ಆದಿಕಾಂಡ 50:15 - ಕನ್ನಡ ಸತ್ಯವೇದವು C.L. Bible (BSI)15 ತಂದೆ ಸತ್ತ ಬಳಿಕ ಜೋಸೆಫನ ಅಣ್ಣತಮ್ಮಂದಿರು, “ಜೋಸೆಫನು ಬಹುಶಃ ನಮ್ಮನ್ನು ದ್ವೇಷಿಸಿಯಾನು! ನಾವು ಅವನಿಗೆ ಮಾಡಿದ ಎಲ್ಲ ಹಾನಿಗೆ ಪ್ರತಿಯಾಗಿ ಶಿಕ್ಷಿಸಿಯಾನು,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು - ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ಪೂರಾ ಶಿಕ್ಷೆಯನ್ನು ಕೊಟ್ಟಾನು ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು ಯೋಸೇಫನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯಾಕೋಬನು ಸತ್ತಮೇಲೆ, ಯೋಸೇಫನ ಸಹೋದರರು ಕಳವಳಗೊಂಡರು. ಅವರು “ನಾವು ಮಾಡಿದ ಕಾರ್ಯಕ್ಕೆ ಯೋಸೇಫನು ಇನ್ನು ಮೇಲೆ ನಮ್ಮನ್ನು ದ್ವೇಷಿಸುವನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ತಮ್ಮ ತಂದೆ ಸತ್ತು ಹೋದ ಮೇಲೆ ಯೋಸೇಫನ ಸಹೋದರರು, “ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ, ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗಾಗಿ ನಿಶ್ಚಯವಾಗಿ ಪ್ರತೀಕಾರಮಾಡಬಹುದು,” ಎಂದುಕೊಂಡು, ಅಧ್ಯಾಯವನ್ನು ನೋಡಿ |