲಿ. ಎಲ್ಲ ಸಭೆಗಳಿಗೂ ನಾನಿದನ್ನೇ ವಿಧಿಸಿದ್ದೇನೆ.


ಹನೋಕನು 65 ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು.


ಅವನು ಬದುಕಿದ ಕಾಲವೆಲ್ಲ 365 ವರ್ಷಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು