Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:17 - ಕನ್ನಡ ಸತ್ಯವೇದವು C.L. Bible (BSI)

17 ‘ನೀವು ಜೋಸೆಫನಿಗೆ - ನಿನ್ನ ಅಣ್ಣಂದಿರಾದ ನಾವು ನಿನಗೆ ಹಾನಿಮಾಡಿದ್ದೇನೋ ನಿಜ; ಆದರೂ ನಮ್ಮ ಅಪರಾಧವನ್ನು, ಪಾಪವನ್ನು ಕ್ಷಮಿಸು - ಎಂದು ಕೇಳಿಕೊಳ್ಳಬೇಕು, ಅವರು ಹೀಗೆ ವಿಧಿಸಿದ್ದರಿಂದ ನಾವು ಮಾಡಿದ ಅಪರಾಧವನ್ನು ಈಗ ನೀನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತಿದ್ದೇವೆ.” ಈ ಮಾತುಗಳನ್ನು ಕೇಳಿ ಜೋಸೆಫನು ಕಣ್ಣೀರು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ. ಆದರೂ ನಮ್ಮ ತಂದೆಯ ದೇವರನ್ನು ಆರಾಧಿಸುವವರು, ಸೇವಕರೂ ಆದ ನಮ್ಮ ಅಪರಾಧವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇವೆ” ಎಂದು ಯೋಸೇಫನ ಬಳಿ ಬೇಡಿಕೊಳ್ಳಿರಿ ಎಂದು ಹೇಳಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿನ್ನ ಅಣ್ಣಂದಿರಾದ ನಾವು ನಿನಗೆ ಕೇಡು ಮಾಡಿದ್ದು ನಿಜವೇ; ಆದರೂ ನಮ್ಮ ಅಪರಾಧವನ್ನೂ ಪಾಪವನ್ನೂ ಕ್ಷವಿುಸು ಎಂಬದಾಗಿ ಹೇಳಿಕೊಳ್ಳಬೇಕು; ಹೀಗೆ ಅವನು ಅಪ್ಪಣೆಮಾಡಿದ್ದರಿಂದ ನೀನು ಈಗ ನಿನ್ನ ತಂದೆಯ ದೇವರಿಗೆ ಭಕ್ತರಾಗಿರುವ ನಾವು ಮಾಡಿದ ಅಪರಾಧವನ್ನು ಕ್ಷವಿುಸಬೇಕೆಂದು ಬೇಡಿಕೊಳ್ಳುತ್ತೇವೆಂದು ಹೇಳಿಕಳುಹಿಸಿದರು. ಯೋಸೇಫನು ಈ ಮಾತುಗಳನ್ನು ಕೇಳಿ ಕಣ್ಣೀರು ಸುರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ಯೋಸೇಫನಿಗೆ, ಈ ಸಂದೇಶವನ್ನು ಕೊಡಬೇಕು, ‘ನಾವು ಮಾಡಿದ್ದು ಕೆಟ್ಟಕಾರ್ಯವೇ ನಿಜ. ಅದಕ್ಕಾಗಿ ನೀನು ಅವರನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತಿದ್ದೇನೆ.’ ಆದ್ದರಿಂದ ನಾವು ಮಾಡಿದ ಕೆಟ್ಟಕಾರ್ಯಕ್ಕಾಗಿ ನೀನು ನಮ್ಮನ್ನು ಕ್ಷಮಿಸಬೇಕು. ನಾವು ನಿನ್ನ ತಂದೆಯ ದೇವರಿಗೆ ಸೇವಕರಾಗಿದ್ದೇವೆ” ಎಂದು ಹೇಳಿದರು. ಈ ವಿಷಯಗಳನ್ನು ಕೇಳಿ ಅವನು ದುಃಖದಿಂದ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ‘ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು,’ ಎಂಬುದಾಗಿ ಯೋಸೇಫನಿಗೆ ಹೇಳಿರಿ, ಎಂದು ತಿಳಿಸಿದ್ದಾನೆ. ಹೀಗಿರುವುದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ದಯಮಾಡಿ ಕ್ಷಮಿಸು,” ಎಂದು ತಿಳಿಸಿದರು. ಈ ಸಂದೇಶ ಅವನಿಗೆ ಬಂದಾಗ, ಅವನು ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:17
24 ತಿಳಿವುಗಳ ಹೋಲಿಕೆ  

ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ತಂತ್ರೋಪಾಯಗಳ ಕಲ್ಪಿಸಿದರೂ ನಡೆಯದು I ಕೇಡನು ನಿನಗೆ ಬಗೆದರೂ ಅದು ಕೈಗೂಡದು II


ಹೀಗಾಯಿತು ನಿನ್ನ ತ0ದೆಯ‍‍ ದೇವರಿ0ದ ಸಿಗಲಿ ನಿನಗಾತನ ಸಹಾಯ ಹೀಗಾಯಿತು ಸರ್ವವಲ್ಲಭ ದೇವರಿ0ದ. ದೊರಕಲಿ ನಿನಗಾತನ ಆಶೀರ್ವಾದ. ಮೇಲಣ ಆಕಾಶದಿ0ದ, ಕೆಳಗಣ ಸಾಗರ ಸೆಲೆಗಳಿ0ದ ಸ್ತನ್ಯದಿ0ದ, ಗರ್ಭದಿ0ದ, ಆತ ನೀಡುವ ವರದಾನ.


ನನ್ನನ್ನು ಇಲ್ಲಿಗೆ ಕಳಿಸಿದವರು ನೀವಲ್ಲ, ದೇವರೇ. ಅವರು ನನ್ನನ್ನು ಫರೋಹನಿಗೆ ಮಂತ್ರಿಯಾಗಿಯೂ ಅವರ ಆಸ್ಥಾನಕ್ಕೆ ಅಧಿಪತಿಯಾಗಿಯೂ ಈಜಿಪ್ಟ್ ದೇಶಕ್ಕೆ ಸರ್ವಾಧಿಕಾರಿಯಾಗಿಯೂ ಮಾಡಿದ್ದಾರೆ.


ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.


ಈ ನಿಯಮವನ್ನು ಅನುಸರಿಸುವ ಎಲ್ಲರಿಗೂ, ಅಂದರೆ ನಿಜ ಇಸ್ರಯೇಲರಾದ ದೇವಜನರೆಲ್ಲರಿಗೂ ಶಾಂತಿಸಮಾಧಾನವೂ ಕೃಪಾಶೀರ್ವಾದವೂ ಲಭಿಸಲಿ!


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಯಕೋಬ ಯೊವಾನ್ನರ ಮೇಲೆ ಸಿಟ್ಟುಗೊಂಡರು.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


“ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು.


ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.


ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದರು. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ.


ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.


ಆದುದರಿಂದ ಜೋಸೆಫನಿಗೆ ಹೀಗೆಂದು ಹೇಳಿಕಳಿಸಿದರು: “ನಿನ್ನ ತಂದೆ ಸಾಯುವುದಕ್ಕೆ ಮುಂಚೆ ನಮಗೆ ಅಪ್ಪಣೆಮಾಡಿದ್ದೇನೆಂದರೆ -


ಇದೂ ಅಲ್ಲದೆ, ಅಣ್ಣಂದಿರು ತಾವೇ ಬಂದು ಅವನಿಗೆ ಅಡ್ಡಬಿದ್ದರು. “ಇಗೋ, ನಾವು ನಿನಗೆ ಗುಲಾಮರು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು