Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:10 - ಕನ್ನಡ ಸತ್ಯವೇದವು C.L. Bible (BSI)

10 ಅವರು ಜೋರ್ಡನ್ ನದಿಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು; ಜೋಸೆಫನು ತನ್ನ ತಂದೆಗೋಸ್ಕರ ಏಳು ದಿನದ ಶೋಕಾಚರಣೆಯನ್ನು ಏರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಗೋಳಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರು ಗೋರೆನ್‌ಅಟಾದ್ ಎಂಬಲ್ಲಿಗೆ ಬಂದರು. ಅದು ಜೋರ್ಡನ್ ನದಿಯ ಪೂರ್ವದಲ್ಲಿತ್ತು. ಆ ಸ್ಥಳದಲ್ಲಿ ಅವರು ತುಂಬ ಸಮಯದವರೆಗೆ ಶೋಕಿಸಿದರು. ಆ ಶೋಕವು ಏಳು ದಿನಗಳವರೆಗೆ ಮುಂದುವರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದಾಗ, ಅಲ್ಲಿ ಅಧಿಕವಾದ ಮತ್ತು ಮಹಾ ಘೋರವಾದ ಗೋಳಾಟದಿಂದ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:10
16 ತಿಳಿವುಗಳ ಹೋಲಿಕೆ  

ಕೆಲವು ಭಕ್ತಾಧಿಗಳು ಸ್ತೇಫನನನ್ನು ಸಮಾಧಿಮಾಡಿ ಅವನಿಗಾಗಿ ಅತ್ತು ಗೋಳಾಡಿದರು.


ಯೋಬನು ಅನುಭವಿಸುತ್ತಿದ್ದ ಅಪಾರ ಬಾಧೆಯನ್ನು ನೋಡಿ ಆತನೊಂದಿಗೆ ಏನನ್ನೂ ಮಾತನಾಡದೆ ಏಳು ದಿನಗಳವರೆಗೆ ಹಗಲಿರುಳೂ ಅವನ ಹತ್ತಿರದಲ್ಲೇ ನೆಲದ ಮೇಲೆ ತೆಪ್ಪನೆ ಕುಳಿತಿದ್ದರು.


ದಾವೀದನು ಸೌಲ-ಯೋನಾತಾನರ ಮೇಲೆ ಒಂದು ಶೋಕಗೀತೆಯನ್ನು ರಚಿಸಿದನು.


ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸವನ್ನು ಆಚರಿಸಿದರು.


ಮೋವಾಬ್ಯರ ಬಯಲಿನಲ್ಲಿ ಇಸ್ರಯೇಲರು ಮೋಶೆಗಾಗಿ ಮೂವತ್ತು ದಿನ ದುಃಖಿಸಿದರು. ಅಲ್ಲಿಗೆ ಮೋಶೆಯ ಸಂತಾಪದ ದಿನಗಳು ಮುಗಿದವು.


ಜೋರ್ಡನ್ ನದಿಯ ಆಚೆ, ಪಾರಾನಿಗೂ, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬ ಊರುಗಳಿಗೂ ನಡುವೆ, ಮರುಭೂಮಿಯಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆ ಇಸ್ರಯೇಲರಿಗೆ ಮಾಡಿದ ಉಪನ್ಯಾಸಗಳು ಇವು.


“ಮನುಷ್ಯನ ಶವವನ್ನು ಸೋಂಕಿದವನು ಏಳು ದಿನಗಳವರೆಗೆ ಮಡಿಗೆಟ್ಟವನಾಗಿರಬೇಕು.


ಆ ನಾಡಿನ ಜನರಾದ ಕಾನಾನ್ಯರು ಆಟಾದ್ ಕಣದಲ್ಲಿ ನಡೆದ ಶೋಕಾಚರಣೆಯನ್ನು ನೋಡಿ, “ಈಜಿಪ್ಟಿನವರಿಗೆ ಒದಗಿ ಇರುವ ಈ ಶೋಕ ಬಹು ವಿಶೇಷವಾದುದು!” ಎಂದರು. ಈ ಕಾರಣ ಜೋರ್ಡನ್ ನದಿಯಾಚೆ ಇರುವ ಆ ಸ್ಥಳಕ್ಕೆ ‘ಆಬೇಲ್ ಮಿಚ್ರಯೀಮ್’ ಎಂದು ಹೆಸರಾಯಿತು.


