Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:25 - ಕನ್ನಡ ಸತ್ಯವೇದವು C.L. Bible (BSI)

25 ಇದೂ ಅಲ್ಲದೆ ಜೋಸೆಫನು ಆ ಇಸ್ರಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಕಾಪಾಡಲು ಬರುವರು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು,” ಎಂದು ಹೇಳಿ, “ಹಾಗೆಯೇ ಮಾಡುತ್ತೇನೆ,” ಎಂಬುದಾಗಿ ಅವರಿಂದ ಪ್ರಮಾಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ - ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕೆಂದು ಹೇಳಿ, ಹಾಗೆಯೇ ಮಾಡುತ್ತೇವೆಂಬದಾಗಿ ಅವರಿಂದ ಪ್ರಮಾಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ದೇವರು ನಿಮ್ಮನ್ನು ಈ ದೇಶದಿಂದ ಹೊರಗೆ ನಡೆಸಿದಾಗ ನನ್ನ ಮೂಳೆಗಳನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗುವಿರೆಂದು ಪ್ರಮಾಣ ಮಾಡಿ” ಎಂದು ಹೇಳಿ ಅವರಿಂದ ಪ್ರಮಾಣ ಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಶ್ಚಯವಾಗಿ ನಿಮಗೆ ಸಹಾಯ ಮಾಡುವರು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಬೇಕು,” ಎಂದು ಪ್ರಮಾಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:25
10 ತಿಳಿವುಗಳ ಹೋಲಿಕೆ  

ಇಸ್ರಯೇಲರು ಈಜಿಪ್ಟಿನಿಂದ ತಂದ ಜೋಸೆಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯ ಕೊಟ್ಟು ಕೊಂಡುಕೊಂಡಿದ್ದನು. ಅದು ಜೋಸೆಫ್ಯರ ಸೊತ್ತಾಗಿತ್ತು.


ಇದಲ್ಲದೆ ಜೋಸೆಫನು ಇಸ್ರಯೇಲರಿಗೆ, “ಖಂಡಿತವಾಗಿ ದೇವರು ನಿಮ್ಮ ನೆರವಿಗೆ ಬರುವರು; ತಮ್ಮ ವಾಗ್ದಾನವನ್ನು ಈಡೇರಿಸುವರು. ನೀವು ಹೋಗುವಾಗ ನನ್ನ ಶವವನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಹೇಳಿ ಅವರಿಂದ ದೃಢಪ್ರಮಾಣ ಮಾಡಿಸಿದ್ದನು. ಆದುದರಿಂದಲೆ ಮೋಶೆ ಅವನ ಶವವನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.


ವಿಶ್ವಾಸದಿಂದಲೇ ಜೋಸೆಫನು, ತಾನು ಸಾಯುವ ಗಳಿಗೆಯು ಸಮೀಪಿಸಿದಾಗ, ಇಸ್ರಯೇಲಿನ ಜನರು ಈಜಿಪ್ಟಿನಿಂದ ಹೊರಬರುವುದನ್ನು ಸೂಚಿಸಿದನು. ಅಲ್ಲದೆ, ತನ್ನ ಶವಸಂಸ್ಕಾರದ ಬಗ್ಗೆ ಆದೇಶ ನೀಡಿದನು.


ಅವರ ಅವಶೇಷಗಳನ್ನು ಮರಳಿ ಶೇಕೆಮಿಗೆ ಕೊಂಡೊಯ್ಯಲಾಯಿತು. ಅಲ್ಲಿ ಹಾಮೋರ್ ಎಂಬವನ ಮಕ್ಕಳಿಂದ ಅಬ್ರಹಾಮನು ಕ್ರಯಕ್ಕೆ ಕೊಂಡುಕೊಂಡಿದ್ದ ಸಮಾಧಿಯಲ್ಲಿ ಹೂಳಿದರು.


ನನ್ನ ತಂದೆಯವರು ತಾವು ಕಾನಾನ್ ನಾಡಿನಲ್ಲಿ ಸಿದ್ಧಮಾಡಿಕೊಂಡಿರುವ ಸ್ಥಳದಲ್ಲಿಯೇ ತಮಗೆ ಸಮಾಧಿಮಾಡಬೇಕೆಂದು ಸಾಯುವುದಕ್ಕೆ ಮೊದಲೇ ನನ್ನಿಂದ ಪ್ರಮಾಣ ಮಾಡಿಸಿದರು. ಆದ್ದರಿಂದ ನಾನು ಹೋಗಿ ತಂದೆಯನ್ನು ಸಮಾಧಿಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ವಿನಂತಿಸುತ್ತಿದ್ದೇನೆ,” ಎಂದನು.


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ಇಸ್ರಯೇಲರು ಯುದ್ಧಸನ್ನದ್ಧ ಆಗಿಯೇ ಈಜಿಪ್ಟಿನಿಂದ ಹೊರಟರು.


ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ತನ್ನ ನಾಡಿನಲ್ಲಿ ಒಳ್ಳೆಯ ಮಳೆ ಬೆಳೆಗಳಾಗಿವೆ ಎಂಬ ಸಮಾಚಾರ ಮೋವಾಬ್ ನಾಡಿನಲ್ಲಿದ್ದ ನವೊಮಿಗೆ ತಿಳಿದು ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು