Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:24 - ಕನ್ನಡ ಸತ್ಯವೇದವು C.L. Bible (BSI)

24 ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹನೋಕನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕೊಂಡದ್ದರಿಂದ ಕಾಣದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಹನೋಕನು ದೇವರ ಅನ್ಯೋನ್ಯತೆಯಲ್ಲಿ ಜೀವಿಸುತ್ತಿದ್ದಾಗ, ದೇವರು ಅವನನ್ನು ತನ್ನ ಬಳಿಗೆ ಕರೆದುಕೊಂಡನು. ಅಂದಿನಿಂದ ಅವನು ಕಣ್ಮರೆಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ದೇವರೊಂದಿಗೆ ನಂಬಿಗಸ್ತನಾಗಿ ನಡೆಯುತ್ತಿದ್ದ ಹನೋಕನನ್ನು ದೇವರು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:24
19 ತಿಳಿವುಗಳ ಹೋಲಿಕೆ  

ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರಲ್ಲಿ ಅನ್ಯೋನ್ಯತೆಯಿಂದ 300 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.


ಅವನಿಗೆ ಯೇಸು, “ಇಂದೇ ನೀನು ನನ್ನೊಡನೆ ಪರಂಧಾಮದಲ್ಲಿರುವೆ ಎಂದು ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು.


ಆಗ ಅವರ ತಂದೆ ಯಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಜೋಸೆಫನು ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟದುಃಖವೆಲ್ಲ ನನ್ನ ತಲೆಯ ಮೇಲೆ ಬಂದೆರಗಿದೆ!” ಎಂದನು.


ದುಃಖವನ್ನು ತಾಳಲಾರದೆ ತನ್ನ ಬಟ್ಟೆಯನ್ನು ಹರಿದುಕೊಂಡನು; ತಮ್ಮಂದಿರ ಬಳಿಗೆ ಬಂದು, “ಆ ಹುಡುಗ ಇಲ್ಲವಲ್ಲಾ! ಅಯ್ಯೋ, ನಾನೇನು ಮಾಡಲಿ?” ಎಂದು ಗೋಳಾಡಿದ.


ಸರ್ವೇಶ್ವರ ಹೀಗೆನ್ನುತ್ತಾರೆ: “ಕೇಳಿಬರುತ್ತಿದೆ ರಾಮಾ ಊರಿನೊಳು ರೋದನ ಗೋಳಾಟ, ಅಘೋರ ಆಕ್ರಂದನ. ಕಳೆದುಕೊಂಡ ಮಕ್ಕಳಿಗಾಗಿ ಗೋಳಾಡುತ್ತಿಹಳು ರಾಖೇಲಳು ಇನ್ನಿಲ್ಲದ ಅವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು.”


ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.


ಪ್ರವಾದಿ ಯೆರೆಮೀಯನ ಈ ಪ್ರವಚನ ಅಂದು ಸತ್ಯವಾಯಿತು.


ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.


ಅವನು ಬದುಕಿದ ಕಾಲವೆಲ್ಲ 365 ವರ್ಷಗಳು.


ಮೆತೂಷೆಲಹನು 187 ವರ್ಷದವನಾದಾಗ ಲೆಮೆಕನನ್ನು ಪಡೆದನು.


ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.


ಅದಕ್ಕೆ ಅವರು, ‘ಯಾವ ಸರ್ವೇಶ್ವರ ಸ್ವಾಮಿಗೆ ನಾನು ವಿಧೇಯನಾಗಿ ನಡೆದುಕೊಂಡೆನೋ ಅವರು ತಮ್ಮ ದೂತನನ್ನು ನಿನ್ನೊಂದಿಗೆ ಕಳುಹಿಸುವರು. ನನ್ನ ತಂದೆಯ ಮನೆತನಕ್ಕೆ ಸೇರಿದ ಬಂಧುಬಳಗದವರಿಂದಲೇ ನನ್ನ ಮಗನಿಗೆ ಹೆಣ್ಣು ತರಲು ನಿನಗೆ ಅನುಕೂಲ ಮಾಡಿಕೊಡುವರು.


ಆಗ ಎಲೀಯನು, “ನೀನು ದುರ್ಲಭವಾದದ್ದನ್ನು ಕೇಳಿಕೊಂಡೆ; ಆದರೂ ನನ್ನನ್ನು ನಿನ್ನ ಬಳಿಯಿಂದ ತೆಗೆಯಲಾಗುವಾಗ ನೀನು ನನ್ನನ್ನು ನೋಡುವುದಾದರೆ ಅದು ದೊರಕುವುದು; ಇಲ್ಲವಾದರೆ ದೊರಕುವುದಿಲ್ಲ,” ಎಂದನು.


ನನ್ನನ್ನಾದರೊ ಸ್ವಾಗತಿಸುವನು ದೇವನು I ಪಾತಾಳದ ಹಿಡಿತದಿಂದ ಬಿಡಿಸುವನು II


ಸೂಕ್ತ ಸಲಹೆಯನಿತ್ತು ಮುಂದಕೆನ್ನ ನಡೆಸು I ಅಂತ್ಯದಲಿ ನಿನ್ನ ಮಹಿಮೆಗೆನ್ನ ಸೇರ್ಪಡಿಸು II


ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥರಥಾಶ್ವಗಳಾಗಿದ್ದವರೇ,” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದಮೇಲೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು