ಆದಿಕಾಂಡ 50:19 - ಕನ್ನಡ ಸತ್ಯವೇದವು C.L. Bible (BSI)19 ಆದರೆ ಜೋಸೆಪನು ಅವರಿಗೆ, “ಹೆದರಬೇಡಿ; ನಾನು ದೇವರ ಸ್ಥಾನದಲ್ಲಿ ಇಲ್ಲ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೋಸೇಫನು ಅವರಿಗೆ, “ಹೆದರಬೇಡಿರಿ, ನಾನೇನು ದೇವರ ಸ್ಥಾನದಲ್ಲಿ ಇದ್ದೇನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೋಸೇಫನು ಅವರಿಗೆ - ಹೆದರಬೇಡಿರಿ; ನಾನೇನು ದೇವರ ಪ್ರತಿನಿಧಿಯೇ? ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದ್ದಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಯೋಸೇಫನು ಅವರಿಗೆ, “ಭಯಪಡಬೇಡಿ. ನಾನು ದೇವರಲ್ಲ; ನಿಮ್ಮನ್ನು ಶಿಕ್ಷಿಸಲು ನನಗೆ ಅಧಿಕಾರವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೋಸೇಫನು ಅವರಿಗೆ, “ಭಯಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ? ಅಧ್ಯಾಯವನ್ನು ನೋಡಿ |
ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.