ಆದಿಕಾಂಡ 50:20 - ಕನ್ನಡ ಸತ್ಯವೇದವು C.L. Bible (BSI)20 ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದರು. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆದರೆ ದೇವರು ಮೇಲಾಗಬೇಕೆಂದು ಸಂಕಲ್ಪಿಸಿದನು. ಈಗ ಅನುಭವಕ್ಕೆ ಬಂದ ಪ್ರಕಾರವೇ ಅನೇಕ ಪ್ರಾಣಿಗಳಿಗೆ ಸಂರಕ್ಷಣೆಯುಂಟಾಗುವಂತೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೀವು ನನಗೆ ಕೇಡುಮಾಡಲು ಯೋಚಿಸಿದಿರಿ. ಆದರೆ ದೇವರು ಒಳ್ಳೆಯದನ್ನೇ ಮಾಡಿದನು. ಬಹಳ ಜನರ ಪ್ರಾಣವನ್ನು ಉಳಿಸುವುದಕ್ಕಾಗಿ ನನ್ನನ್ನು ಬಳಸಿಕೊಳ್ಳುವುದು ದೇವರ ಯೋಜನೆಯಾಗಿತ್ತು. ಈಗಲೂ ಆತನದು ಅದೇ ಯೋಜನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ. ಅಧ್ಯಾಯವನ್ನು ನೋಡಿ |