ದುಃಖದ ದಿನಗಳು ಕಳೆದ ನಂತರ ಜೋಸೆಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ:


ತಂದೆಯಿಂದ ಯಕೋಬನು ಪಡೆದುಕೊಂಡ ಆಶೀರ್ವಾದದ ನಿಮಿತ್ತ ಏಸಾವನು ಯಕೋಬನ ಮೇಲೆ ಹಗೆಗೊಂಡನು. “ತಂದೆಯ ಮರಣಕ್ಕಾಗಿ ದುಃಖಿಸುವ ಕಾಲ ಸಮೀಪಿಸಿತು. ಆ ಬಳಿಕ ನನ್ನ ತಮ್ಮ ಯಕೋಬನನ್ನು ಕೊಂದುಹಾಕುತ್ತೇನೆ,” ಎಂದು ತನ್ನೊಳಗೇ ನೆನಸಿಕೊಂಡನು.


ಪದ್ಧತಿಯ ಪ್ರಕಾರ ನಲವತ್ತು ದಿನಗಳು ಸುಗಂಧ ದ್ರವ್ಯಗಳನ್ನು ಲೇಪಿಸಬೇಕಾಗಿತ್ತು. ಅಷ್ಟು ದಿನಗಳವರೆಗೂ ಅವನಿಗೋಸ್ಕರ ಈಜಿಪ್ಟಿನವರಿಂದ ಶೋಕಾಚರಣೆ ಇತ್ತು.


ಅವನ ಸಂಗಡ ರಥಗಳೂ ಕುದುರೆಸವಾರರೂ ಸಹ ಇದ್ದರು. ಹೀಗೆ ದೊಡ್ಡ ಜನಸಮೂಹವೇ ಅವನೊಂದಿಗೆ ಹೋಯಿತು.


ಆರೋನನು ಸತ್ತುಹೋದುದನ್ನು ಇಸ್ರಯೇಲ್ ಸಮಾಜದವರೆಲ್ಲರೂ ತಿಳಿದು ಅವನಿಗಾಗಿ ಮೂವತ್ತು ದಿನಗಳವರೆಗೆ ಶೋಕಿಸಿದರು.


ಊರೀಯನ ಮರಣವಾರ್ತೆಯನ್ನು ಅವನ ಹೆಂಡತಿ ಕೇಳಿ ಗಂಡನಿಗಾಗಿ ಅತ್ತು ಗೋಳಾಡಿದಳು.


ದಾರಿಯಲ್ಲಿ ನಡೆವುದು ಅಪಾಯಕರವಾಗಿರುವುದು; ಹೂಬಿಟ್ಟ ಬಾದಾಮಿ ಮರದಂತೆ ತಲೆಗೂದಲು ನರೆತುಬಿಡುವುದು, ಮಿಡತೆಯು ಕೂಡ ಭಾರವಾಗುವುದು; ಆಸೆ ಕುಂದಿಹೋಗುವುದು. ನಿನ್ನ ನಿತ್ಯಗೃಹಕ್ಕೆ ತೆರಳಿರುವೆ, ಗೋಳಾಟದವರು ಬೀದಿಯಲ್ಲಿ ಕಾಣಿಸಿಕೊಳ್ಳುವರು.


ಅವರಲ್ಲಿ ಅತೀ ಶೂರರಾದವರು ಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ತೆಗೆದುಕೊಂಡು ಯಾಬೇಷಿಗೆ ಬಂದರು. ಅಲ್ಲಿ ಅವುಗಳನ್ನು ಏಲಾ ಮರದ ಕೆಳಗೆ ಸಮಾಧಿಮಾಡಿ ಏಳು ದಿನ ಉಪವಾಸ ಆಚರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು