Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:3 - ಕನ್ನಡ ಸತ್ಯವೇದವು C.L. Bible (BSI)

3 ಆದಾಮನು 130 ವರ್ಷದವನಾದಾಗ ರೂಪದಲ್ಲಿ ತನ್ನಂತೆಯೇ ಇದ್ದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದಾಮನು ನೂರಮೂವತ್ತು ವರ್ಷದವನಾದಾಗ, ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದಾಮನು ನೂರಮೂವತ್ತು ವರುಷದವನಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದಾಮನು 130 ವರ್ಷದವನಾದಾಗ ಮತ್ತೊಬ್ಬ ಮಗನನ್ನು ಪಡೆದನು. ಆ ಮಗನು ರೂಪದಲ್ಲಿ ಆದಾಮನಂತಿದ್ದನು. ಆದಾಮನು ಅವನಿಗೆ ಸೇತ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದಾಮನು ನೂರಮೂವತ್ತು ವರುಷದವನಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ, “ಸೇತ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:3
15 ತಿಳಿವುಗಳ ಹೋಲಿಕೆ  

ಆದಾಮ್ ಮತ್ತು ಅವನ ಹೆಂಡತಿಗೆ ಮತ್ತೊಂದು ಗಂಡುಮಗು ಆಯಿತು. ಅಕೆ, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತಾನವನ್ನು ಅನುಗ್ರಹಿಸಿದ್ದಾರೆ,” ಎಂದುಕೊಂಡು ಅವನಿಗೆ “ಸೇತ್" ಎಂದು ನಾಮಕರಣ ಮಾಡಿದಳು.


ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ಎಲ್ಲಾ ಶರೀರಗಳು ಒಂದೇ ವಿಧವಾಗಿಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳ ಶರೀರ ಬೇರೆ.


ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು.


ಶರೀರದಿಂದ ಹುಟ್ಟಿದ್ದು ಶರೀರಮಯ, ದೇವರಿಂದ ಹುಟ್ಟಿದ್ದು ದೈವಮಯ.


ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.


ನಾ ಜನಿಸಿದೆ ಪಾಪಪಂಕದಲೆ I ದ್ರೋಹಿ ನಾ ಮಾತೃಗರ್ಭದಿಂದಲೆ II


ನರನು ದೇವರ ದೃಷ್ಟಿಯಲ್ಲಿ ಸಜ್ಜನನಾಗಿರಲು ಸಾಧ್ಯವೆ? ಸ್ತ್ರೀಯರಲ್ಲಿ‌ ಹುಟ್ಟಿದವನು ಪರಿಶುದ್ಧನಾಗಿರುವುದು ಶಕ್ಯವೆ?


ಅಶುದ್ಧತೆಯಿಂದ ಬಂದೀತೆ ಶುದ್ಧತೆ? ಇಲ್ಲ, ಎಂದಿಗೂ ಅದು ಅಸಾಧ್ಯವೆ.


ಸಾಲ ಕಯಿನನಿಗೆ, ಕಯಿನ್ ಅರ್ಫಕ್ಷಾದನಿಗೆ, ಅರ್ಪಕ್ಷಾದ್‍ ಶೇಮನಿಗೆ, ಶೇಮ್ ನೋವನಿಗೆ, ನೋವ ಲಾಮೆಕನಿಗೆ, ಲಾಮೆಕ್ ಮತೂಷಲನಿಗೆ ಹುಟ್ಟಿದರು.


ಮಣ್ಣಿನಿಂದ ಆದವನ ರೂಪವನ್ನು ನಾವು ಧರಿಸಿರುವಂತೆಯೇ ಸ್ವರ್ಗದಿಂದ ಬಂದಾತನ ರೂಪವನ್ನು ಧರಿಸುತ್ತೇವೆ.


ಅವರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಮಾಡಿದರು. ಅಂದೇ ಅವರನ್ನು ಆಶೀರ್ವದಿಸಿ ಅವರಿಗೆ ‘ಮನುಷ್ಯ’ರೆಂದು ಹೆಸರಿಟ್ಟರು.


ಸೇತನು ಹುಟ್ಟಿದ ಮೇಲೆ ಆದಾಮನು 800 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳು ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು